ಕನ್ನಡಪ್ರಭ ವಾರ್ತೆ ವಿಜಯಪುರ
ಪ್ರಾಥಮಿಕ ಶಿಕ್ಷಣದ ಮಹತ್ವ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ತಿಕೋಟಾ ಕಸಾಪ ಅಧ್ಯಕ್ಷ ಸಿದ್ರಾಮಯ್ಯ ಲಕ್ಕುಂಡಿಮಠಮ, ರಾಷ್ಟ್ರದ ಭದ್ರಬುನಾದಿ ಎಂದರೆ ಅದು ಪ್ರಾಥಮಿಕ ಶಿಕ್ಷಣ. ಪ್ರಾಥಮಿಕ ಶಿಕ್ಷಣದ ಮೂಲಕ ವಿದ್ಯಾರ್ಥಿಗಳಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಸಂಸ್ಕಾರದ ಬೀಜ ಬಿತ್ತಬೇಕು ಎಂದು ಹೇಳಿದರು.
ಭಾಸ್ಕರಾಚಾರ್ಯರ ಜೀವನ ಚರಿತ್ರೆ ಕುರಿತು ಉಪನ್ಯಾಸ ನೀಡಿದ ವಿಜಯಪುರ ತಾಲೂಕಾ ಕಸಾಪ ಅಧ್ಯಕ್ಷ ಡಾ.ಆನಂದ ಕುಲಕರ್ಣಿ, ದಶಮಾನ ಪದ್ಧತಿ ಹಾಗೂ ಆಧುನಿಕ ಬೀಜಗಣಿತದಲ್ಲಿ ಉಪಯೋಗಿಸಲ್ಪಡುವ ಅಕ್ಷರ ಪದ್ಧತಿಯನ್ನು ಮೊಟ್ಟಮೊದಲ ಬಾರಿಗೆ ಬಳಕೆಗೆ ತಂದ ಕೀರ್ತಿ ಭಾಸ್ಕರಾಚಾರ್ಯರಿಗೆ ಸಲ್ಲುತ್ತದೆ. ಭಾರತದ ಖ್ಯಾತ ಗಣಿತಜ್ಞ ಹಾಗೂ ಖಗೋಳ ಶಾಸ್ತ್ರಜ್ಞರಾಗಿ ಅನೇಕ ಕೊಡುಗೆಗಳನ್ನು ನೀಡುವ ಮೂಲಕ ಇಡೀ ಜಗತ್ತು ಭಾರತದ ಕಡೆ ನೋಡುವಂತೆ ಮಾಡಿದ ಕೀರ್ತಿ ನಿಜಕ್ಕೂ ಭಾಸ್ಕರಾಚಾರ್ಯರಿಗೆ ಸಲ್ಲುತ್ತದೆ. ಅಷ್ಟೆ ಅಲ್ಲದೇ, ಇವರು ನಮ್ಮ ವಿಜಯಪುರದ ಹೆಮ್ಮೆ ಎಂಬುದು ನಮಗೆಲ್ಲ ಅಭಿಮಾನ ತರುವ ಸಂಗತಿ ಸ್ಮರಿಸಿದರು.ಬಸವಣ್ಣನವರ ಸಮಕಾಲಿನ ಶರಣರ ಚಿಂತನೆಗಳ ಕುರಿತು ಉಪನ್ಯಾಸ ನೀಡಿದ ಜಿಲ್ಲಾ ಕಸಾಪ ಗೌರವ ಕೋಶಾಧ್ಯಕ್ಷ ಡಾ.ಸಂಗಮೇಶ ಮೇತ್ರಿ, ಬಸವಾದಿ ಶಿವಶರಣರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲ ನಡೆಯಬೇಕು. ವಚನಕಾರರ ವಚನಗಳ ಸಾರವನ್ನು ತಿಳಿದು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.ಈ ಸಂದರ್ಭದಲ್ಲಿ ಬುದ್ಧ ದರ್ಶನ ಕೃತಿಕಾರರಾದ ವೈ.ಎಚ್ ಲಂಬು, ಇವಣಗಿಯ ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸಿದ್ಧರಾಮ ಬಿರಾದಾರ ಹಾಗೂ ವಿಜಯಪುರದ ಕರ್ನಾಟಕ ಪ್ರದೇಶ ಕೃಷಿಕ ಸಮಾಜ ತಾಲೂಕ ನಿರ್ದೇಶಕ ಅರ್ಜುನ ಶಿರೂರ ಹಾಗೂ ಬಸವನಬಾಗೇವಾಡಿಯ ಭರತನಾಟ್ಯ ಕಲಾವಿದೆ ಲಕ್ಷ್ಮಿ ಮನಗೂಳಿ ಅವರನ್ನು ಸನ್ಮಾನಿಸಲಾಯಿತು.
ಭಾರತದ ಖ್ಯಾತ ಗಣಿತಜ್ಞ ಹಾಗೂ ಖಗೋಳ ಶಾಸ್ತ್ರಜ್ಞರಾಗಿ ಅನೇಕ ಕೊಡುಗೆಗಳನ್ನು ನೀಡುವ ಮೂಲಕ ಇಡೀ ಜಗತ್ತು ಭಾರತದ ಕಡೆ ನೋಡುವಂತೆ ಮಾಡಿದ ಕೀರ್ತಿ ನಿಜಕ್ಕೂ ಭಾಸ್ಕರಾಚಾರ್ಯರಿಗೆ ಸಲ್ಲುತ್ತದೆ. ಅಷ್ಟೆ ಅಲ್ಲದೇ, ಅವರು ನಮ್ಮ ವಿಜಯಪುರದ ಹೆಮ್ಮೆ ಎಂಬುದು ನಮಗೆಲ್ಲ ಅಭಿಮಾನ ತರುವ ಸಂಗತಿ.