ಸಂವಿಧಾನ ದುರುಪಯೋಗ ಆಗದಂತೆ ನೋಡಿಕೊಳ್ಳಿ: ಶ್ರೀನಾಥ್

KannadaprabhaNewsNetwork |  
Published : Apr 17, 2026, 02:00 AM IST
೧೫ಕೆಎಲ್‌ಆರ್-೭ಕೋಲಾರದ ನಚಿಕೇತನ ನಿಲಯ ಮತ್ತು ಬಂಗಾರಪೇಟೆ ವೃತ್ತದಲ್ಲಿ ಅಂಬೇಡ್ಕರ್ ೧೩೫ನೇ ಜಯಂತಿ ಪ್ರಯುಕ್ತ ಪ್ರತಿಮೆಗೆ ಜೆಡಿಎಸ್ ಮುಖಂಡ ಸಿಎಂಆರ್.ಶ್ರೀನಾಥ್ ಮಾಲಾರ್ಪಣೆ ಮಾಡಿ ಮಾತನಾಡುತ್ತಿರುವುದು. | Kannada Prabha

ಸಾರಾಂಶ

ಸಮಾಜದಲ್ಲಿ ದುರ್ಬಲರು, ಅಸಹಾಯಕರು, ಶೋಷಿತರು ಹಾಗೂ ತುಳಿತಕ್ಕೊಳಗಾದವರ ಬದುಕಿಗೆ ಬೆಳಕಾಗಿ ಸಮಾಜದಲ್ಲಿ ಸಹ ಬಾಳ್ವೆಯ ಸಮಾನತೆ ಅಭಿವ್ಯಕ್ತಿ ಸ್ವಾತಂತ್ರ್ಯ ಕೊಟ್ಟವರು ಅಂಬೇಡ್ಕರ್.

ಕೋಲಾರ:ಭಾರತರತ್ನ ಅಂಬೇಡ್ಕರ್ ಭಾರತ ದೇಶದ ಅಸ್ಮಿತೆ. ಅವರು ರಚನೆ ಮಾಡಿರುವ ಸಂವಿಧಾನವನ್ನು ಯಾವುದೇ ಕಾರಣಕ್ಕೂ ದುರುಪಯೋಗವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ಭಾರತೀಯನ ಮೇಲಿದೆ ಎಂದು ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ತಿಳಿಸಿದರು.ನಗರದ ನಚಿಕೇತನ ನಿಲಯ ಮತ್ತು ಬಂಗಾರಪೇಟೆ ವೃತ್ತದಲ್ಲಿ ಅಂಬೇಡ್ಕರ್ ೧೩೫ನೇ ಜಯಂತಿ ಪ್ರಯುಕ್ತ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.ಸಮಾಜದಲ್ಲಿ ದುರ್ಬಲರು, ಅಸಹಾಯಕರು, ಶೋಷಿತರು ಹಾಗೂ ತುಳಿತಕ್ಕೊಳಗಾದವರ ಬದುಕಿಗೆ ಬೆಳಕಾಗಿ ಸಮಾಜದಲ್ಲಿ ಸಹ ಬಾಳ್ವೆಯ ಸಮಾನತೆ ಅಭಿವ್ಯಕ್ತಿ ಸ್ವಾತಂತ್ರ್ಯ ಕೊಟ್ಟವರು ಅಂಬೇಡ್ಕರ್ ಅವರು ಸಂವಿಧಾನದ ಸಮಿತಿಯಲ್ಲಿ ಇಲ್ಲದಿದ್ದರೆ ಸರ್ವ ಸ್ಪರ್ಶಿ, ಸರ್ವ ವ್ಯಾಪಿ ಸಂವಿಧಾನ ಆಗುತ್ತಿರಲಿಲ್ಲ ಎಲ್ಲರ ಒಪ್ಪಿಗೆ ಸಿಗುತ್ತಿರಲಿಲ್ಲ ಎಂದು ಹೇಳಿದರು.ಸಂಸದ ಎಂ.ಮಲ್ಲೇಶ್ ಬಾಬು, ಎಂಎಲ್ಸಿ ಇಂಚರ ಗೋವಿಂದರಾಜು, ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಡಿ.ಕೆ ರಮೇಶ್, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ನರೇಂದ್ರ ಬಾಬು, ನಗರಸಭೆ ಮಾಜಿ ಉಪಾಧ್ಯಕ್ಷ ವಿ.ಕೆ ರಾಜೇಶ್, ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ರೈತ ಸಂಘದ ಆನಂದ್ ಕುಮಾರ್, ಮುಖಂಡರಾದ ನಾಗರಾಜ್, ಕುಮಾರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಡಿಯುವ ನೀರಿನ ಸಮಸ್ಯೆಗೆ ಗುತ್ತಿಗೆದಾರರೇ ಕಾರಣ-ಸಚಿವ ಶಿವಾನಂದ ಪಾಟೀಲ
ವಿಬಿ-ಜಿ ರಾಮ್‌ಜಿ ಕಾಯ್ದೆ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯಿಸಿ ಪ್ರತಿಭಟನೆ