ಕ್ರೀಡೆಗಳಲ್ಲಿ ತೊಡಗಿಕೊಳ್ಳುವುದರಿಂದ ಮಾನಸಿಕ ಒತ್ತಡ ನಿಯಂತ್ರಿಸಲು ಸಾಧ್ಯ-‍ವೆಂಕಟೇಶ‍ ಪಿ.

KannadaprabhaNewsNetwork |  
Published : Nov 04, 2026, 01:30 AM IST
ಸವಣೂರ ಪಟ್ಟಣದ ಶ್ರೀಮತಿ ಲಲಿತಾದೇವಿ ಗುರುಸಿದ್ಧಪ್ಪ ಸಿಂಧೂರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಏರ್ಪಡಿಸಿದ್ದ ಹಾವೇರಿ ವಿಶ್ವವಿದ್ಯಾಲಯದ 2026-27ನೇ ಸಾಲಿನ ಅಂತರ್ ಕಾಲೇಜ್ ಪುರುಷ ಮತ್ತು ಮಹಿಳಾ ಚೆಸ್ ಪಂದ್ಯಾವಳಿ ಹಾಗೂ ವಿಶ್ವವಿದ್ಯಾಲಯದ ತಂಡದ ಆಯ್ಕೆ ಪ್ರಕ್ರಿಯೆ ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ನಿರ್ದೇಶಕ ವೆಂಕಟೇಶ ಪಿ., ಉದ್ಘಾಟಿಸಿದರು. | Kannada Prabha

ಸಾರಾಂಶ

ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮಾನಸಿಕ ಒತ್ತಡವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸಾಧ್ಯ ಎಂದು ದೈಹಿಕ ಶಿಕ್ಷಣ ನಿರ್ದೇಶಕ ವೆಂಕಟೇಶ ಪಿ. ಅಭಿಪ್ರಾಯಪಟ್ಟರು.

ಸವಣೂರು: ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮಾನಸಿಕ ಒತ್ತಡವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸಾಧ್ಯ ಎಂದು ದೈಹಿಕ ಶಿಕ್ಷಣ ನಿರ್ದೇಶಕ ವೆಂಕಟೇಶ ಪಿ. ಅಭಿಪ್ರಾಯಪಟ್ಟರು.

ಪಟ್ಟಣದ ಶ್ರೀಮತಿ ಲಲಿತಾದೇವಿ ಗುರುಸಿದ್ಧಪ್ಪ ಸಿಂಧೂರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಹಾವೇರಿ ವಿಶ್ವವಿದ್ಯಾಲಯದ 2026-27ನೇ ಸಾಲಿನ ಅಂತರ್ ಕಾಲೇಜ್ ಪುರುಷ ಮತ್ತು ಮಹಿಳಾ ಚೆಸ್ ಪಂದ್ಯಾವಳಿ ಹಾಗೂ ವಿಶ್ವವಿದ್ಯಾಲಯದ ತಂಡದ ಆಯ್ಕೆ ಪ್ರಕ್ರಿಯೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಚೆಸ್ ಅನ್ನು ಜಾಣರ ಆಟ ಎಂದು ಕರೆಯಲಾಗುತ್ತದೆ. ಮಾನಸಿಕ ಸಮತೋಲನ ಕಾಯ್ದುಕೊಳ್ಳಲು ಸೋಲು-ಗೆಲುವಿನ ಚಿಂತೆ ಬಿಟ್ಟು ಇಂತಹ ಆಟಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದು ಅಗತ್ಯ. ಚೆಸ್‌ನಂತಹ ಕ್ರೀಡೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೂ ಸಹಕಾರಿಯಾಗಲಿವೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಪ್ರವೀಣ ಮಹಾಬಲೇಶ್ವರ ಆನಂದಕAದ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಚೆಸ್ ಕ್ರೀಡೆಯ ಮಹತ್ವ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ದೊರೆಯುವ ಪ್ರಯೋಜನಗಳ ಬಗ್ಗೆ ವಿವರಿಸಿದರು.

ಪಂದ್ಯಾವಳಿಯಲ್ಲಿ ಹಾವೇರಿ ವಿಶ್ವವಿದ್ಯಾಲಯ ವ್ಯಾಪ್ತಿಯ ವಿವಿಧ ಮಹಾವಿದ್ಯಾಲಯಗಳ ಪುರುಷ ಮತ್ತು ಮಹಿಳಾ ಚೆಸ್ ಆಟಗಾರರು ಪಾಲ್ಗೊಂಡು ತಮ್ಮ ಕ್ರೀಡಾ ಪ್ರತಿಭೆ ಪ್ರದರ್ಶಿಸಿದರು. ವಿಜೇತರಾದ ಆಟಗಾರರನ್ನು ವಿಶ್ವವಿದ್ಯಾಲಯದ ತಂಡದ ಆಯ್ಕೆ ಪ್ರಕ್ರಿಯನ್ನು ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ದೈಹಿಕ ಶಿಕ್ಷಣ ವಿಭಾಗದ ಪ್ರತಿನಿಧಿಗಳು, ವಿವಿಧ ಕಾಲೇಜುಗಳ ಕ್ರೀಡಾಪಟುಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಿತ್ತೂರ ಚೆನ್ನಮ್ಮ, ಭುವನೇಶ್ವರಿದೇವಿ ಭಾವಚಿತ್ರದ ಮೆರವಣಿಗೆ
ಫೋಟೋಗಳನ್ನು ಆಧರಿಸಿ ಮಹಿಳೆಯ ಆದಾಯ ನಿರ್ಧರಿಸಲಾಗದು: ಕೋರ್ಟ್‌