ಕನ್ನಡಪ್ರಭ ವಾರ್ತೆ ಬೆಂಗಳೂರು
ಪಾಪರೆಡ್ಡಿಪಾಳ್ಯ ನಿವಾಸಿ ಸ್ವರೂಪ್(26) ಮೃತ ಸವಾರ. ಶನಿವಾರ ರಾತ್ರಿ ಸುಮಾರು 11.45ಕ್ಕೆ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಈ ದುರ್ಘಟನೆ ನಡೆದಿದೆ. ವೃತ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಸ್ವರೂಪ್, ಶನಿವಾರ ರಾತ್ರಿ ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆ ಕಡೆಗೆ ತೆರಳುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆಯ ಹಂಪ್ಸ್ ತಪ್ಪಿಸುವ ಭರದಲ್ಲಿ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸಮೇತ ರಸ್ತೆಗೆ ಬಿದ್ದಿದ್ದಾರೆ.
ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಸ್ವರೂಪ್‌ನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪರೀಕ್ಷಿಸಿದ ವೈದ್ಯರು ಮಾರ್ಗ ಮಧ್ಯೆಯೇ ಸ್ವರೂಪ್ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲಿಸಿದ್ದಾರೆ. ಅತಿವೇಗ ಹಾಗೂ ಅಜಾಗರೂಕತೆಯೇ ಸ್ವಯಂ ಅಪಘಾತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಸಂಬಂಧ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಹಂಪ್ಸ್ ಕಾಣಿಸದ್ದೇ ಘಟನೆಗೆ ಕಾರಣ