ಕುಶಾಲನಗರ: ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್ಐಆರ್) ಅಭಿಯಾನದಲ್ಲಿ ಮನೆ ಮನೆಗೆ ತೆರಳಿ ಶೇ. 99ರಷ್ಟು ಅರ್ಜಿ ನಮೂನೆಗಳನ್ನು ನೀಡುವ ಗುರಿ ಸಾಧಿಸಲಾಗಿದೆ ಮತ್ತು ಶೇ. 30ರಷ್ಟು ಮತದಾರರ ಅರ್ಜಿಗಳನ್ನು ಸ್ವೀಕರಿಸಿ ಡಿಜಿಟಲೀಕರಣ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.
ಕುಶಾಲನಗರ ಬೈಚನಹಳ್ಳಿ ಬಳಿ ಮಾರಿಯಮ್ಮ ದೇವಾಲಯದಿಂದ ಜಾಥಾಕ್ಕೆ ಜಿಲ್ಲಾಧಿಕಾರಿಗಳು ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು.
ಕಲಾವಿದ ಈ. ರಾಜು ಅವರ ತಂಡದಿಂದ ಬೀದಿ ನಾಟಕ ಮೂಲಕ ಜನರಿಗೆ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಅರಿವು ಮೂಡಿಸಲಾಯಿತು.ಸ್ಥಳೀಯ ಶಾಲೆ, ಕಾಲೇಜಿನ ಸ್ಕೌಟ್ಸ್ ಗೈಡ್ಸ್, ರೋಟರಿ, ಫಾತಿಮಾ ಪ್ರೌಢಶಾಲೆ ವಿದ್ಯಾರ್ಥಿಗಳು, ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಪುರಸಭೆ ಪೌರ ಕಾರ್ಮಿಕರು, ಸಿಬ್ಬಂದಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.ಜಾಥಾದಲ್ಲಿ ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋಮಲ್, ಅರಣ್ಯ ಇಲಾಖೆಯ ಮಡಿಕೇರಿ ವಿಭಾಗದ ಉಪ ಸಂರಕ್ಷಣಾಧಿಕಾರಿ ಅಭಿಷೇಕ್ ವಿ., ಅರಣ್ಯ ಇಲಾಖೆ ಪ್ರೊಬೆಷನರಿ ಅಧಿಕಾರಿ ಸೆಂದಿಲ್, ಮುಖ್ಯ ಕಾರ್ಯನಿರ್ವಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ತಾಲೂಕು ತಹಸಿಲ್ದಾರ್ ಕೃಷ್ಣಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಕುಶಾಲನಗರ ಪುರಸಭೆ ಮುಖ್ಯ ಅಧಿಕಾರಿ ಟಿ.ಎಸ್. ಗಿರೀಶ್, ಮತ್ತಿತರ ಅಧಿಕಾರಿ ಸಿಬ್ಬಂದಿ ಪಾಲ್ಗೊಂಡಿದ್ದರು.