ಚಿಂತಾಮಣಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

KannadaprabhaNewsNetwork |  
Published : May 26, 2026, 01:30 AM IST
ಮುಖ್ಯರಸ್ತೆ ಅಗಲೀಕರಣ ಹಿನ್ನೆಲೆಯಲ್ಲಿ ಬಸ್ ನಿಲ್ದಾಣಗಳು ದೂರವಾಗಿದ್ದು ಕೂಡ ಲೇ ಪಟ್ಟಣದ ವ್ಯಾಪ್ತಿಯಲ್ಲಿ 2 ಸ್ಟೇಜ್‌ಗೆ ಬಸ್ ಸಾರಿಗೆ ಬಸ್ ವ್ಯವಸ್ಥೆ ಜಾರಿಗೊಳಿಸುವಂತೆ ಆಗ್ರಹಿಸಿ ಪಟ್ಟಣದ ಹೆಸ್ಕಾಂ ವಿದ್ಯುತ್ ಸಲಹಾ ಸಮಿತಿ ಸದಸ್ಯರು ಸೋಮ ವಾರ ಸಾರಿಗೆ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. | Kannada Prabha

ಸಾರಾಂಶ

ನಗರದ ಹೊರವಲಯದ ಚಿನ್ನಸಂದ್ರದ ಬಳಿಯಿರುವ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿದ್ದ ಯುವಕ ಮೈಸೂರು ನಗರ ಹೆಬ್ಬಾಳದ ರಾಕೇಶ್ (20 ವರ್ಷ) ಗುರುತಿಸಿದ್ದು ಈತ ಬೇವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಹೊರವಲಯದ ಬೆಂಗಳೂರು-ಕಡಪಾ ಹೆದ್ದಾರಿಯಲ್ಲಿರುವ ಶ್ರೀದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್

ಕನ್ನಡಪ್ರ‍ವಾರ್ತೆ, ಚಿಂತಾಮಣಿ:

ನಗರದ ವಿಶೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಘಟಕ ಕಾಲೇಜಿನ ೪ನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿನ್ನಸಂದ್ರ ಬಳಿಯ ಬೆಂಗಳೂರು-ಕಡಪಾ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ ಹಿಂಭಾಗದಲ್ಲಿ ನಡೆದಿದೆ.

ನಗರದ ಹೊರವಲಯದ ಚಿನ್ನಸಂದ್ರದ ಬಳಿಯಿರುವ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿದ್ದ ಯುವಕ ಮೈಸೂರು ನಗರ ಹೆಬ್ಬಾಳದ ರಾಕೇಶ್ (20 ವರ್ಷ) ಗುರುತಿಸಿದ್ದು ಈತ ಬೇವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಹೊರವಲಯದ ಬೆಂಗಳೂರು-ಕಡಪಾ ಹೆದ್ದಾರಿಯಲ್ಲಿರುವ ಶ್ರೀದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಾಸವಿದ್ದನು.

ಶನಿವಾರ ರಾತ್ರಿ ಊಟ ಮಾಡಿ ಮಲಗಿದ ನಂತರ ವಿದ್ಯಾರ್ಥಿನಿಲಯದಿಂದ ಹೊರಗಡೆ ಹೋಗಿ ಹಿಂಭಾಗದಲ್ಲಿರುವ ಬೇವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಯಾವ ಕಾರಣಕ್ಕಾಗಿ ನೇಣು ಹಾಕಿಕೊಂಡಿದ್ದಾನೆಂದು ತಿಳಿಯದಾಗಿದೆ. ವಿದ್ಯಾರ್ಥಿಗಳು ಎಂದಿನಂತೆ ಭಾನುವಾರ ಕಾಲೇಜಿಗೆ ರಜೆ ಇದ್ದುದರಿಂದ ಕ್ರಿಕೆಟ್ ಆಡಲು ವಿದ್ಯಾರ್ಥಿನಿಲಯದ ಹಿಂಭಾಗಕ್ಕೆ ಮೈದಾನಕ್ಕೆ ಹೋದಾಗ ಮರದಲ್ಲಿ ಶವ ನೇತಾಡುತ್ತಿರುವುದನ್ನು ಕಂಡು ವಾರ್ಡನ್ ಮೆಹಬೂಬ್ ಪಾಷಾಗೆ ಮಾಹಿತಿ ನೀಡಿದ್ದಾರೆ. ವಾರ್ಡನ್ ಕೂಡಲೇ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.

ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್ ಶಿವರಾಜ್ ಮತ್ತು ತಂಡ ಭೇಟಿ ನೀಡಿ ಪರಿಶೀಲಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವಿದ್ಯಾರ್ಥಿಯ ಸ್ನೇಹಿತರು ಮತ್ತು ಕಾಲೇಜು ಕಡೆಯಿಂದಲೂ ವಿಚಾರಣೆ ಮಾಡಲಾಗುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಹೆಚ್ಚಿನ ಮಾಹಿತಿ ತಿಳಿಯಲಿದೆ.

ವಿದ್ಯಾರ್ಥಿಯ ಸಾವಿನ ಸುದ್ದಿ ತಿಳಿದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಆಸ್ಪತ್ರೆಗೆ ಭೇಟಿ ನೀಡಿ, ಮೃತ ವಿದ್ಯಾರ್ಥಿಯ ನಿಧನಕ್ಕೆ ಸಂತಾಪ ಸೂಚಿಸಿ ಪೋಷಕರಿಗೆ ಮಗನ ಸಾವಿನ ದು:ಖವನ್ನು ಭರಿಸುವ ಶಕ್ತಿ ಭಗವಂತ ನೀಡಲೆಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಯಾಣಿಕರ ತಂಗುದಾಣಕ್ಕೆ ಶಾಸಕ ಬಾಲಕೃಷ್ಣ ಭೂಮಿಪೂಜೆ
ಕೇವಲ ಓದುಗರ ಪ್ರೀತಿ ಬೆಂಬಲವೇ ಟೀಚರ್ ಪತ್ರಿಕೆಯ ಬಂಡವಾಳ