ಕನ್ನಡಪ್ರಭ ವಾರ್ತೆ ನಾಪೋಕ್ಲು
ಅವರು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗ, ಮಡಿಕೇರಿ ಇವರ ಸಹಯೋಗದಲ್ಲಿ ನಡೆದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು.
ಮುಂದುವರೆದ ಅವರು ಆಂಗ್ಲ ಭಾಷೆ ಇಂದು ಉದ್ಯೋಗ ಕ್ಷೇತ್ರವನ್ನು ಮಾತ್ರವಲ್ಲದೆ ಎಲ್ಲರ ಮನೆಯನ್ನು ಕೂಡ ಆಕ್ರಮಿಸಿಕೊಂಡಿದೆ. ನಮ್ಮ ಮನೆಯಲ್ಲಿ ನಾವು ನಮ್ಮ ಮಾತೃಭಾಷೆಯನ್ನು ಮಾತನಾಡಬೇಕು. ವ್ಯವಹಾರಕ್ಕೆ ಮಾತ್ರ ಆಂಗ್ಲ ಭಾಷೆಯನ್ನು ಉಪಯೋಗಿಸಿದರೆ ನಮ್ಮ ಭಾಷೆಯ ಉಳಿವು ಮತ್ತು ಬೆಳವಣಿಗೆ ಸಾಧ್ಯ ಎಂದರು.ಕಾರ್ಯಕ್ರಮದ ಮುಖ್ಯ ಭಾಷಣಕಾರ್ತಿಯಾಗಿ ಆಗಮಿಸಿದ ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಶ್ರೀಶ ಮಾತನಾಡಿ, ನಾಲ್ಕಾರು ಪ್ರಾಂತ್ಯಗಳಲ್ಲಿ ಹಂಚಿ ಹೋಗಿದ್ದ ಕನ್ನಡ ನಾಡನ್ನು ಒಟ್ಟುಗೂಡಿಸಿ ನಾಡನ್ನು ಕಟ್ಟಿದ ಬಗ್ಗೆ ಕನ್ನಡ ನಾಡಿನ ಏಕೀಕರಣ ಭಾಷಾವಾರು ರಾಜ್ಯಗಳ ವಿಂಗಡಣೆಯಾದ ನಂತರ ಮೈಸೂರು ರಾಜ್ಯದ ಉದಯ, ನಂತರ ಕರ್ನಾಟಕ ರಾಜ್ಯವಾದದ್ದು ಇವೆಲ್ಲದರ ಕುರಿತು ನಿರರ್ಗಳವಾಗಿ ಉಪನ್ಯಾಸ ನೀಡಿದರು.
ಇನ್ನೋರ್ವ ಮುಖ್ಯ ಅತಿಥಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ ರಮೇಶ್ ಮಾತನಾಡಿ, ಈ ಕಾಲೇಜು ನಡೆಯುತ್ತಿರುವ ಸ್ಥಳ ನೂರು ವರ್ಷಗಳ ಹಿಂದೆ ಸೆಂಟ್ರಲ್ ಹೈಸ್ಕೂಲ್ ಎಂದು ಹೆಸರಾಗಿತ್ತು ಆಗ ಇಲ್ಲಿ ಶಿಕ್ಷಕರಾಗಿದ್ದ ಪಂಜೆ ಮಂಗೇಶರಾಯರು ಖ್ಯಾತ ಸಾಹಿತಿಗಳು ಅವರ 150ನೇ ವರ್ಷಾಚರಣೆ ಈ ವರ್ಷ ನಡೆಯುತ್ತಿದೆ. ಇನ್ನೋರ್ವ ಖ್ಯಾತ ಸಾಹಿತಿಗಳಾದ ಭಾರತೀಸುತರು ಕೂಡ ಇಲ್ಲಿ ಶಿಕ್ಷಕರಾಗಿ ದುಡಿದಿದ್ದಾರೆ. ಪಂಜೆ ಮಂಗೇಶರಾಯರು ಕೊಡಗಿನ ಹುತ್ತರಿ ಹಾಡು "ಎಲ್ಲಿ ಭೂರಮೆ ದೇವಸನ್ನಿಧಿ ಬಯಸಿ ನಿಮ್ಮನೆ ಬಂದಳೋ " ಹಾಡನ್ನು ರಚಿಸಿದವರು ಅವರು ಈ ಶಾಲೆಯಲ್ಲಿ 22 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅವರ ನೆನಪಿಗಾಗಿ 150ನೇ ವರ್ಷಾಚರಣೆಯನ್ನು ಮುಂದಿನ ದಿನಗಳಲ್ಲಿ ಇದೇ ಕಾಲೇಜಿನ ಅವರಣದಲ್ಲಿ ನಡೆಸಲಾಗುತ್ತದೆ ಎಂದರು.
ಕನ್ನಡ ರಾಜ್ಯೋತ್ಸವ ಪ್ರಯುಕ್ತ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಕಾಲೇಜಿನ ವಿದ್ಯಾರ್ಥಿಗಳು ಕನ್ನಡ ನಾಡಿನ ಕುರಿತು ರಚಿಸಿದ ನೃತ್ಯಗಳನ್ನು ಪ್ರದರ್ಶನ ಮಾಡಿದರು.
ನಾಪೋಕ್ಲು ಹೋಬಳಿ ಕ.ಸಾ.ಪ ಅಧ್ಯಕ್ಷರಾದ ನೆರವಂಡ ಉಮೇಶ್, ಸಾಹಿತಿಗಳಾದ ಬಿ ಆರ್ ಜೋಯಪ್ಪ, ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಲೋಕನಾಥ್ ಅಮೆಚುರು, ತಾಲೂಕು ಕ.ಸಾ.ಪ ಸಂಘಟನಾ ಕಾರ್ಯದರ್ಶಿ ಚೊಕ್ಕಾಡಿ ಪ್ರೇಮ ರಾಘವಯ್ಯ, ಮಡಿಕೇರಿ ತಾಲೂಕು ಕ.ಸಾ.ಪ ಗೌರವ ಕಾರ್ಯದರ್ಶಿ ಪುದಿಯನೆರವನ ರಕ್ಷಿತ್ ಮಾದಯ್ಯ ಉಪಸ್ಥಿತರಿದ್ದರು.
ಪದವಿ ಕಾಲೇಜಿನ ಪ್ರಾಧ್ಯಾಪಕಿ ಡಾ. ಕಾವೇರಿ ಪ್ರಕಾಶ್ ಸ್ವಾಗತಿಸಿದರು. ಉಪನ್ಯಾಸಕಿ ಸುಪ್ರಿಯ ನಿರೂಪಿಸಿದರು.