ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಮಾನಸಿಕ ಸದೃಢತೆ

KannadaprabhaNewsNetwork |  
Published : Nov 18, 2026, 01:15 AM IST
17ಕೆಆರ್ ಎಂಎನ್ 8.ಜೆಪಿಜಿರಾಮನಗರದ ಗುರುಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಚ್.ಎನ್.ಅಶೋಕ್ ಉದ್ಘಾಟಿಸಿದರು. | Kannada Prabha

ಸಾರಾಂಶ

ರಾಮನಗರ: ಇತ್ತಿಚಿನ ದಿನಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಯುವಜನಾಂಗದವರು ಭಾಗವಹಿಸುವಿಕೆ ಕ್ಷೀಣಿಸುತ್ತಿದೆ. ಶಿಕ್ಷಣದೊಂದಿಗೆ ಯುವಕ/ಯುವತಿಯರು ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಮಾನಸಿಕವಾಗಿ ಹೆಚ್ಚು ಸದೃಢವಾಗಿ ಉನ್ನತ ಜೀವನ ಶೈಲಿಯನ್ನು ರೂಪಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಎಚ್.ಎನ್. ಅಶೋಕ್ ಅಭಿಪ್ರಾಯಪಟ್ಟರು

ರಾಮನಗರ: ಇತ್ತಿಚಿನ ದಿನಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಯುವಜನಾಂಗದವರು ಭಾಗವಹಿಸುವಿಕೆ ಕ್ಷೀಣಿಸುತ್ತಿದೆ. ಶಿಕ್ಷಣದೊಂದಿಗೆ ಯುವಕ/ಯುವತಿಯರು ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಮಾನಸಿಕವಾಗಿ ಹೆಚ್ಚು ಸದೃಢವಾಗಿ ಉನ್ನತ ಜೀವನ ಶೈಲಿಯನ್ನು ರೂಪಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಎಚ್.ಎನ್. ಅಶೋಕ್ ಅಭಿಪ್ರಾಯಪಟ್ಟರು.

ನಗರದ ಗುರುಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮೈ ಭಾರತ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 2026-27ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜೀವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಕ್ರೀಡೆಗಳು ಅವಶ್ಯಕ. ಯುವಕ ಯುವತಿಯರು ಇತರರಿಗೆ ಸಹಾಯ ಮಾಡುವುದರ ಜತೆಗೆ ಸಮಾಜಕ್ಕೆ ಒಳ್ಳೆಯ ಕೊಡುಗೆ ನೀಡಬೇಕು. ಸಮಾಜಕ್ಕೆ ನಾವು ಏನು ಕೊಡುಗೆ ನೀಡುತ್ತೀವೆ ಎನ್ನುವುದಕ್ಕಿಂತ ಸಮಾಜಕ್ಕೆ ನಾವು ಏನು ಮಾಡಿದ್ದೇವೆ ಎನ್ನುವುದು ಮುಖ್ಯ. ಇತ್ತೀಚಿನ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಯುವ ಸಮುದಾಯದ ಭಾಗವಹಿಸುವಿಕೆ ಕಡಿಮೆಯಾಗುತ್ತಿದೆ. ಶಿಕ್ಷಣದ ಜೊತೆಗೆ ಶಿಕ್ಷಣೇತರ ಚಟುವಟಿಕೆಗಳಾದ ನೃತ್ಯ, ಗಾಯನ, ಕ್ರೀಡೆ ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಪದ್ಮಶ್ರೀ ಪುರಸ್ಕೃತರಾದ ಶ್ರೀ ಹಾಸನ ರಘು ಮಾತನಾಡಿ, ಕ್ರೀಡೆಗಳ ಜೊತೆಗೆ ಮಲ್ಲಂಕಬ, ದೊಣ್ಣೆವರಸೆ ಲಗೋರಿ ಇನ್ನೀತರೆ ದೇಸಿಯ ಕ್ರೀಡೆಗಳಲ್ಲಿ ಯುವಕ/ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು, ಯುವ ಪೀಳಿಗೆ ಮೊಬೈಲ್ ಗೆ ಬಲಿಯಾಗುತ್ತಿದ್ದು, ದೈಹಿಕ ಶ್ರಮ ಕಡಿಮೆಯಾಗುತ್ತಿದೆ. ಇಂತಹ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮಗಳು ಇಂದಿನ ಯುವ ಪೀಳಿಗೆಗೆ ಪೂರಕ ಕಾರ್ಯಕ್ರಮವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜನಪದ ಗೀತೆ, ಜನಪದ ನೃತ್ಯ, ನುಕ್ಕಾಡ್ ನಾಟಕ (ನಶಮುಕ್ತ ವಿಕಸಿತ್ ಭಾರತ) ಎಂಬ ಅದ್ಬುತ ವಿಷಯದ ಕುರಿತು ನಾಟಕ, ಚಿತ್ರಕಲೆ, ಕವಿತೆ ಬರೆಯುವುದು ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸುಮಾರು 300ರಕ್ಕೂ ಸ್ಪರ್ಧಾಳುಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ. ಸತೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಅನಿತಾ ಮತ್ತಿತರರು ಉಪಸ್ಥಿತರಿದ್ದರು.

17ಕೆಆರ್ ಎಂಎನ್ 8.ಜೆಪಿಜಿ

ರಾಮನಗರದ ಗುರುಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಚ್.ಎನ್.ಅಶೋಕ್ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ಪ್ರತಿಭೆ ಅನಾವರಣಕ್ಕೆ ಕಲಾಶ್ರೀ ಉತ್ತಮ ವೇದಿಕೆ: ಜಿಪಂ ಸಿಇಒ
ತೋಂಟದ ಸಿದ್ಧಲಿಂಗ ಶ್ರೀಗೆ ಮಕ್ಕಳ ಬಗ್ಗೆ ಅಪಾರ ಕಾಳಜಿ ಇತ್ತು: ಈಶಣ್ಣ ಬೆಟಗೇರಿ