ಜಿಲ್ಲೆಯ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಪ್ರೋತ್ಸಾಹ

KannadaprabhaNewsNetwork |  
Published : Oct 30, 2025, 03:00 AM IST
ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಪ್ರೊತ್ಸಾಹ: ಸಂಸದೆ ಡಾ.ಸುಧಾಮೂರ್ತಿ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಕ್ರೀಡೆ ಹಾಗೂ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆಯುವ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಮೂಲ ಸೌಕರ್ಯಗಳನ್ನು ಒದಗಿಸುವ ಮೂಲಕ ಪ್ರೋತ್ಸಾಹಿಸಲಾಗುವುದು ಎಂದು ರಾಜ್ಯಸಭಾ ಸಂಸದೆ ಡಾ.ಸುಧಾಮೂರ್ತಿ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಕ್ರೀಡೆ ಹಾಗೂ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆಯುವ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಮೂಲ ಸೌಕರ್ಯಗಳನ್ನು ಒದಗಿಸುವ ಮೂಲಕ ಪ್ರೋತ್ಸಾಹಿಸಲಾಗುವುದು ಎಂದು ರಾಜ್ಯಸಭಾ ಸಂಸದೆ ಡಾ.ಸುಧಾಮೂರ್ತಿ ಹೇಳಿದರು.

ನಗರದ ಸೋಲಾಪುರ ರಸ್ತೆಯ ಯುವ ಸಬಲೀಕರಣ ಮತ್ತು ಕ್ರೀಡಾ ನಿಲಯದಲ್ಲಿ ಸಂಸದರ ಪ್ರದೇಶಾಭಿವೃದ್ದಿ ಯೋಜನೆಯಡಿ ₹ 2 ಕೋಟಿ ಅನುದಾನದಲ್ಲಿ ನಿರ್ಮಿಸಲಾಗುತ್ತಿರುವ ಜಿಲ್ಲಾ ಕ್ರೀಡಾ ಶಾಲೆ, ವಸತಿ ನಿಲಯದ ಕಟ್ಟಡಕ್ಕೆ ಹಮ್ಮಿಕೊಂಡಿದ್ದ ಭೂಮಿಪೂಜೆ ಸಮಾರಂಭದಲ್ಲಿ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು. ಕ್ರೀಡಾಪಟುಗಳಿಗೆ ಅತ್ಯಾಧುನಿಕ ಸಲಕರಣೆಯೊಂದಿಗೆ ಅತ್ಯುತ್ತಮ ತರಬೇತಿ ನೀಡಿ ಪ್ರೋತ್ಸಾಹಿಸುವ ಅವಶ್ಯಕತೆ ಇದೆ. ಸಂಸದರ ಅನುದಾನದಡಿಯಲ್ಲಿ ಉತ್ತಮ ಗುಣಮಟ್ಟದ ಸೈಕ್ಲಿಂಗ್ ಹಾಗೂ ವಾಲಿಬಾಲ್, ಬಾಸ್ಕೆಟ್‌ಬಾಲ್ ವಸತಿ ನಿಲಯಗಳನ್ನು ನಿರ್ಮಿಸಲಾಗುವುದು. ಇದರಿಂದ ಕ್ರೀಡಾಪಟುಗಳಿಗೆ ಪ್ರೊತ್ಸಾಹ ದೊರೆತು ಉತ್ತಮ ಸಾಧನೆಗೈಯ್ಯಲು ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಅತ್ಯಾಧುನಿಕ ಉಪಕರಣ, ಜೊತೆಗೆ ಕ್ರೀಡಾ ವಸತಿ ನಿಲಯದಲ್ಲಿ ಸೈಕ್ಲಿಂಗ್ ಮತ್ತು ಬಾಸ್ಕೆಟ್‌ ಬಾಲ್, ವಾಲಿಬಾಲ್ ಮೈದಾನ ನಿರ್ಮಿಸಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ಆನಂದ.ಕೆ ಮಾತನಾಡಿ, ಶೀಘ್ರದಲ್ಲೇ ಸೈಕ್ಲಿಂಗ್ ವೆಲೋಡ್ರೋಂ ಉದ್ಘಾಟಿಸಲಾಗುವುದು. ಜಿಲ್ಲೆಯ ಕ್ರೀಡಾ ಅಭಿವೃದ್ದಿಗೆ ಪೂರಕ ವಾತಾವರಣ ನಿರ್ಮಿಸಿ ಕ್ರೀಡಾಪಟುಗಳನ್ನು ಪ್ರೊತ್ಸಾಹಿಸಲಾಗುವುದು. ಸುಧಾಮೂರ್ತಿ ಅವರು ಸಹ ಜಿಲ್ಲೆಯ ಕ್ರೀಡಾ ಅಭಿವೃದ್ದಿಗೆ ಸಾಕಷ್ಟು ನೆರವು ಒದಗಿಸಿದ್ದು, ಸರ್ಕಾರ ಸಹ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಅನೇಕ ಅಭಿವೃದ್ದಿಪರ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ಡಾ.ಜಾವೀದ ಜಮಾದಾರ, ಜಿಲ್ಲಾ ವಾಲಿಬಾಲ್ ಸಂಸ್ಥೆ ಅಧ್ಯಕ್ಷ ಭೀಮಸೇನ ಕೋಕರೆ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ, ರಾಜ್ಯ ಸೈಕ್ಲಿಂಗ್ ಸಂಸ್ಥೆ ಚೇರಮನ್ ರಾಜು ಬಿರಾದಾರ, ಜಿಲ್ಲಾ ಅಥ್ಲೆಟಿಕ್ ಸಂಸ್ಥೆ ಅಧ್ಯಕ್ಷ ಎಸ್.ಎಸ್.ಹಿರೇಮಠ, ವೇಟ್ ಲಿಫ್ಟಿಂಗ್ ಅಸೋಸಿಯೇಶನ್ ಕಾರ್ಯದರ್ಶಿ ಚಂದ್ರಕಾಂತ ತಾರನಾಳ, ಯೋಜನಾ ನಿರ್ದೇಶಕ ಆಕಾಶ ತಿಮ್ಮಶೆಟ್ಟಿ, ಜಿ.ಎಂ.ಮಲ್ಜಿ, ಕಚೇರಿ ಅಧೀಕ್ಷಕಿ ಪ್ರಿಯಾಂಕ ಹಾಗೂ ವಿವಿಧ ಕ್ರೀಡಾ ತರಬೇತುದಾರರು, ವಸತಿ ನಿಲಯದ ಕ್ರೀಡಾಪಟುಗಳು ಉಪಸ್ಥಿತರಿದ್ದರು. ಎಂ.ವೈ.ಚಿಂಚಲಿ ಸ್ವಾಗತಿಸಿದರು. ತರಬೇತುದಾರೆ ಅಲ್ಕಾ ಫಡತರೆ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ