ಅರ್ಹರು ಮತದಾನ ಪಟ್ಟಿಯಿಂದ ಹೊರಗುಳಿಯದಿರಲಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್‌

KannadaprabhaNewsNetwork |  
Published : Jul 04, 2026, 02:15 AM IST
ಗದಗ ಮುನ್ಸಿಪಲ್ ಹೈಸ್ಕೂಲ ಆವರಣದಲ್ಲಿ ಶುಕ್ರವಾರ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ 2026 ಅಂಗವಾಗಿ ನಡೆದ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಚಾಲನೆ ನೀಡಿದರು. | Kannada Prabha

ಸಾರಾಂಶ

ದೇಶದ ನಿಯಮಾವಳಿಗಳ ಪ್ರಕಾರ ಪ್ರತಿ 10 ವರ್ಷಗಳಿಗೊಮ್ಮೆ ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ಹೊಸದಾಗಿ ಸಿದ್ಧಪಡಿಸುವ ಪ್ರಕ್ರಿಯೆ ನಡೆಯುತ್ತದೆ.

ಗದಗ: ನಮ್ಮ ದೇಶವು ಜಗತ್ತಿನಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಇಲ್ಲಿ ದೇಶವನ್ನು ಮುನ್ನಡೆಸುವ ಮತ್ತು ಕಾನೂನು ರೂಪಿಸುವ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಪರಮಾಧಿಕಾರ ಇರುವುದು ಮತದಾರರಿಗೆ ಮಾತ್ರ. ಅರ್ಹ ಮತದಾರರು ಮತದಾನ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್‌ ತಿಳಿಸಿದರು.

ನಗರದ ನಗರದ ಮುನ್ಸಿಪಲ್ ಹೈಸ್ಕೂಲ್‌ ಆವರಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಸ್ವಿಪ್ ಸಮಿತಿ ತಾಲೂಕು ಸ್ವಿಪ್ ಸಮಿತಿ ಸಹಯೋಗದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ 2026 ಅಂಗವಾಗಿ ನಡೆದ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ದೇಶದ ನಿಯಮಾವಳಿಗಳ ಪ್ರಕಾರ ಪ್ರತಿ 10 ವರ್ಷಗಳಿಗೊಮ್ಮೆ ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ಹೊಸದಾಗಿ ಸಿದ್ಧಪಡಿಸುವ ಪ್ರಕ್ರಿಯೆ ನಡೆಯುತ್ತದೆ. ಈ ಹಿಂದೆ ಇದ್ದ ಮತದಾರರು ಸದ್ಯ ಅದೇ ಸ್ಥಳದಲ್ಲಿದ್ದಾರೆಯೇ ಹೊಸದಾಗಿ ಯಾರೆಲ್ಲಾ ಸೇರ್ಪಡೆಯಾಗಬೇಕು ಎಂಬುದನ್ನು ಗುರುತಿಸಿ ದೃಢೀಕರಿಸುವ ಸಲುವಾಗಿ ಈ ವರ್ಷ(2026) ವಿಶೇಷ ಪರಿಷ್ಕರಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿರುವ ಅಧಿಕೃತ ಮತದಾರರ ನಿಖರವಾದ ದಾಖಲೆಯನ್ನು ಸಿದ್ಧಪಡಿಸಲಾಗುತ್ತಿದೆ ಎಂದರು.

ಜಿಪಂ ಮುಖ್ಯ ಯೋಜನಾಧಿಕಾರಿ ಎ.ಎ. ಕಂಬಾಳಿಮಠ ಪ್ರಾಸ್ತಾವಿಕವಾಗಿ ಮಾತನಾಡಿ, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಅತ್ಯಂತ ಪ್ರಮುಖವಾಗಿದ್ದು, ಈ ಎಲ್ಲ ಚುನಾವಣೆಗಳು ಮತದಾರರ ಪಟ್ಟಿಯ ಆಧಾರದ ಮೇಲೆಯೇ ನಡೆಯುತ್ತವೆ. ಹಾಗಾಗಿ ಅರ್ಹ ಮತದಾರರನ್ನು ಒಳಗೊಂಡ ನಿಖರವಾದ ಪಟ್ಟಿಯನ್ನು ಸಿದ್ಧಪಡಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ ಎಂದರು.

ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಡಾ. ನಂದಾ ಹಣಬರಹಟ್ಟಿ, ಆರ್. ರುದ್ರಣ್ಣಗೌಡ, ಆರ್.ಎಸ್. ಬುರಡಿ, ಮೆಹಬೂಬ ತುಂಬರಮಟ್ಟಿ, ಅಮಿತ ಬಿದರಿ, ಡಾ. ಶರಣು ಗೊಗೇರಿ, ಕೊಟ್ರೇಶ್ವರ ವಿಭೂತಿ ಸೇರಿದಂತೆ ಎನ್ಸಿಸಿ, ಸ್ಕೌಟ್ ಆ್ಯಂಡ್ ಗೈಡ್ಸ್, ಶಾಲಾ- ಕಾಲೇಜು ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಇದ್ದರು. ಜಾಗೃತಿ ಜಾಥಾ

ಎಸ್‌ಐಆರ್‌ ಕುರಿತು ಜನಜಾಗೃತಿ ರ‍್ಯಾಲಿ ವಾಕ್‌ಥಾನ್ ನಗರದ ಮುನ್ಸಿಪಲ್ ಹೈಸ್ಕೂಲ್‌ನಿಂದ ಪ್ರಾರಂಭವಾಗಿ ಗಾಂಧಿ ಸರ್ಕಲ್, ಮಹೇಂದ್ರಕರ ಸರ್ಕಲ್, ಟಾಂಗಾಕೂಟ, ಬಸವೇಶ್ವರ ಸರ್ಕಲ್, ಜೋಡು ಮಾರುತಿ ರಸ್ತೆ, ನಂತರ ಮುಳಗುಂದ ನಾಕಾದವರೆಗೆ ಬಂದು ಮುಕ್ತಾಯವಾಗೊಂಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೈಕೊಟ್ಟ ಮುಂಗಾರು; ಗುರ್ಜಿ ಆಟ, ಪ್ರಾರ್ಥನೆ
ಸೌರ ಶಕ್ತಿ ಬಳಕೆಗೆ ಹೆಚ್ಚಿನ ಆದ್ಯತೆ ನೀಡಿ: ಶಾಸಕ ಭೀಮಣ್ಣ