ಮಾಗಡಿ: ಗ್ರಾಮೀಣ ಕ್ರೀಡೆ ಕಬಡ್ಡಿ ಆಟಗಾರರಿಗೆ ಹೆಚ್ಚಿನ ತರಬೇತಿ ಸಿಕ್ಕರೆ ತಾಲೂಕಿನಲ್ಲಿ ಉತ್ತಮ ಕ್ರೀಡಾಪಟುಗಳನ್ನು ತಯಾರು ಮಾಡಬಹುದು ಎಂದು ಜೆಡಿಎಸ್ ಹಿರಿಯ ಮುಖಂಡ ದಾವಣಗೆರೆ ಚಂದ್ರು ಹೇಳಿದರು.
ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಜಗನ್ನಾಥ್ ಗೌಡ ಮಾತನಾಡಿ, ಗಣೇಶೋತ್ಸವದ ಅಂಗವಾಗಿ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾವಳಿ ಆಯೋಜಿಸುವ ಮೂಲಕ ಕ್ರೀಡೆಗೆ ಪ್ರೋತ್ಸಾಹ ನೀಡಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆಯಿಂದ ಕಬಡ್ಡಿ ಕ್ರೀಡಾಪಟುಗಳು ಭಾಗವಹಿಸಿದ್ದು ಪಂದ್ಯಾವಳಿಯಲ್ಲಿ ಗೆಲುವು ಸೋಲು ಸಹಜ ಪಂದ್ಯಾವಳಿಯಲ್ಲಿ ಭಾಗವಹಿಸುವುದು ಮುಖ್ಯ. ತಾಲೂಕಿನಲ್ಲಿ ರಾಜ್ಯಮಟ್ಟದ ಪಂದ್ಯಾವಳಿ ನಡೆಯುವ ಮೂಲಕ ಪ್ರೋತ್ಸಾಹ ಸಿಗಲಿ ಎಂದು ತಿಳಿಸಿದರು.
ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಹತ್ತಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದು ರಾಮನಗರ ತಂಡ ಪ್ರಥಮ ಸ್ಥಾನ ಪಡೆದಿದ್ದು, ಪ್ರಥಮ ಬಹುಮಾನವಾಗಿ ಟಗರು ಮತ್ತು ಟ್ರೋಫಿ ನೀಡಲಾಯಿತು. ರನ್ನರ್ ಆಗಿ ಪಿ.ಸಿ.ಪಾಳ್ಯದ ತಂಡಕ್ಕೆ 7501 ನಗದು ಹಾಗೂ ಟ್ರೋಫಿ ನೀಡಿ ಗೌರವಿಸಲಾಯಿತು.ಇದೇ ವೇಳೆ ವ್ಯಾಸರಾಯನಪಳ್ಯದ ಗ್ರಾಮಸ್ಥರು ಹಾಗೂ ಹಿರಿಯ ಮುಖಂಡರು ಭಾಗವಹಿಸಿದ್ದರು.
(ಫೋಟೋ ಕ್ಯಾಪ್ಷನ್)ಮಾಗಡಿ ತಾಲೂಕಿನ ವ್ಯಾಸರಾಯನಪಾಳ್ಯ ಗ್ರಾಮದಲ್ಲಿ ಶ್ರೀ ವಿನಾಯಕ ಯುವಕರ ಕಲಾ ಹಾಗೂ ಕ್ರೀಡಾ ಸಂಘದ ವತಿಯಿಂದ 32ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾವಳಿ ಕಾರ್ಯಕ್ರಮಕ್ಕೆ ಜೆಡಿಎಸ್ ಹಿರಿಯ ಮುಖಂಡ ದಾವಣಗೆರೆ ಚಂದ್ರು ಚಾಲನೆ ನೀಡಿದರು.