ಫ್ಯಾನ್‌ಗೆ ನೇಣು ಬಿಗಿದುಕೊಂಡು ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

KannadaprabhaNewsNetwork |  
Published : Sep 09, 2026, 02:00 AM IST
ಆತ್ಮಹತ್ಯೆ | Kannada Prabha

ಸಾರಾಂಶ

ಎಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಆತಹತ್ಯೆ ಮಾಡಿಕೊಂಡಿರುವ ಘಟನೆ ಸುಬ್ರಹಣ್ಯಪುರ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಎಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಆತಹತ್ಯೆ ಮಾಡಿಕೊಂಡಿರುವ ಘಟನೆ ಸುಬ್ರಹಣ್ಯಪುರ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಸಂತ ವಲ್ಲಭ ನಗರದ ನಿವಾಸಿ ವೇದಾಂತ್‌ (20) ಆತಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಈತ ಚನ್ನಸಂದ್ರದ ಖಾಸಗಿ ಕಾಲೇಜಿನಲ್ಲಿ 3ನೇ ವರ್ಷದ ಬಿ.ಇ ವ್ಯಾಸಂಗ ಮಾಡುತ್ತಿದ್ದ. ರಿಯಲ್‌ ಎಸ್ಟೇಟ್‌ ಕೆಲಸ ಮಾಡಿಕೊಂಡಿರುವ ಶಿವಕುಮಾರ್‌ ಎಂಬುವವರ 2ನೇ ಮಗನಾಗಿದ್ದ. ತನ್ನ ಚಿಕ್ಕಪ್ಪನ ಮಗ ವಿಫುಲ್‌ಗೌಡ ಹಾಗೂ ವೇದಾಂತ್‌ ಒಂದೇ ಕಾಲೇಜಿನಲ್ಲಿ ಓದುತ್ತಿದ್ದು, 1 ತಿಂಗಳಿನಿಂದ ಕಾಲೇಜಿಗೆ ರಜೆ ಇದ್ದುದರಿಂದ ಮನೆಯಲ್ಲಿಯೇ ಇದ್ದರು. ಸೆ.6 ರಂದು ರಾತ್ರಿ ಎಂದಿನಂತೆ ಊಟ ಮಾಡಿ ಇಬ್ಬರೂ 11.30 ಸುಮಾರಿಗೆ ಮೊದಲ ಮಹಡಿಯಲ್ಲಿ ಮಾತನಾಡಿ ಕೊಂಡು ಮಲಗಿದ್ದಾರೆ. ಬೆಳಗಾಗುವಷ್ಟರಲ್ಲಿ ವೇದಾಂತ್‌ 2ನೇ ಮಹಡಿಗೆ ಹೋಗಿ ರೂಂನಲ್ಲಿದ್ದ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗ್ಗೆ ಎದ್ದಾಗ ವೇದಾಂತ್‌ ಇಲ್ಲದಿರುವುದನ್ನು ಗಮನಿಸಿ ವಿಫುಲ್‌ಗೌಡ ಎಲ್ಲಾ ಕಡೆ ಹುಡುಕಾಟ ನಡೆಸಿ ಫೋನ್‌ ಮಾಡಿದ್ದಾನೆ.ಫೋನ್‌ ಕರೆ ಸ್ವೀಕರಿಸದಿದ್ದಾಗ ತಕ್ಷಣ ಮನೆಯವರಿಗೆ ತಿಳಿಸಿದ್ದಾನೆ. ಶಿವಕುಮಾರ್‌ ಅವರು ಮನೆಯ ಎಲ್ಲಾ ಕಡೆ ಹುಡುಕಾಟ ನಡೆಸಿದ ಬಳಿಕ ಮಹಡಿಯ ರೂಂ ಬಳಿ ಹೋಗಿ ನೋಡಿದಾಗ ಡೋರ್‌ ಒಳಗಿನಿಂದ ಲಾಕ್‌ ಆಗಿರುವುದು ಕಂಡುಬಂದಿದೆ. ತಕ್ಷಣ ಗಾಬರಿಯಾಗಿ ಕಿಟಕಿ ಮೂಲಕ ನೋಡಿದಾಗ ವೇದಾಂತ್‌ ನೇಣು ಹಾಕಿಕೊಂಡಿರುವುದು ಕಂಡು ಬಂದಿದೆ. ತಕ್ಷಣ ಬಾಗಿಲು ಒಡೆದು ಒಳಗೆ ಹೋಗಿ ಕುಣಿಕೆಯಿಂದ ಕೆಳಗಿಳಿಸಿ ನೋಡಿದಾಗ ಆತ ಮೃತಪಟ್ಟಿರುವುದು ಗೊತ್ತಾಗಿದೆ.

ಜಿಗುಪ್ಸೆಗೊಂಡು ಆತಹತ್ಯೆ:

ಈ ಬಗ್ಗೆ ವೇದಾಂತ್‌ ತಂದೆ ಶಿವಕುಮಾರ್‌ ಅವರು ಪೊಲೀಸರಿಗೆ ದೂರು ನೀಡಿದ್ದು, ಆತಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಯಾವುದೋ ವಿಚಾರಕ್ಕೆ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಆತಹತ್ಯೆ ಮಾಡಿಕೊಂಡಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸುಬ್ರಹಣ್ಯಪುರ ಠಾಣೆ ಪೊಲೀಸ್‌‍ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಾವಿತ್ರ್ಯತೆಯಿಂದ ಗಣೇಶೋತ್ಸವ ಆಚರಿಸಿ
72 ಸಾವಿರ ಹುದ್ದೆ ಭರ್ತಿ, ಕೆಪಿಎಸ್ಸಿ ಭ್ರಷ್ಟಾಚಾರ ತಡೆಗೆ ಆಗ್ರಹ