ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿ: ಅನಿಲ್‌ ಕುಮಾರ್‌

KannadaprabhaNewsNetwork |  
Published : Jul 29, 2026, 02:45 AM IST
28ಮಿಲಾಗ್ರಿಸ್ | Kannada Prabha

ಸಾರಾಂಶ

ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಮಾದಕ ವಸ್ತು ವಿರೋಧಿ ಸಮಿತಿ, ಆಂತರಿಕ ಗುಣಮಟ್ಟ ಭರವಸೆ ಸಮಿತಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಆಶ್ರಯದಲ್ಲಿ ಕಾಲೇಜಿನ ಎ.ವಿ. ಸಭಾಂಗಣದಲ್ಲಿ ಮಾದಕ ವಸ್ತುಗಳ ದುರ್ವ್ಯಸನ ತಡೆ ಜಾಗೃತಿ ಕಾರ್ಯಕ್ರಮ ನಡೆಯಿತು.

ಉಡುಪಿ: ಇಲ್ಲಿನ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಮಾದಕ ವಸ್ತು ವಿರೋಧಿ ಸಮಿತಿ, ಆಂತರಿಕ ಗುಣಮಟ್ಟ ಭರವಸೆ ಸಮಿತಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಆಶ್ರಯದಲ್ಲಿ ಕಾಲೇಜಿನ ಎ.ವಿ. ಸಭಾಂಗಣದಲ್ಲಿ ಮಾದಕ ವಸ್ತುಗಳ ದುರ್ವ್ಯಸನ ತಡೆ ಜಾಗೃತಿ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವುದು ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಗಳಾಗಿ ಮಲ್ಪೆ ಪೋಲಿಸ್‌ ಠಾಣೆ ಎಸ್‌ಐ ಅನಿಲ್‌ ಕುಮಾರ್‌ ಭಾಗವಹಿಸಿದ್ದರು. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ದುಶ್ಚಟಗಳಿಂದ ದೂರವಿದ್ದು, ಉತ್ತಮ ಸ್ನೇಹ ಬಳಗ, ಕ್ರೀಡೆ ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.

ಮಾದಕ ವಸ್ತುಗಳ ಅಕ್ರಮ ಸಾಗಾಟ ಮತ್ತು ಬಳಕೆಗೆ ಸಂಬಂಧಿಸಿದ ಕಾನೂನು ಕ್ರಮಗಳ ಬಗ್ಗೆ ಮಾಹಿತಿ ನೀಡಿದ ಅವರು, ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ತಕ್ಷಣ ಪೊಲೀಸ್‌ ಇಲಾಖೆಗೆ ಮಾಹಿತಿ ನೀಡುವಂತೆ ವಿದ್ಯಾರ್ಥಿ ಗಳಿಗೆ ಮನವಿ ಮಾಡಿದರು. ಜಾಗೃತಿ ಮತ್ತು ಸಮಯೋಚಿತ ಸಹಾಯವು ಮಾದಕ ವ್ಯಸನ ತಡೆಗೆ ಪ್ರಮುಖ ಸಾಧನಗಳಾಗಿವೆ ಎಂದು ಒತ್ತಿ ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ವಿನ್ಸೆಂಟ್‌ ಆಳ್ವ ಅವರು ಸಭೆಯ ಅಧ್ಯಕ್ಷ ಸ್ಥಾನ ವಹಿಸಿದ್ದರು. ವಿದ್ಯಾರ್ಥಿಗಳನ್ನುದ್ದೇಶಿಸಿ, ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಬಗ್ಗೆ ತಿಳಿ ಹೇಳಿದರು. ಐಕ್ಯೂಎಸಿ ಸಂಯೋಜಕಿ ಶೈಲೆಟ್‌ ಮಥಾಯಸ್‌, ಎನ್ನೆಸ್ಸೆಸ್‌ ಅಧಿಕಾರಿಗಳಾದ ಡಾ. ಕ್ಲಾರಾ ಮಿನೇಜಸ್‌, ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದ್ವಿತೀಯ ಬಿಕಾಂ ವಿದ್ಯಾರ್ಥಿನಿ ತ್ರಿಷಾ ಕೆ.ಸಿ. ಸ್ವಾಗತಿಸಿ, ಡೇನಿಯಲ್‌ ಲೋಬೋ ವಂದಿಸಿದರು. ದ್ವಿತೀಯ ಬಿಸಿಎ ವಿದ್ಯಾರ್ಥಿ ಸುಮಿತ್‌ ನಿರೂಪಿಸಿದರು. ‌

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಕಿದಿಯೂರು ಕ್ರೆ.ಕೋ.ಆಪ್ ಸೊಸೈಟಿ ಕಿನ್ನಿಮುಲ್ಕಿ ಶಾಖೆ ಶುಭಾರಂಭ
ಹಾಸನ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂಲ್ಕಿಯ ಮಹಿಳೆ ಸಾವು