ಗುಣಮಟ್ಟ ಕಾಮಗಾರಿ ಕೈಗೊಳ್ಳಿ: ದರ್ಶನಾಪುರ

KannadaprabhaNewsNetwork |  
Published : Sep 12, 2026, 01:15 AM IST
ಯಾದಗಿರಿಯಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾ ಕಾಂಗ್ರೆಸ್ ಪಕ್ಷದ ನೂತನ ಕಚೇರಿ ಕಟ್ಟಡ ಕಾಮಗಾರಿಯನ್ನು ಮಾಜಿ ಸಚಿವ ಹಾಗೂ ಶಾಸಕ ಶರಣಬಸಪ್ಪ ದರ್ಶನಾಪೂರ ವೀಕ್ಷಿಸಿ, ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದರು. | Kannada Prabha

ಸಾರಾಂಶ

ನಗರದಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾ ಕಾಂಗ್ರೆಸ್ ಪಕ್ಷದ ನೂತನ ಕಚೇರಿ ಕಟ್ಟಡ ಕಾಮಗಾರಿ ಗುಣಮಟ್ಟದಿಂದ ಕೈಗೊಳ್ಳಿ ಅಂದಾಗ ಮಾತ್ರ ಎಲ್ಲರಿಗೂ ಅನುಕೂಲವಾಗುತ್ತದೆ ಎಂದು ಶಾಸಕ ಶರಣಬಸಪ್ಪ ದರ್ಶನಾಪುರ ಹೇಳಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ನಗರದಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾ ಕಾಂಗ್ರೆಸ್ ಪಕ್ಷದ ನೂತನ ಕಚೇರಿ ಕಟ್ಟಡ ಕಾಮಗಾರಿ ಗುಣಮಟ್ಟದಿಂದ ಕೈಗೊಳ್ಳಿ ಅಂದಾಗ ಮಾತ್ರ ಎಲ್ಲರಿಗೂ ಅನುಕೂಲವಾಗುತ್ತದೆ ಎಂದು ಶಾಸಕ ಶರಣಬಸಪ್ಪ ದರ್ಶನಾಪುರ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿದ ಅವರು, 1.5 ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಕಚೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿ ಬಳಿಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರಡ್ಡಿ ಪಾಟೀಲ್ ಅನಪೂರ, ಇಂಜಿನಿಯರ್ ಹಾಗೂ ಗುತ್ತಿಗೆದಾರರ ಜತೆಗೆ ಚರ್ಚಿಸಿ ಮಾತನಾಡಿದರು. ಕಟ್ಟಡ ಅಚ್ಚುಕಟ್ಟಾಗಿ ನಿರ್ಮಾಣ ಮಾಡಲು ಇನ್ನೂ ಅನುದಾದ ಅವಶ್ಯಕತೆ ಇದ್ದರೆ ಒದಗಿಸಲಾಗುವುದು. ಸುಸಜ್ಜಿತ ಕಟ್ಟಡ ನಿರ್ಮಾಣ ಆಗಬೇಕೆಂಬುದು ಎಲ್ಲರ ಆಶಯ ಎಂದರು.

ಕಾಂಗ್ರೆಸ್ ಪಕ್ಷದಿಂದ ಈಗಾಗಲೇ ಎಲ್ಲಾ ಭಾಗದಲ್ಲಿ ಕಚೇರಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಶಹಾಪೂರ ನಿರ್ಮಾಣ ಮಾಡುತ್ತಿರುವ ಕಚೇರಿ ಕಟ್ಟಡ ಜನವರಿಯಲ್ಲಿ ಉದ್ಘಾಟನೆಗೊಳ್ಳಲಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರಡ್ಡಿ ಪಾಟೀಲ್ ಅನಪೂರ, ಪ್ರಧಾನ ಕಾರ್ಯದರ್ಶಿ ಬಸ್ಸುಗೌಡ ಬಿಳ್ಹಾರ, ವಕ್ತಾರ ಶಾಮಸನ್ ಮಾಳಿಕೇರಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಈಟಿ, ಮುಖಂಡರಾದ ಸಿದ್ಲಿಂಗರಡ್ಡಿ ಉಳ್ಳೆಸೂಗೂರ, ಶರಣಪ್ಪ ಶೆಟ್ಟಿಗೇರಾ, ಭೀಮರಾಯ ಠಾಣಾಗುಂದಿ, ತಾಯಪ್ಪ ಯಾದವ, ಸಾಯಿಬಣ್ಣ ಬಾಡಿಯಾಳ, ಬಂದಪ್ಪಗೌಡ ಲಿಂಗೇರಿ, ಶಿವು ಬೆಳಗುಂದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

2ನೇ ಬಾರಿ ಜಿಲ್ಲಾಧ್ಯಕ್ಷರಾಗಿ ಅನಪೂರ ನೇಮಕ: ಯಾದಗಿರಿ: ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ 2ನೇ ಬಾರಿಗೆ ಬಸರಡ್ಡಿ ಮಾಲಿ ಪಾಟೀಲ್ ಅನಪೂರ ನೇಮಕ ಮಾಡಲಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಈ ಮೊದಲು ಅಧ್ಯಕ್ಷರಾಗಿದ್ದ ಅನಪೂರ, ಎಲ್ಲರ ಸಹಕಾರದಿಂದ ಜಿಲ್ಲೆಯಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿ ಕಾಂಗ್ರೆಸ್ ಪಕ್ಷವನ್ನು ಸಧೃಢವಾಗಿ ಕಟ್ಟುವ ಮೂಲಕ ಜನರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿ, ಹೈಕಮಾಂಡ್ ಗಮನ ಸೆಳೆದಿದ್ದರು. ಅವರ ಕಾರ್ಯವೈಖರಿ ಗಮನಿಸಿದ ಪಕ್ಷದ ನಾಯಕರು ಮತ್ತೊಮ್ಮೆ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ಜವಾಬ್ದಾರಿ ಮುಂದುವರಿಸಿಕೊಂಡು ಹೋಗಲು ಅವಕಾಶ ಕಲ್ಪಿಸಿದ್ದಾರೆ. ಪಕ್ಷ ಸಂಘಟನೆಗೆ ಮೊದಲು ಆದ್ಯತೆ ನೀಡಿಕೊಂಡು ಬಂದಿರುವ ತಾವು, ಮುಂದಿನ ದಿನಗಳಲ್ಲಿ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಕ್ರಿಯಾಶೀಲ ತಂಡ ರಚನೆ ಮಾಡುವ ಮೂಲಕ 2028ರ ವಿಧಾನಸಭಾ ಚುನಾವಣೆಯಲ್ಲಿ 4 ಕ್ಷೇತ್ರಗಳಲ್ಲಿ ಕೈ ಅಭ್ಯರ್ಥಿಗಳನ್ನು ಗೆಲ್ಲಿಸಲು ಯತ್ನಿಸುತ್ತೇನೆ ಎಂದು ಬಸರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್‌ಐಆರ್‌: ಜಿಲ್ಲೆಯ 1,05,493 ಮತದಾರರಿಗೆ ನೋಟೀಸ್‌
ಬಸವಯುಗ ಮಾನವರಿಗೆ ಘನತೆ ತಂದುಕೊಟ್ಟ ಯುಗ