ಕೊಡಗು ಗೌಡ ಸಮಾಜಗಳ ಒಕ್ಕೂಟದ ವತಿಯಿಂದ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರಿಗೆ ಅಭಿನಂದನಾ ಸಮಾರಂಭ ನಡೆಯಿತು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು ಗೌಡ ಸಮಾಜಗಳ ಒಕ್ಕೂಟದ ವತಿಯಿಂದ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರಿಗೆ ಅಭಿನಂದನಾ ಸಮಾರಂಭ ನಡೆಯಿತು.ಮಡಿಕೇರಿಯ ಗೌಡ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು ಮುಂದಿನ ದಿನಗಳಲ್ಲಿ ಗೌಡ ಸಮಾಜದ ಚಟುವಟಿಕೆಗಳಿಗೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಅವರು ಗೌಡ ಸಮಾಜದ ಪ್ರಗತಿಗೆ ಶಾಸಕ ಡಾ.ಮಂತರ್ ಗೌಡ ಸಹಕಾರ ಸ್ಮರಿಸಿದರು.ಒಕ್ಕೂಟದ ಒಂದು ವರ್ಷದ ಸಾಧನೆಯ ಸಂಚಿಕೆ ‘ಆರೋಹಣ’ ಬಿಡುಗಡೆಗೊಳಿಸಿ ವಿಧಾನಸಭೆಯ ಮಾಜಿ ಅಧ್ಯಕ್ಷ ಕೊಂಬಾರನ ಜಿ.ಬೋಪಯ್ಯ ಮಾತನಾಡಿದರು.ಒಕ್ಕೂಟದ ಉಪಾಧ್ಯಕ್ಷ ಡಾ.ತೇನನ ರಾಜೇಶ್, ಕಾರ್ಯದರ್ಶಿ ಪೇರಿಯನ ಕೆ.ಉದಯ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಬೆಂಗಳೂರು ಮೈಸೂರು ಭಾಗದ ಸದಸ್ಯ ಗೌಡ ಸಮಾಜಗಳು, ಸಂಘಟನೆಗಳು, ಗೌಡ ಯುವ ವೇದಿಕೆ, ಯುವ ಸಂಘಗಳು, ಮಹಿಳಾ ಸಂಘಗಳು, ಗೌಡ ವಿದ್ಯಾ ಸಂಘ, ಗೌಡ ಸಮಾಜಗಳ ಅಧ್ಯಕ್ಷರು, ಕಾರ್ಯಕಾರಿ ಮಂಡಳಿ ಸದಸ್ಯರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.