ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸಲು ಪರಿಶ್ರಮ ವಹಿಸಿ

KannadaprabhaNewsNetwork |  
Published : May 25, 2025, 01:53 AM IST
ಪೋಟೋ೨೪ಸಿಎಲ್‌ಕೆ೪ ಚಳ್ಳಕೆರೆ ನಗರದ ರೋಟರಿ ಬಾಲಭವನದಲ್ಲಿ ತಳಕು ಹೋಬಳಿ ಕ್ಲಸ್ಟರ್ ವಿಭಾಗದ ಶಾಲೆಗಳ ಪುನರಾಂಭ ಕುರಿತು ಏರ್ಪಡಿಸಿದ್ದ ಸಭೆಯನ್ನು ಬಿಇಒ ಕೆ.ಎಸ್.ಸುರೇಶ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಚಳ್ಳಕೆರೆ: ತಾಲೂಕಿನಾದ್ಯಂತ ಸರ್ಕಾರಿ ಶಾಲೆಗಳು ಈ ತಿಂಗಳ ೩೦ರಿಂದ ಪುನರಾಂಭವಾಗಲಿದ್ದು, ಶೈಕ್ಷಣಿಕ ವರ್ಷ ಆರಂಭದ ಹಿನ್ನೆಲೆಯಲ್ಲಿ ಎಲ್ಲಾ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು ಶೈಕ್ಷಣಿಕ ಅಭಿವೃದ್ಧಿಗೆ ತಮ್ಮದೇಯಾದ ಕೊಡುಗೆ ನೀಡಬೇಕಿದೆ. ಶಿಕ್ಷಣ ಇಲಾಖೆ ಸೂಚಿಸಿದ ಎಲ್ಲಾ ಸೂಚನೆ ಪಾಲಿಸಬೇಕು, ವಿಶೇಷವಾಗಿ ಶಾಲೆಗಳ ದಾಖಲಾತಿ ಹೆಚ್ಚಿಸುವಲ್ಲಿ ಶಿಕ್ಷಕರು ಮನೆ, ಮನೆ ಭೇಟಿ ನಡೆಸಿ ಮಕ್ಕಳು ಶಾಲೆಗೆ ಸೇರ್ಪಡೆಯಾಗುವಂತೆ ಪೋಷಕರನ್ನು ಪ್ರೇರೇಪಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ತಿಳಿಸಿದರು.

ಶನಿವಾರ ನಗರದ ರೋಟರಿ ಬಾಲಭವನದಲ್ಲಿ ತಳಕು ಹೋಬಳಿ ಕ್ಲಸ್ಟರ್ ವಿಭಾಗದ ಶಾಲೆಗಳ ಪುನರಾಂಭ ಕುರಿತಂತೆ ಕೈಗೊಳ್ಳಬೇಕಾದ ಯೋಜನೆ, ವಿದ್ಯಾರ್ಥಿಗಳಿಗೆ ದೊರೆಯುವ ಸೌಲಭ್ಯಗಳು ಹಾಗೂ ಗುಣಮಟ್ಟದ ಶಿಕ್ಷಣ ನೀಡುವ ಬಗ್ಗೆ ಶಿಕ್ಷಕರಿಗೆ ಮಾರ್ಗದರ್ಶನ ಮಾಡಿದರು.

ಶಾಲೆಗಳ ಆರಂಭಕ್ಕೂ ಮುನ್ನ ಸಂಬಂಧಿಸಿದ ಎಲ್ಲಾ ಶಿಕ್ಷಕರು ಶಾಲೆಗೆ ಭೇಟಿ ನೀಡಿ ಅಗತ್ಯ ಸೌಲಭ್ಯಗಳ ಬಗ್ಗೆ ಗಮಹರಿಸಿ ಅವುಗಳ ಪರಿಹಾರಕ್ಕೂ ಯತ್ನಿಸಬೇಕು ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶಿಕ್ಷಣ ಸಂಯೋಜಕ ಪಿ.ಮಾರುತಿಭಂಡಾರಿ, ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಇಲಾಖೆ ಶೈಕ್ಷಣಿಕ ಅಭಿವೃದ್ಧಿ ದಾಖಲಿಸುವ ಹಿನ್ನೆಲೆಯಲ್ಲಿ ಹಲವಾರು ಮಹತ್ತರ ಯೋಜನೆಗಳನ್ನು ರೂಪಿಸಿದೆ. ಈಗಾಗಲೇ ತಾಲೂಕುಮಟ್ಟದ ಎಲ್ಲಾ ಸಿಆರ್‌ಪಿ ಮತ್ತು ಶಿಕ್ಷಣ ಸಂಯೋಜಕರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಮಾರ್ಗದರ್ಶನ ನೀಡಿದ್ದಾರೆ. ಶಿಕ್ಷಣದ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರವನ್ನು ಶಿಕ್ಷಣ ಇಲಾಖೆ ಬಯಸುತ್ತದೆ ಎಂದರು.

ಸಭೆಯಲ್ಲಿ ಅಕ್ಷರ ದಾಸೋಹ ಅಧಿಕಾರಿ ಜಿ.ಟಿ.ಮಂಜುನಾಥಸ್ವಾಮಿ, ಕ್ಷೇತ್ರ ಸಮನ್ವಯಾಧಿಕಾರಿ ಬಿ.ತಿಪ್ಪೇಸ್ವಾಮಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಸಣ್ಣಸೂರಮ್ಮ, ಜಗನ್ನಾಥ, ಮೃತ್ಯುಂಜಯ, ವೆಂಕಟಸ್ವಾಮಿ, ಮಂಜುನಾಥ, ಪುಪ್ಪ, ಗೌರಮ್ಮ, ಕೇಶವಮೂರ್ತಿ, ರಾಜು, ಸೋಮಶೇಖರ್, ಕೆ.ಎಸ್.ಶ್ರೀಕಾಂತ್, ಸುರೇಶ್, ತಿಪ್ಪೇಸ್ವಾಮಿ, ಎನ್.ಮಾರಣ್ಣ ಮುಂತಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ