ಪಂಚ ಗ್ಯಾರಂಟಿ ಸಮರ್ಪಕ ಅನುಷ್ಠಾನ ಆಗಲಿ: ಬಿ.ಕೆ.ರವಿಕುಮಾರ್

KannadaprabhaNewsNetwork |  
Published : Nov 25, 2026, 01:45 AM IST
24ಸಿಎಚ್‌ಎನ್‌54ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೆ ಕೆಡಿಪಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಕೆ. ರವಿಕುಮಾರ್ ಅವರು ನಡೆಸಿದರು. | Kannada Prabha

ಸಾರಾಂಶ

ಜನರ ಜೀವನಮಟ್ಟ ಸುಧಾರಣೆಗಾಗಿ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಗಂಭೀರವಾಗಿ ತೆಗೆದುಕೊಂಡು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಕೆ.ರವಿಕುಮಾರ್ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಜನರ ಜೀವನಮಟ್ಟ ಸುಧಾರಣೆಗಾಗಿ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಗಂಭೀರವಾಗಿ ತೆಗೆದುಕೊಂಡು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಕೆ.ರವಿಕುಮಾರ್ ಸೂಚಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೆ ಕೆಡಿಪಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯ ಸರ್ಕಾರ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಯನ್ನು ಜನರ ಅನುಕೂಲಕ್ಕಾಗಿ ಜಾರಿಗೆ ತಂದಿದೆ. ಅಧಿಕಾರಿಗಳು ಕಾಳಜಿ ವಹಿಸಿ ಶೇ. 100ರಷ್ಟು ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಬೇಕು. ಯಾವುದಾದರು ಸಮಸ್ಯೆಗಳಿದ್ದರೆ ತ್ವರಿತವಾಗಿ ಪರಿಹರಿಸಬೇಕು. ಅಧಿಕಾರಿಗಳು ಹಾಗೂ ಸಮಿತಿ ಒಟ್ಟಾಗಿ ಸಮನ್ವಯದಿಂದ ಜನರ ನೆರವಿಗೆ ಬರಬೇಕು ಎಂದರು.

ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಜಮೆಯಾದ ಹಣವನ್ನು ಬ್ಯಾಂಕುಗಳು ಫಲಾನುಭವಿಗಳು ಪಡೆದ ಸಾಲದ ಮೊತ್ತಕ್ಕೆ ಕಡಿತ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ಬಗ್ಗೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಎಲ್ಲ ಬ್ಯಾಂಕುಗಳಿಗೆ ನಿರ್ದೇಶನ ನೀಡಿ ಹಣ ಕಡಿತವಾಗದಂತೆ ನೋಡಿಕೊಳ್ಳಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿಗಳು ಬ್ಯಾಂಕ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಯಾವುದೇ ಕಾರಣಕ್ಕೂ ಸಾಲಕ್ಕಾಗಿ ಗೃಹಲಕ್ಷ್ಮಿ ಹಣ ಕಡಿತ ಮಾಡದಂತೆ ನಿಗಾವಹಿಸಬೇಕು ಎಂದು ತಾಕೀತು ಮಾಡಿದರು.

ಅನ್ನಭಾಗ್ಯ ಯೋಜನೆ ಪ್ರಗತಿ ಪರಿಶೀಲಿಸಿದ ವೇಳೆ ಅನುಪಾಲನ ವರದಿ ನೀಡದ ಆಹಾರ ಇಲಾಖೆಯ ಉಪನಿರ್ದೇಶಕರ ಕಾರ್ಯವೈಖರಿ ಬಗ್ಗೆ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಸಭೆಯಲ್ಲಿಯೂ ಸದಸ್ಯರ ಪ್ರಶ್ನೆಗಳಿಗೆ ಸಮರ್ಪಕವಾದ ಉತ್ತರ ನೀಡದಿರುವ ಬಗ್ಗೆ ಪ್ರಸ್ತಾಪಿಸಿದರು.

ಈ ವೇಳೆ ಮಾತನಾಡಿದ ಬಿ.ಕೆ.ರವಿಕುಮಾರ್, ಸಭೆಯ ನಿಯಮಾವಳಿಗೆ ಬದ್ದರಾಗಿ ನಡೆದುಕೊಳ್ಳಬೇಕು. ಸಭೆಗೆ ಬರುವ ಮೊದಲೇ ಅನುಪಾಲನಾ ವರದಿಯನ್ನು ಸಲ್ಲಿಸಬೇಕು. ಸದಸ್ಯರು ಈ ಹಿಂದೆಯು ಸಾಕಷ್ಟು ಆಕ್ಷೇಪ ವ್ಯಕ್ತಪಡಿಸಿದ್ದರೂ, ಸಮರ್ಪಕ ಉತ್ತರ ನೀಡದಿರುವುದರಿಂದ ಆಹಾರ ಇಲಾಖೆಯ ಉಪನಿರ್ದೇಶಕರಾದ ವಸುಂಧರ ಹೆಗಡೆ ಅವರಿಗೆ ನೋಟಿಸ್ ಜಾರಿ ಮಾಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದರು.

ಶಕ್ತಿ ಯೋಜನೆಯಡಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವಂತೆ ಬಸ್ಸುಗಳನ್ನು ನಿಯೋಜನೆ ಮಾಡಬೇಕು. ಬೇಡಿಕೆ ಅನುಸಾರ ಸಮಯ ನಿಗದಿಪಡಿಸಬೇಕು. ಹೆಚ್ಚು ಸಂದಣಿ ಇರುವ ಸಮಯದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳ ಸಂಖ್ಯೆಯು ಹೆಚ್ಚಿರಬೇಕು. ಗೃಹಜ್ಯೋತಿ ಯೋಜನೆಯ ಅರ್ಹ ಅರ್ಜಿದಾರರಿಗೆ ತ್ವರಿತಗತಿಯಲ್ಲಿ ಸೌಲಭ್ಯ ತಲುಪಬೇಕು. ಯುವನಿಧಿ ಬಗ್ಗೆ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಇತರ ಕಾಲೇಜುಗಳಲ್ಲಿ ಹೆಚ್ಚು ಪ್ರಚಾರ ಮಾಡಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಕೃತಿ ಬನ್ಸಾಲ್, ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ನಾಗರಾಜ ಮೂರ್ತಿ, ರವಿ, ಸದಸ್ಯರಾದ ಸೋಮೇಶ್ವರ್, ಪ್ರಭು ಪ್ರಸಾದ್, ಉಮಾಪತಿ, ರಾಜೇಂದ್ರ, ಭಾಗ್ಯ, ಜಯರಾಜ್, ಚಿನ್ನಸ್ವಾಮಿ, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಬಿ. ನಾಗರಾಜು, ಆಹಾರ ಇಲಾಖೆ ಉಪನಿರ್ದೇಶಕರಾದ ವಸುಂಧರ ಹೆಗಡೆ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರದೀಪ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಸುಭದ್ರದೇವಿ, ಜಿಲ್ಲಾ ಉದ್ಯೋಗಾಧಿಕಾರಿ ಎ. ಮಹಮ್ಮದ್ ಅಕ್ಬರ್, ಅಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಪಾನಿಂದಲೇ ಆಶಾ ಮನವೊಲಿಕೆಗೆ ಸಿಎಂ ಯತ್ನ
ವೈದ್ಯರ ಚೀಟಿ ಇಲ್ಲದೆ ಗರ್ಭಪಾತ ಮಾತ್ರೆಗಳ ಮಾರಾಟ: ಅಧಿಕಾರಿಗಳ ದಾಳಿ