ಕನ್ನಡಪ್ರಭ ವಾರ್ತೆ ಮಣಿಪಾಲ
ಅವರು ಮಂಗಳವಾರ ಇಲ್ಲಿನ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜಯಂತಿ ಪ್ರಯುಕ್ತ ನಡೆದ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಶೋಕಾಚರಣೆ ಹಿನ್ನೆಲೆ, ಸಾಂಕೇತಿಕವಾಗಿ ಕುವೆಂಪು ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಕುವೆಂಪು ಕರ್ನಾಟಕದಲ್ಲಿ ಮಾತ್ರವಲ್ಲದೇ ಭಾರತದ ಸಾಹಿತ್ಯದಲ್ಲೇ ಉತ್ತಮ ಹೆಸರನ್ನು ಪಡೆದವರು. ತಮ್ಮ ಸಾಹಿತ್ಯದ ಮೂಲಕ ಕನ್ನಡಿಗರಲ್ಲಿ ಕನ್ನಡಾಭಿಮಾನ ಮೂಡಿಸಿ, ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕನ್ನಡ ಸಾಹಿತ್ಯ ಪರಿಷತ್ ಮಾಧ್ಯಮ ಕಾರ್ಯದರ್ಶಿ ನರಸಿಂಹಮೂರ್ತಿ, ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.