ಕನ್ನಡಪ್ರಭ ವಾರ್ತೆ ಮಾಲೂರು
ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು ಹೋಂಡಾ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಜೆ. ಎಸ್. ಎಸ್. ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಲಿತಾಲ್ಲೂಕು ಮಟ್ಟದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಕ್ರೀಡಾ ಮನೋಭಾವದಿಂದ ಸ್ಪರ್ಧಿಸಿ ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿದಾಗ ಕ್ರೀಡೆಗಳು ಆರೋಗ್ಯಕರವಾಗಿರುತ್ತದೆ. ತಾಲ್ಲೂಕು ಮಟ್ಟದಲ್ಲಿ ಜಯಗಳಿಸಿದ ತಂಡಗಳು ಜಿಲ್ಲೆ ಹಾಗೂ ರಾಜ್ಯ ಮಟ್ಟಕ್ಕೆ ತಲುಪಿ ತಾಲ್ಲೂಕಿಗೆ ಕೀರ್ತಿ ತರಬೇಕು ಎಂದು ಕ್ರೀಡಾ ಪಟುಗಳಿಗೆ ಶುಭ ಹಾರೈಸಿದರು.
ಶಾಸಕ ಕೆ.ವೈ.ನಂಜೇಗೌಡ, ಪೋಲಿಸ್ ಇನ್ಸ್ಪೆಕ್ಟರ್ ವಸಂತ್, ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಕ್ರೀಡಾ ಧ್ವಜಾರೋಹಣ, ಪಥಸಂಚಲನ, ಗೌರವ ರಕ್ಷಾ ಸ್ವೀಕಾರ ನಡೆಯಿತು. ತಂಡಗಳ ಪರಿಚಯವನ್ನು ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಸಿ.ಸುರೇಂದ್ರ ಗೌಡ ನಡೆಸಿಕೊಟ್ಟರು.