ರಾಮನಗರ: ಸಂಸದ ಡಿ.ಕೆ.ಸುರೇಶ್ ಅವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನನ್ನು ತನ್ನಿ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನೀಡಿರುವ ಹೇಳಿಕೆ ಖಂಡಿಸಿ ಜಿಲ್ಲಾ ಮತ್ತು ತಾಲೂಕು ಎನ್ಎಸ್ ಯುಐ ಪದಾಧಿಕಾರಿಗಳು ನಗರದಲ್ಲಿ ಶನಿವಾರ ರಾತ್ರಿ ಪ್ರತಿಭಟನೆ ನಡೆಸಿದರು.
ನಗರದ ಐಜೂರು ವೃತ್ತದಲ್ಲಿ ಸೇರಿದ ಪದಾಧಿಕಾರಿಗಳು ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಧಿಕ್ಕಾರ ಕೂಗುತ್ತಾ ಕೆಂಗಲ್ ಹನುಮಂತಯ್ಯ ವೃತ್ತಕ್ಕೆ ಮೆರವಣಿಗೆಯಲ್ಲಿ ತೆರಳಿದರು. ಅಲ್ಲಿಂದ ಮತ್ತೆ ಐಜೂರು ವೃತ್ತಕ್ಕೆ ಆಗಮಿಸಿ ಪ್ರತಿಕೃತಿ ದಹಿಸಲು ಮುಂದಾದರು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಪ್ರತಿಕೃತಿಯನ್ನು ಕಸಿದುಕೊಂಡು ಹೋದರು.ಈ ವೇಳೆ ಮಾತನಾಡಿದ ಎನ್ಎಸ್‌ಯುಐ ಜಿಲ್ಲಾಧ್ಯಕ್ಷ ಅಮರ್ , ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಬರಬೇಕಾದ ಅನುದಾನ ಸಿಗದ ಕಾರಣ ಸಂಸದ ಸುರೇಶ್ ರವರು ರಾಜ್ಯದ ಜನರ ಪರವಾಗಿ ನ್ಯಾಯ ಕೇಳಿದರೆ. ಅದನ್ನು ಅರ್ಥ ಮಾಡಿಕೊಳ್ಳದೆ ಕೆ.ಎಸ್.ಈಶ್ವರಪ್ಪ ನೀಡಿರುವ ಹೇಳಿಕೆಯನ್ನು ಖಂಡಿಸುತ್ತೇವೆ. ಇಂತಹ ಮಾತುಗಳು ಅವರ ಘನತೆಗೆ ತಕ್ಕದ್ದಲ್ಲ. ಈ ಕೂಡಲೇ ಅವರ ಹೇಳಿಕೆಯನ್ನು ಹಿಂಪಡೆಯಬೇಕು. ಜೊತೆಗೆ ಡಿ.ಕೆ.ಸುರೇಶ್ ಅವರಲ್ಲಿ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದರು.
ಎನ್ಎಸ್ ಯು ಐ ರಾಜ್ಯ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್ ಮಾತನಾಡಿ, ಗುತ್ತಿಗೆದಾರನೊಬ್ಬನ ಸಾವಿಗೆ ಕಾರಣನಾದ ಈಶ್ವರಪ್ಪನಿಗೆ ಬಿಜೆಪಿಯಲ್ಲಿ ಮನ್ನಣೆ ನೀಡೆದೆ ಮೂಲೆಗೆ ತಳ್ಳಿದ್ದಾರೆ. ಬಿಜೆಪಿ ಪಕ್ಷದ ವರಿಷ್ಠರನ್ನು ಓಲೈಸಬಹುದೆಂಬ ಭ್ರಮೆಯಿಂದ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ. ರಾಜ್ಯದ ರೈತರ ಪರ ಧ್ವನಿ ಎತ್ತಿರುವ ಸಂಸದ ಡಿ.ಕೆ.ಸುರೇಶ್ ಅವರ ಬಗ್ಗೆ ಮಾತನಾಡುವ ನೈತಿಕತೆ ಈಶ್ವರಪ್ಪಗಿಲ್ಲ ಎಂದು ವಾಗ್ದಾಳಿ ನಡೆಸಿದರು.ಪ್ರತಿಭಟನೆಯಲ್ಲಿ ಎನ್ಎಸ್ ಯುಐ ಪದಾಧಿಕಾರಿಗಳಾದ ಮಂಜುನಾಥ್, ಫೈರೋಜ್, ಪುನೀತ್, ಮೋಹನ, ಅಪ್ಪಾಜಿ, ಚಂದು ಮತ್ತಿತರರು ಭಾಗವಹಿಸಿದ್ದರು.10ಕೆಆರ್ ಎಂಎನ್ 8.ಜೆಪಿಜಿ
ರಾಮನಗರದ ಐಜೂರು ವೃತ್ತದಲ್ಲಿ ಎನ್ ಎಸ್ ಯು ಐ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.