ಕನ್ನಡಪ್ರಭ ವಾರ್ತೆ ರಾಯಚೂರು
ಸ್ಥಳೀಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆಗಳು, ಕೃಷಿ ಚಟುವಟಿಕೆಗಳು, ನೀರಾವರಿ ಸಮಸ್ಯೆಗಳು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಸೋಮವಾರ ಮಾತನಾಡಿದ ಅವರು. ಜಿಲ್ಲೆಯಲ್ಲಿ ಐದು ತಾಲೂಕು ಗಳನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ತಾಲೂಕುಗಳನ್ನು ಬರಪೀಡಿತ ತಾಲೂಕು ಎಂದು ಘೋಷಿ ಸಲು ಕ್ರಮ ವಹಿಸಲಾಗುತ್ತದೆ ಎಂದರು.
ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಮುಂಜಾಗ್ರತಾ ವಹಿಸಿ, ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಲು ಶ್ರಮಿಸಬೇಕು. ಮುಖ್ಯಮಂತ್ರಿಯವರು ರಾಯಚೂರು ಜಿಲ್ಲೆಗೆ ವಿಶೇಷ ಆದ್ಯತೆ ನೀಡಿದ್ದು, ಸರ್ಕಾರದ ಮಹತ್ವಾಕಾಂಕ್ಷಿ ಪ್ರಜಾಸೇವೆ ಕಾರ್ಯಕ್ರಮವನ್ನು ರಾಯಚೂರಿನಿಂದಲೇ ಪ್ರಾರಂಭಿಸಲು ನಿರ್ಧರಿಸಲಿದ್ದಾರೆ. ಮಾತ್ರವಲ್ಲದೆ, ಬರಗಾಲ ವೀಕ್ಷಣೆ ಪ್ರವಾಸವನ್ನು ಸಹ ಈ ಭಾಗದಿಂದಲೇ ಕೈಗೊಳ್ಳಲು ತೀರ್ಮಾನಿಸಿದ್ದಾರೆ ಎಂದರು. ಸಭೆಯಲ್ಲಿ ಜನಪ್ರತಿನಿಧಿಗಳು,ಅಧಿಕಾರಿಗಳು ಹಾಜರಿದ್ದರು.