ಪ್ರೋತ್ಸಾಹ, ನಿರಂತರ ಪರಿಶ್ರಮವೇ ಸಾಧನೆಗೆ ಸ್ಪೂರ್ತಿ: ಉಮೇಶ್ ಪುದುವಾಳ್

KannadaprabhaNewsNetwork |  
Published : Sep 23, 2024, 01:19 AM IST
ಿುು | Kannada Prabha

ಸಾರಾಂಶ

ಶೃಂಗೇರಿ, ಉತ್ತಮ ಸಾಧನೆಗೆ ಕಠಿಣ ಪರಿಶ್ರಮವಿರಬೇಕು. ಪ್ರೋತ್ಸಾಹ, ಪ್ರೇರಣೆ ನಿರಂತರ ಪರಿಶ್ರಮವೇ ಸಾಧನೆಗೆ ಸ್ಪೂರ್ತಿಯಾಗುತ್ತದೆ ಎಂದು ಶೃಂಗೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಮಂಡಳಿ ಕಾರ್ಯಾಧ್ಯಕ್ಷ ಉಮೇಶ್ ಪುದುವಾಳ್ ಹೇಳಿದರು.

ಟ್ಟಣದ ಸರ್ಕಾರಿ ಪದವಿ ಪೂರ್ವಕಾಲೇಜಿನ ಜಿಲ್ಲಮಟ್ಟದ ಕ್ರೀಡಾಕೂಟ

ಕನ್ನಡಪ್ರಭ ವಾರ್ತೆ, ಶೃಂಗೇರಿ

ಉತ್ತಮ ಸಾಧನೆಗೆ ಕಠಿಣ ಪರಿಶ್ರಮವಿರಬೇಕು. ಪ್ರೋತ್ಸಾಹ, ಪ್ರೇರಣೆ ನಿರಂತರ ಪರಿಶ್ರಮವೇ ಸಾಧನೆಗೆ ಸ್ಪೂರ್ತಿಯಾಗುತ್ತದೆ ಎಂದು ಶೃಂಗೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಮಂಡಳಿ ಕಾರ್ಯಾಧ್ಯಕ್ಷ ಉಮೇಶ್ ಪುದುವಾಳ್ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವಕಾಲೇಜಿನಲ್ಲಿ ಆಯೋಜಿಸಿದ್ದ ಜಿಲಾಮಟ್ಟದ ಕ್ರೀಡಾಕೂಟದಲ್ಲಿ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾಗಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ಪ್ರಶಸ್ತಿ ವಿತರಿಸಿ ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ಕಲಿಕೆ ದಿನಗಳಲ್ಲಿ ಪಠ್ಯಚಟುವಟಿಕೆಗಳ ಜೊತೆಗೆ ಕ್ರೀಡಾಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಸೋಲು ಗೆಲವು ಮುಖ್ಯ ವಲ್ಲ ಸ್ಪರ್ಧೆಮುಖ್ಯ. ಕ್ರೀಡೆಗಳಿಂದ ಶಾರೀರಿಕ ಜೊತೆಗೆ ಮಾನಸಿಕ ಸದೃಡತೆಯಾಗುತ್ತದೆ. ಕ್ರೀಡಾಪಟುಗಳಿಗೆ ಉತ್ತಮ ತರಬೇತಿ ಅವಶ್ಯಕತೆ ಯಿದೆ. ಮಲೆನಾಡಿನಲ್ಲಿ ಮಳೆಗಾಲದಲ್ಲಿ ಕ್ರೀಡಾಕೂಟ ನಡೆಸುವುದರಿಂದ ಸ್ವಲ್ಪ ತೊಂದರೆಯಾಗುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯ ಅರುಣ್ ಕುಮಾರ್ ವಿದ್ಯಾರ್ಥಿಗಳು ಸಿಗುವ ಕ್ರೀಡಾ ಸೌಲಭ್ಯವನ್ನು ಸದ್ಭಳಕೆ ಮಾಡಿಕೊಂಡು ಉತ್ತಮ ಸಾಧನೆ ಮಾಡಬೇಕು. ಶಾಲೆಗೆ, ಶಿಕ್ಷಕರಿಗೆ, ಪೋಷಕರಿಗೆ ಒಳ್ಳೆ ಹೆಸರು ತರುವ ಕೆಲಸ ಮಾಡಬೇಕು. ಜೀವನದಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ ಬೆಳೆಸಿಕೊಳ್ಳಬೇಕು ಎಂದರು.

ಕಾಲೇಜಿನ ಕ್ರೀಡಾ ಕಾರ್ಯದರ್ಶಿ ಡಾ. ಶ್ರೀಮಂದಾರ ಮಾತನಾಡಿ ಕೇಂದ್ರ ರಾಜ್ಯ ಸರ್ಕಾರಗಳು ಕ್ರೀಡೆಗಳಲ್ಲಿ ವಿಶೇಷ ಸಾಧನೆ ಮಾಡಿದ ಸಾಧಕರಿಗೆ ಸರ್ಕಾರಿ ನೌಕರಿಗಳಲ್ಲಿ ಶೇ. 2 ರಷ್ಟು ವಿಶೇಷ ಮೀಸಲಾತಿ ಸೌಲಭ್ಯವಿದ್ದು, ವಿದ್ಯಾರ್ಥಿಗಳು ಅದರ ಸದ್ಭಳಕೆ ಮಾಡಬೇಕು ಎಂದರು. ಉಪನ್ಯಾಸಕರಾದ ಮಹೇಶ್ ಕಾಕತ್ಕರ್, ಸ್ಮಿತಾ, ಕವಿತಾ, ಅಮಿತಾ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಕೆ.ಎಲ್. ಗೋಪಾಲಕೃಷ್ಣ ಮತ್ತಿತರರು ಇದ್ದರು.

22 ಶ್ರೀ ಚಿತ್ರ 1-

ಶೃಂಗೇರಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗಳಿಗೆ ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು.

PREV

Recommended Stories

ಬಿಆರ್‌ಎಲ್ ಆಧುನಿಕ ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಚಿರಕಾಲ ಉಳಿಯುವ ಆಪ್ತಭಾವದ ಕವಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌