ರಾಮನಗರ: ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯಿಂದ ಬಿಡುಗಡೆಗೊಳಿಸಿದ ಮಕ್ಕಳು ಶಾಲೆಗಳಿಗೆ ಹೋಗುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಅವರು ಶಾಲೆ ಬಿಟ್ಟಿದ್ದರೆ ಅವರನ್ನು ಮರಳಿ ಶಾಲೆಗೆ ಕಳುಹಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಹಾಗೂ ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಾಲಕಾರ್ಮಿಕರು ಕಂಡುಬಂದ ಕೂಡಲೇ ಜಿಲ್ಲಾ ಮಟ್ಟದ ಕಾರ್ಯಪಡೆ ದಾಳಿ ಮಾಡಿ ಬಾಲಕಾರ್ಮಿಕರನ್ನು ಬಿಡುಗಡೆಗೊಳಿಸಿ ಮುಂದಿನ ಕ್ರಮವಹಿಸಬೇಕು. ಮುಂಬರುವ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಬಾಲ ಹಾಗೂ ಕಿಶೋರ ಕಾರ್ಮಿಕ ವಿರೋಧಿ ಪದ್ಧತಿ ಕುರಿತು ಎನ್‌ಸಿಸಿ, ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಜಾಥಾ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ, ಕಥೆ, ಭಾಷಣ, ಚರ್ಚಾ ಸ್ಪರ್ಧೆ, ಚಿತ್ರಕಲೆಯಂತಹ ಕಾರ್ಯಕ್ರಮಗಳನ್ನು ರೂಪಿಸಿ, ಆ ಮೂಲಕ ಬಾಲ ಕಾರ್ಮಿಕ ಪದ್ದತಿಯ ದುಷ್ಪರಿಣಾಮಗಳ ಅರಿವು ಮೂಡಿಸಬೇಕು ಎಂದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸವಿತಾ, ಜಿಲ್ಲಾ ಕಾರ್ಮಿಕ ಅಧಿಕಾರಿ ಎಚ್.ಆರ್. ನಾಗೇಂದ್ರ , ಕಾರ್ಮಿಕ ನಿರೀಕ್ಷಕರಾದ ಎಂ. ಪ್ರದೀಪ್, ಬಿ.ಟಿ. ಮುನಿಲಿಂಗೇಗೌಡ, ಜಯಪ್ರಕಾಶ್, ಸಚಿನ್ ಮತ್ತಿತರರು ಉಪಸ್ಥಿತರಿದ್ದರು.
24ಕೆಆರ್ ಎಂಎನ್ 1.ಜೆಪಿಜಿ
ರಾಮನಗರದಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಜಿಲ್ಲಾ ಮಟ್ಟದ ಕಾರ್ಯಕಾರಿ ಹಾಗೂ ಟಾಸ್ಕ್ ಪೋರ್ಸ್ ಸಮಿತಿ ಸಭೆ ನಡೆಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.