ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಸಿಡ್ಬಿ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಹಾಗೂ ಕಾಸಿಯಾ ಸಹಯೋಗದಲ್ಲಿ ಆಯೋಜಿಸಿದ್ದ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಹಾಗೂ ಹಣಕಾಸಿನ ನೆರವು ಅರಿವು ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರೈಲ್ವೆ, ಏರೋನಾಟಿಕ್ಸ್ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಶಿವಮೊಗ್ಗದಿಂದ ಆಟೋಮೊಬೈಲ್ ಉತ್ಪನ್ನಗಳು ಸರಬರಾಜು ಆಗುತ್ತಿದ್ದು, ಇನ್ನಷ್ಟು ಶಕ್ತಿ ಬೇಕಿದೆ. ಹೊಸ ಕೈಗಾರಿಕೆಗಳಿಗೆ ಸ್ಥಳದ ಕೊರತೆ ನೀಗಿಸಿ, ಯುವ ಉತ್ಸಾಹಿಗಳಿಗೆ ಕೈಗಾರಿಕೆ ಆರಂಭಿಸಲು ಪ್ರೋತ್ಸಾಹ ನೀಡಬೇಕು. ಜಿಲ್ಲೆಯಲ್ಲಿ ಕೈಗಾರಿಕೆಗಳಿಗೆ ಹೆಚ್ಚಿನ ಬೆಂಬಲ ನೀಡಬೇಕು ಎಂದು ತಿಳಿಸಿದರು.ಕಾಸಿಯಾ ಅಧ್ಯಕ್ಷ ಸಿ.ಎ. ಶಶಿಧರ ಶೆಟ್ಟಿ ಮಾತನಾಡಿ, ಎರಡು ದಿನಗಳ ಮಾರಾಟಗಾರರ ಅಭಿವೃದ್ಧಿ ಕಾರ್ಯಕ್ರಮ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಪ್ರಥಮ ಬಾರಿಗೆ ಶಿವಮೊಗ್ಗದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಎಲ್ಲ ಕೈಗಾರಿಕಾ ಉದ್ಯಮಿಗಳು, ವ್ಯಾಪಾರಸ್ಥರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂದರು.
ಪ್ರಮುಖರಾದ ಡಿ.ಎಂ. ಶಂಕರಪ್ಪ, ಎಚ್.ಕೆ. ಮಲ್ಲೇಶ್ ಗೌಡ, ಜಿ.ವಿಜಯ್‌ಕುಮಾರ್, ರಮೇಶ್ ಹೆಗ್ಡೆ, ಎಂ.ಜಿ. ರಾಜಗೋಪಾಲ್, ಜಿ.ವಿ. ಕಿರಣ್‌ಕುಮಾರ್, ವಿಶ್ವೇಶ್ವರಯ್ಯ, ದಿನೇಶ್ ಮತ್ತಿತರರು ಉಪಸ್ಥಿತರಿದ್ದರು.
- - --23ಎಸ್‌ಎಂಜಿಕೆಪಿ02: ಕಾರ್ಯಕ್ರಮದಲ್ಲಿ ಕಾಸಿಯಾ ಅಧ್ಯಕ್ಷ ಸಿ.ಎ.ಶಶಿಧರ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.