ರೈತರ ಬೆಳೆಗಳಿಗೆ ಸತತ ನೀರು ಹರಿಸಿ: ಸಂಘಟನೆ

KannadaprabhaNewsNetwork |  
Published : Nov 04, 2026, 12:15 AM IST
ಸುರಪುರ ನಗರದ ತಾಲೂಕು ಪತ್ರಿಕಾ ಭವನದಲ್ಲಿ ರೈತರ ಬೆಳೆಗಳಿಗೆ ನಿರಂತರ ನೀರು ಹರಿಸುವಂತೆ ಆಗ್ರಹಸಿ, ನ.೬ರಂದು ಸುರಪುರ ಬಂದ್ ಆಚರಿಸುವ ಕುರಿತು ವಿವಿಧ ಸಾಮೂಹಿಕ ಸಂಘಟನೆಗಳ ಮುಖಂಡರು ಮಂಗಳವಾರ ಸುದ್ದಿಗೋಷ್ಠಿ ನಡೆಸಿದರು. | Kannada Prabha

ಸಾರಾಂಶ

ರೈತರ ಬೆಳೆಗಳ ರಕ್ಷಣೆಗಾಗಿ ನ.30ರವರೆಗೆ ನಾರಾಯಣಪುರ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ನಿರಂತರವಾಗಿ ನೀರು ಹರಿಸುವಂತೆ ಆಗ್ರಹಿಸಿ, ನ.6 ರಂದು ನಡೆಯಲಿರುವ ಯಾದಗಿರಿ ಜಿಲ್ಲಾ ಬಂದ್‌ಗೆ ಬೆಂಬಲವಾಗಿ ಸುರಪುರ ಬಂದ್ ಆಚರಿಸಲು ವಿವಿಧ ಸಾಮೂಹಿಕ ಸಂಘಟನೆಗಳ ಮುಖಂಡರು ಸರ್ವಾನುಮತದಿಂದ ನಿರ್ಧರಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಸುರಪುರ

ರೈತರ ಬೆಳೆಗಳ ರಕ್ಷಣೆಗಾಗಿ ನ.30ರವರೆಗೆ ನಾರಾಯಣಪುರ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ನಿರಂತರವಾಗಿ ನೀರು ಹರಿಸುವಂತೆ ಆಗ್ರಹಿಸಿ, ನ.6 ರಂದು ನಡೆಯಲಿರುವ ಯಾದಗಿರಿ ಜಿಲ್ಲಾ ಬಂದ್‌ಗೆ ಬೆಂಬಲವಾಗಿ ಸುರಪುರ ಬಂದ್ ಆಚರಿಸಲು ವಿವಿಧ ಸಾಮೂಹಿಕ ಸಂಘಟನೆಗಳ ಮುಖಂಡರು ಸರ್ವಾನುಮತದಿಂದ ನಿರ್ಧರಿಸಿದ್ದಾರೆ.

ನಗರದ ತಾಲೂಕು ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಮೂಹಿಕ ಸಂಘಟನೆಗಳ ಮುಖಂಡರು, ಪ್ರಸುತ್ತ ಮಳೆಯ ಕೊರತೆಯಿಂದ ಬರಗಾಲದ ಪರಿಸ್ಥಿತಿ ಉಂಟಾಗಿದ್ದು, ರೈತರ ಬೆಳೆಗಳು ಒಣಗುವ ಹಂತ ತಲುಪಿವೆ. ಇಂತಹ ಸಂದರ್ಭ ನಾರಾಯಣಪುರ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ನ.12ರವರೆಗೆ ಮಾತ್ರ ನೀರು ಹರಿಸಲು ಕೈಗೊಂಡಿರುವ ನಿರ್ಧಾರವನ್ನು ತಕ್ಷಣ ರದ್ದುಗೊಳಿಸಬೇಕು. ರೈತರ ಬೆಳೆಗಳ ಹಿತದೃಷ್ಟಿಯಿಂದ ನ.30ರವರೆಗೆ ಸತತವಾಗಿ ನೀರು ಹರಿಸಬೇಕು ಎಂದು ಸರ್ಕಾರ, ಸಚಿವರು, ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದರು.

ರೈತರ ಬೆಳೆಗಳನ್ನು ಉಳಿಸಿ, ಕೃಷಿಕರ ಬದುಕಿಗೆ ಆಸರೆಯಾಗುವ ಉದ್ದೇಶದಿಂದ ನಡೆಯುತ್ತಿರುವ ಬಂದ್‌ಗೆ ಸುರಪುರ ತಾಲೂಕಿನ ರೈತರು, ನಾಗರಿಕರು, ವ್ಯಾಪಾರಸ್ಥರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಹಾಗೂ ಅಂಗಡಿ ಮಾಲೀಕರು ಸ್ವಯಂಪ್ರೇರಿತರಾಗಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ, ಪಕ್ಷಾತೀತವಾಗಿ ಬೆಂಬಲ ನೀಡುವ ಮೂಲಕ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ತಾಲೂಕಿನ ರೈತರು, ಕನ್ನಡಪರ ಸಂಘಟನೆಗಳು, ವಾಲ್ಮೀಕಿ ಸಂಘಟನೆ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಒಗ್ಗೂಡಿ ಕುಂಬಾರಪೇಟ, ಪೆಟ್ರೋಲ್ ಪಂಪ್, ನಗರದ ಗಾಂಧಿ ಚೌಕ್‌ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ನ.6ರಂದು ಬಂದ್ ಆಚರಿಸಲಿದ್ದಾರೆ. ಈಗಾಗಲೇ 30ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ ಎಂದು ತಿಳಿಸಿದರು.

ಕಾಲುವೆಗಳಿಗೆ ನಿರಂತರ ನೀರು ಹರಿಸುವುದರ ಜತೆಗೆ ರೈತರ ಪಂಪ್‌ಸೆಟ್‌ಗಳಿಗೆ ಪ್ರತಿದಿನ ಏಳು ಗಂಟೆಗಳ ಕಾಲ ವಿದ್ಯುತ್ ಪೂರೈಸಬೇಕು. ಸರ್ಕಾರ ಕೂಡಲೇ ಬೇಡಿಕೆಗಳಿಗೆ ಸ್ಪಂದಿಸದಿದ್ದಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಮುಖಂಡರು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಕರವೇ ತಾಲೂಕು ಅಧ್ಯಕ್ಷ ವೆಂಕಟೇಶ ನಾಯಕ ಬೈರಿಮಡ್ಡಿ, ರೈತ ಸಂಘದ ತಾಲೂಕು ಅಧ್ಯಕ್ಷ ಮರಿಲಿಂಗಪ್ಪ ಗೌಡ ಅಡ್ಡೊಡಗಿ ಮುಂತಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಿತ್ತೂರ ಚೆನ್ನಮ್ಮ, ಭುವನೇಶ್ವರಿದೇವಿ ಭಾವಚಿತ್ರದ ಮೆರವಣಿಗೆ
ಫೋಟೋಗಳನ್ನು ಆಧರಿಸಿ ಮಹಿಳೆಯ ಆದಾಯ ನಿರ್ಧರಿಸಲಾಗದು: ಕೋರ್ಟ್‌