ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಮೃತ ವಿದ್ಯಾರ್ಥಿಯನ್ನು ಚಿಂತಾಮಣಿ ತಾಲ್ಲೂಕಿನ ಬತ್ತಲಹಳ್ಳಿ ಗ್ರಾಮದ ಶ್ರೀನಿವಾಸ್ ಮತ್ತು ಕುಸುಮ ದಂಪತಿಯ ಪುತ್ರ ಮಿಥುನ್ (21) ಎಂದು ಗುರುತಿಸಲಾಗಿದೆ. ಈತ ಚಿಕ್ಕಬಳ್ಳಾಪುರದ ಎಸ್ ಜೆಸಿಐಟಿ ಕಾಲೇಜಿನಲ್ಲಿ ತೃತೀಯ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಮೃತ ವಿದ್ಯಾರ್ಥಿ ಬರೆದಿದ್ದ ಡೆತ್ ನೋಟ್‌ನಲ್ಲಿ, ''''''''ಮಿಸ್ ಯು ಅಪ್ಪ, ಅಮ್ಮ. ಮುಂದಿನ ಜನ್ಮದಲ್ಲಿಯೂ ನಿಮ್ಮ ಮಗನಾಗಿಯೇ ಹುಟ್ಟುತ್ತೇನೆ'''''''' ಎಂದು ಉಲ್ಲೇಖಿಸಿದ್ದಾನೆ ಎನ್ನಲಾಗಿದೆ. ಅಲ್ಲದೆ, ತನ್ನ ಪ್ರೇಯಸಿಯ ಹೆಸರನ್ನೂ ಬರೆದಿದ್ದಾನೆ ಎಂದು ತಿಳಿದುಬಂದಿದೆ.ಘಟನಾ ಸ್ಥಳದಲ್ಲಿ ಮೃತನ ಸಂಬಂಧಿಕರ ಆಕ್ರದಂನ ಮುಗಿಲು ಮುಟ್ಟಿತ್ತು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಸಿಕೆಬಿ-5 ಮಿಥುನ್