ಕನ್ನಡಪ್ರಭ ವಾರ್ತೆ ಬೀದರ್
ಅವರು ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡ, ಎಸ್‌ಐಆರ್ ಯೋಜನೆಯ ಕುರಿತು ಅರಿವು ಮೂಡಿಸುವ ಹಾಗೂ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯವಾದ ಮಾಹಿತಿ ಮತ್ತು ಮಾರ್ಗದರ್ಶನ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸಾರ್ವಜನಿಕರಿಗೆ ಯೋಜನೆಯ ಬಗ್ಗೆ ಸೂಕ್ತ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸಹಕಾರ ಒದಗಿಸಬೇಕು. ಯೋಜನೆಯ ಅನುಷ್ಠಾನದಲ್ಲಿ ಎದುರಾಗುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಸರ್ಕಾರದ ಆಶಯದಂತೆ ಯೋಜನೆಯ ಸೌಲಭ್ಯಗಳನ್ನು ಜನರಿಗೆ ತಲುಪುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶರಣಬಸಪ್ಪ ಕೊಟ್ಟೆಪ್ಪಗೋಳ ಮಾತನಾಡಿ, ಯಾವುದೇ ಯೋಜನೆ ಯಶಸ್ವಿಯಾಗಬೇಕಾದರೆ ಅದರ ಅನುಷ್ಠಾನದಲ್ಲಿ ತೊಡಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಯೋಜನೆಯ ಸಂಪೂರ್ಣ ಮಾಹಿತಿ ಹಾಗೂ ಸ್ಪಷ್ಟ ಅರಿವು ಇರಬೇಕು. ಎಸ್‌ಐಆರ್ ಯೋಜನೆಯ ಉದ್ದೇಶಗಳನ್ನು ಪರಿಣಾಮಕಾರಿಯಾಗಿ ಈಡೇರಿಸಲು ಎಲ್ಲರೂ ಸಮನ್ವಯದಿಂದ ಹಾಗೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕೆಂದರು.
ತರಬೇತಿ ಕಾರ್ಯಾಗಾರದಲ್ಲಿ ಎಸ್‌ಐಆರ್ ಯೋಜನೆಯ ಉದ್ದೇಶ, ಅನುಷ್ಠಾನ ವಿಧಾನ, ಮಾರ್ಗಸೂಚಿಗಳು ಹಾಗೂ ಕ್ಷೇತ್ರಮಟ್ಟದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ವಿವರವಾದ ಮಾಹಿತಿ ನೀಡಿದರು. ತರಬೇತಿಯಲ್ಲಿ ಭಾಗವಹಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.