ತಾಯಿ ಮಕ್ಕಳ ಆರೈಕೆ, ಗುಣಮಟ್ಟದ ಸೇವೆ ನಿಗಾವಹಿಸಿ: ಡಾ.ರಜನಿ ಎಂ

KannadaprabhaNewsNetwork |  
Published : Sep 30, 2026, 01:30 AM IST
28ಕೆಪಿಆರ್‌ಸಿಆರ್‌ 05:  | Kannada Prabha

ಸಾರಾಂಶ

ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನೀಡುವಲ್ಲಿ ಯಾವುದೇ ರಾಜಿಯಾಗದಂತೆ ಕರ್ತವ್ಯ ನಿರ್ವಹಿಸಬೇಕೆಂದು ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕಿ ಡಾ.ರಜನಿ ಎಂ. ಹೇಳಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನೀಡುವಲ್ಲಿ ಯಾವುದೇ ರಾಜಿಯಾಗದಂತೆ ಕರ್ತವ್ಯ ನಿರ್ವಹಿಸಬೇಕೆಂದು ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕಿ ಡಾ.ರಜನಿ ಎಂ. ಹೇಳಿದರು.

ಸ್ಥಳೀಯ ತಾಯಿ ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡಿಸಿ ಮಾತನಾಡಿ, ತಾಯಿ ಮಕ್ಕಳ ಆಸ್ಪತ್ರೆ, ಹಾಗೂ ಜಿಲ್ಲಾ ಔಷಧಿ ಉಗ್ರಾಣಕ್ಕೆ ಭೇಟಿ ನೀಡಿ, ಆಸ್ಪತ್ರೆಯ ಹೆರಿಗೆ ಕೊಠಡಿ, ಹೆರಿಗೆ ವಾರ್ಡ್, ಔಷಧಿ ವಿಭಾಗ, ಪ್ರಯೋಗಾಲಯ ಸೇರಿದಂತೆ ವಿವಿಧ ವಿಭಾಗಗಳನ್ನು ಪರಿಶೀಲಿಸಿ ಆಸ್ಪತ್ರೆಗೆ ಆಗಮಿಸಿದ ಸಾರ್ವಜನಿಕರು, ತಾಯಂದಿರನ್ನು ಮಾತನಾಡಿಸಿ ಆಸ್ಪತ್ರೆಯಲ್ಲಿ ಒದಗಿಸುವ ಸೇವೆಗಳ ಬಗ್ಗೆ ಚರ್ಚಿಸಿದರು.

ತಾಯಿ ಮಗುವಿನ ಆರೈಕೆಗೆ ಹೆಚ್ಚಿನ ಒತ್ತು ನೀಡುವಂತೆ ಹಾಗೂ ಅಸ್ಪತ್ರೆಗೆ ಆಗಮಿಸುವ ಪ್ರತಿಯೊಬ್ಬರೊಂದಿಗೂ ಸೌಜನ್ಯಯುತವಾಗಿ ನಡೆದುಕೊಂಡು ಚಿಕಿತ್ಸೆ ನೀಡಲು ಹಾಗೂ ಆಸ್ಪತ್ರೆಯ ಹೊರ ಮತ್ತು ಒಳ ಆವರಣವನ್ನು ಸದಾ ಶುಚಿತ್ವದಿಂದ ಕಾಪಾಡುವಂತೆ ಸೂಚಿಸಿದರು.

ಇದೆ ವೇಳೆ ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರದ ಸ್ಕಿಲ್‌ಲ್ಯಾಬ್‌ಗೆ ಭೇಟಿ ನೀಡಿ ಹೆರಿಗೆಯ ನಿರ್ವಹಣೆಯ ತಾಂತ್ರಿಕ ಕೌಶಲ್ಯದ ಕುರಿತು ಚರ್ಚಿಸಿದರು. ಇದಕ್ಕೂ ಮುಂಚೆ ಗುಂಜಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಡಿಎಚ್ಒ ಡಾ.ನಂದಿತಾ ಎಂ.ಎನ್., ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ಸುರೇಂದ್ರ ಬಾಬು, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಗಣೇಶ್ ಕೆ., ಡಿಎಫ್ಡಬ್ಲ್ಯುಒ ಡಾ.ಶಿವಕುಮಾರ್ ನಾರಾ, ಡಿಟಿಒ ಡಾ. ಯಶೋಧಾ, ಕೆಸೆಪ್ಸ್ನ ಹಿರಿಯ ಫಾರ್ಮಸಿ ಅಧಿಕಾರಿ ವಿಜಯಲಕ್ಷ್ಮೀ, ಟಿಎಚ್ಒ ಡಾ.ಸತೀಶ್ ಕೆ., ನಿರ್ದೇಶನಾ ಲಯದ ಕಚೇರಿ ಅಧಿಕ್ಷಕ ಪಿ.ಎಮ್. ರಮೇಶ್ ಸೇರಿದಂತೆ ಆಡಳಿತ ವೈದ್ಯಾಧಿಕಾರಿಗಳು, ತಜ್ಞ ವೈದ್ಯರು, ಸಿಬ್ಬಂದಿಯವರು ಉಪಸ್ಥಿತರಿದ್ದರು.

---

28ಕೆಪಿಆರ್‌ಸಿಆರ್‌ 05: ರಾಯಚೂರಿನ ತಾಯಿ ಮಕ್ಕಳ ಆಸ್ಪತ್ರೆಗೆ ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕಿ ಡಾ.ರಜನಿ ಎಂ. ಭೇಟಿ ನೀಡಿ, ಪರಿಶೀಲನೆ ನಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅರ್ಥಪೂರ್ಣವಾಗಿ ದಸರಾಗೆ ಅಗತ್ಯ ಕ್ರಮವಹಿಸಿ: ಜುಬಿನ್‌ ಮೊಹಾಪಾತ್ರ
ಪ್ರವಾಸಿ ತಾಣಗಳನ್ನು ಉಳಿಸಿ, ಬೆಳೆಸುವುದು ಆದ್ಯ ಕರ್ತವ್ಯ: ಜಿಲ್ಲಾಧಿಕಾರಿ ಪೂವಿತಾ