ಸಫಾಯಿ ಕರ್ಮಚಾರಿಗಳಿಗೆ ವಿಳಂಬ ಮಾಡದೇ ಸೌಲಭ್ಯ ತಲುಪಿಸಿ: ಜಿಲ್ಲಾಧಿಕಾರಿ

KannadaprabhaNewsNetwork |  
Published : Nov 14, 2026, 02:30 AM IST
ಸಫಾಯಿ ಕರ್ಮಚಾರಿಗಳ, ಮ್ಯಾನ್ಯುವಲ್ ಸ್ಕ್ಯಾವೆಂಜರ್ ಗಳ 3ನೇ ತ್ರೈ ಮಾಸಿಕ ಸಭೆ ನಡೆಯಿತು. | Kannada Prabha

ಸಾರಾಂಶ

ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ಜಾರಿಯಾಗಿರುವ ವಿವಿಧ ಯೋಜನೆಗಳ ಸೌಲಭ್ಯ ತಲುಪಿಸುವಲ್ಲಿ ಇಲಾಖೆಯ ಅಧಿಕಾರಿಗಳ ಪಾತ್ರ ಪ್ರಮುಖವಾಗಿದೆ.

ಕನ್ನಡಪ್ರಭ ವಾರ್ತೆ ಗದಗ

ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ಜಾರಿಯಾಗಿರುವ ವಿವಿಧ ಯೋಜನೆಗಳ ಸೌಲಭ್ಯ ತಲುಪಿಸುವಲ್ಲಿ ಇಲಾಖೆಯ ಅಧಿಕಾರಿಗಳ ಪಾತ್ರ ಪ್ರಮುಖವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ವಿಶೇಷ ಆಸಕ್ತಿಯಿಂದ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಸಫಾಯಿ ಕರ್ಮಚಾರಿಗಳ, ಮ್ಯಾನ್ಯುವಲ್ ಸ್ಕ್ಯಾವೆಂಜರ್ ಗಳ 3ನೇ ತ್ರೈ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಅನೈರ್ಮಲ್ಯ ಶೌಚಾಲಯಗಳನ್ನು ಗುರುತಿಸಿ ಡೆಮಾಲಿಶ್ (ತೆರವುಗೊಳಿಸಲು) ಮಾಡಲು ಕ್ರಮ ವಹಿಸಬೇಕು. ಶಿಥಿಲಾವಸ್ಥೆಯಲ್ಲಿರುವ ಅನೈರ್ಮಲ್ಯ ಶೌಚಾಲಯಗಳನ್ನು ಗುರುತಿಸಿ ವರದಿ ನೀಡಬೇಕು. ಸಫಾಯಿ ಕರ್ಮಚಾರಿಗಳಿಗೆ ನಿಗದಿತ ಸಮಯಕ್ಕೆ ನಿಗದಿಪಡಿಸಿದ ವೇತನ ಪಾವತಿಸಬೇಕು. ಪೌರ ಕಾರ್ಮಿಕರಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ನಡೆಸಬೇಕು. ಗುತ್ತಿಗೆ ಸಫಾಯಿ ಕರ್ಮಚಾರಿಗಳಿಗೆ ಗುತ್ತಿಗೆ ಏಜೆನ್ಸಿದಾರರು ಸಮಯಕ್ಕೆ ಸರಿಯಾಗಿ ನಿಗದಿಪಡಿಸಿದ ವೇತನ ಸೌಲಭ್ಯಗಳನ್ನು ವಿತರಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಪೌರಕಾರ್ಮಿಕರಿಗೆ ಗುಣಮಟ್ಟದ ಉಪಾಹಾರ ಹಾಗೂ ಶುದ್ಧ ನೀರು ಪೂರೈಸುವುದು ಮುಖ್ಯವಾಗಿದ್ದು, ಈ ಕುರಿತು ಅಧಿಕಾರಿಗಳು ಯಾವುದೇ ಕಾರಣಕ್ಕೂ ನಿಷ್ಕಾಳಜಿ ಮಾಡಬಾರದು. ಪೌರ ಕಾರ್ಮಿಕರಿಗೆ ಸ್ವಚ್ಛತಾ ಪರಿಕರಗಳನ್ನು ಒದಗಿಸುವಲ್ಲಿ ವಿಳಂಬವಾಗಬಾರದು. ಸ್ವಚ್ಛತಾ ಕಾರ್ಮಿಕರಿಗೆ ಸುರಕ್ಷತಾ ಪರಿಕರಗಳನ್ನು ಬಳಕೆ ಮಾಡುವ ತಿಳುವಳಿಕೆಯ ನೀಡುವುದು ಮುಖ್ಯವಾಗಿದೆ.

ಸಭೆಯಲ್ಲಿ ಪೌರ ಕಾರ್ಮಿಕರಿಗೆ ವಿಶ್ರಾಂತಿ ಪಡೆಯಲು ಭೀಮಾಶ್ರಯ ವಿಶ್ರಾಂತಿ ಗೃಹ ನಿರ್ಮಾಣ ಹಾಗೂ ವಸತಿ ಸೌಲಭ್ಯ, ಸಕಾಲದಲ್ಲಿ ವೇತನ ಪಾವತಿ ಮಾಡುವ ಕುರಿತಂತೆ ಚರ್ಚಿಸಲಾಯಿತು.

ಈ ಸಂದರ್ಭ ಎಸಿ ಗಂಗಪ್ಪ ಎಂ, ಜಿಪಂ ಮುಖ್ಯ ಯೋಜನಾಧಿಕಾರಿ ಎ.ಎ. ಕಂಬಾಳಿಮಠ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಜಿಲ್ಲಾ ಶಸ್ತ್ರಚಿಕತ್ಸಕ ಡಾ. ಬಿ.ಎಸ್. ಕರಿಗೌಡ್ರ, ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಡಾ. ಶರಣು ಗೋಗೇರಿ, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ನಾಮನಿರ್ದೇಶಿತ ಸದಸ್ಯ ಎಸ್.ಎನ್. ಬಳ್ಳಾರಿ, ಚನ್ನಬಸಪ್ಪ ಬಿಳೆಯಲಿ, ಶರಣಪ್ಪ ಮೂಕಪ್ಪ ಪೂಜಾರ, ಅಂಜನಾದೇವಿ ಎಮ್. ಮ್ಯಾಗೇರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ ಸ್ವಾಗತಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ಸರ್ವತೋಮುಖ ಪ್ರಗತಿಗೆ ಶ್ರಮಿಸಿ
ಎಸಿಯಾಗಿ ಪದೋನ್ನತಿ ಹೊಂದಿದ ತಹಸೀಲ್ದಾರ್‌ ಬೋಸಗಿ