ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸವಲತ್ತು ತಲುಪಿಸಿ

KannadaprabhaNewsNetwork |  
Published : Aug 24, 2026, 01:15 AM IST
23ಕೆಆರ್ ಎಂಎನ್ 2.ಜೆಪಿಜಿರಾಮನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸಚಿವ ಬಾಲಕೃಷ್ಣರವರು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. | Kannada Prabha

ಸಾರಾಂಶ

ರಾಮನಗರ: ಸಮಾಜದ ಕಟ್ಟಕಡೆಯ ಮನುಷ್ಯನಿಗೂ ಸರ್ಕಾರದ ವತಿಯಿಂದ ನೀಡಲಾಗುವ ಸೌಲಭ್ಯಗಳನ್ನು ತಲುಪಿಸಲು ಅಧಿಕಾರಿಗಳು ಶ್ರಮವಹಿಸಿ ಕೆಲಸ ಮಾಡುವಂತೆ ಪೌರಾಡಳಿತ ಸಚಿವ ಎಚ್.ಸಿ.ಬಾಲಕೃಷ್ಣ ಅಧಿಕಾರಿಗಳಿಗೆ ತಾಕೀತು ಮಾಡಿದರು

ರಾಮನಗರ: ಸಮಾಜದ ಕಟ್ಟಕಡೆಯ ಮನುಷ್ಯನಿಗೂ ಸರ್ಕಾರದ ವತಿಯಿಂದ ನೀಡಲಾಗುವ ಸೌಲಭ್ಯಗಳನ್ನು ತಲುಪಿಸಲು ಅಧಿಕಾರಿಗಳು ಶ್ರಮವಹಿಸಿ ಕೆಲಸ ಮಾಡುವಂತೆ ಪೌರಾಡಳಿತ ಸಚಿವ ಎಚ್.ಸಿ.ಬಾಲಕೃಷ್ಣ ಅಧಿಕಾರಿಗಳಿಗೆ ತಾಕೀತು ಮಾಡಿದರು.

ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕರ ಸಮಸ್ಯೆಯನ್ನು ಬಗೆಹರಿಸಲು ಪ್ರಜಾಸೇವೆ ಎಂಬ ನೂತನ ಇಲಾಖೆಯನ್ನು ಪ್ರಾರಂಭಿಸಲಾಗಿದೆ. ಇದು ಮುಖ್ಯಮಂತ್ರಿಗಳ ಮಹತ್ವಾಕಾಂಕ್ಷಿ ಇಲಾಖೆಯಾಗಿದ್ದು, ತಾಲೂಕು ಮಟ್ಟದಲ್ಲಿ ಪ್ರಜಾಸೇವೆ ಆಂದೋಲನಾ ಸಭೆಗೆ ಸೆಪ್ಟೆಂಬರ್ 5ರಂದು ಚನ್ನಪಟ್ಟಣದಲ್ಲಿ ಚಾಲನೆ ನೀಡಲಾಗುವುದು. ಸಾರ್ವಜನಿಕರಿಗೆ ಕಾನೂನು ಬದ್ಧವಾಗಿ ಹಾಗೂ ಕಾನೂನಿನ ಚೌಕಟ್ಟಿನಲ್ಲಿ ಒದಗಿಸಬಹುದಾದ ಸವಲತ್ತುಗಳು, ಯೋಜನೆಗಳನ್ನು ನಿಗದಿತ ಕಾಲ ಮಿತಿಯೊಳಗೆ ಒದಗಿಸುವುದು ಅಥವಾ ಸರ್ಕಾರದ ಫರಿದಿಗೆ ಅನ್ವಯವಾಗದಿದ್ದಲ್ಲೀ ಅದಕ್ಕೆ ಹಿಂಬರಹ ನೀಡುವಂತಹ ಕೆಲಸ ಮಾಡಬೇಕು, ಇದು ಮುಖ್ಯಮಂತ್ರಿಯವರು ಜನಸ್ನೇಹಿ ಆಡಳಿತಕ್ಕೆ ಉತ್ತಮ ಉದಾಹರಣೆಯಾಗಿದೆ ಅಧಿಕಾರಿಗಳೆಲ್ಲರೂ ಪಾರದರ್ಶಕವಾಗಿ ಕೆಲಸ ಮಾಡಬೇಕು ಎಂದರು.

ಮುಖ್ಯವಾಗಿ ಜಿಲ್ಲೆಯ ಸಾರ್ವಜನಿಕರಿಗೆ ವಿವಿಧ ಇಲಾಖೆಗಳಲ್ಲಿನ ಸರ್ಕಾರಿ ಸೇವೆಗಳು ಹಾಗೂ ಆಡಳಿತಾತ್ಮಕ ಸೌಲಭ್ಯಗಳು ಸಮರ್ಪಕವಾಗಿ ಮತ್ತು ಸಕಾಲದಲ್ಲಿ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳ ಅಧಿಕಾರಿಗಳು ಪ್ರತಿ ದಿನ ಮಧ್ಯಾಹ್ನ 3.30 ರಿಂದ ಸಂಜೆ 5.30ರ ವರೆಗೆ ಕಚೇರಿಯಲ್ಲಿ ಕಡ್ಡಾಯವಾಗಿ ತಮ್ಮ ಕಚೇರಿಗಳಲ್ಲಿ ಹಾಜರಿದ್ದು, ಸಾರ್ವಜನಿಕರ ಭೇಟಿಗೆ ಲಭ್ಯವಿರುವಂತೆ ಅವರು ತಿಳಿಸಿದರು.

ಜಿಲ್ಲಾ ಮಟ್ಟ ಸೇರಿ ತಾಲೂಕು ಮಟ್ಟದಲ್ಲಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು, ಗ್ರಾಮ ಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಕಡ್ಡಾಯವಾಗಿ ಸಾರ್ವಜನಿಕರ ಭೇಟಿಗೆ ಲಭಿಸಬೇಕು, ಸರ್ಕಾರಿ ನೌಕರರು ಹಾಗೂ ಸಿಬ್ಬಂದಿಯು ಸರ್ಕಾರದಿಂದ ನೀಡಲಾಗಿರುವ ಗುರುತಿನ ಚೀಟಿಯನ್ನು ಧರಿಸಬೇಕು ಎಂದು ಹೇಳಿದರು.

ಬೆಂಗಳೂರು ದಕ್ಷಿಣ ಜಿಲ್ಲೆ, ಮುಖ್ಯಮಂತ್ರಿಯವರು ಪ್ರತಿನಿಧಿಸುವ ಕ್ಷೇತ್ರವಾಗಿದ್ದು, ಎಲ್ಲಾ ಇಲಾಖೆಗಳ ಅಧಿಕಾರಿ- ಸಿಬ್ಬಂದಿಗಳು ಜವಾಬ್ದಾರಿ ಅರಿತು ಕೆಲಸ ಮಾಡಬೇಕು, ಪಾರದರ್ಶಕವಾಗಿ ಹಾಗೂ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವಂತೆ ಬಾಲಕೃಷ್ಣ ಸೂಚಿಸಿದರು.

ಶಾಸಕ ಸಿ.ಪಿ.ಯೋಗೇಶ್ವರ್ ಮಾತನಾಡಿ, ಬರುವ ಸೆಪ್ಟೆಂಬರ್ ಮಾಹೆಯಲ್ಲಿ ಚನ್ನಪ್ಟಣದಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ, ಆ ಕಾರ್ಯಕ್ರಮದಲ್ಲಿ ಉದ್ಘಾಟನೆ ಅಥವಾ ಶಂಕುಸ್ಥಾಪನೆಗೆ ಸಿದ್ಧವಿರುವ ಯೋಜನೆಗಳ ವಿವರಗಳನ್ನು ಒದಗಿಸುವಂತೆ ಅಧಿಕಾರಿಗಳಲ್ಲಿ ಕೋರಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್. ರವಿ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಕೆ. ರಾಜು, ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನ್ಮೋಲ್ ಜೈನ್, ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ , ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

23ಕೆಆರ್ ಎಂಎನ್ 2.ಜೆಪಿಜಿ

ರಾಮನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಾಲಕೃಷ್ಣ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಶಾಸಕ ಯೋಗೇಶ್ವರ್, ಎಂಎಲ್ಸಿ ಎಸ್. ರವಿ, ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಜಿಪಂ ಸಿಇಒ ಅನ್ಮೋಲ್ ಜೈನ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಲಬುರಗಿಯಲ್ಲಿ ಉದ್ಯಮಿ ಪಾಟೀಲ್‌ ಪುಣ್ಯಸ್ಮರಣೆ
224 ಕ್ಷೇತ್ರಗಳ ಅಂತರ್ಜಲ ಹೆಚ್ಚಳಕ್ಕೆ ಯೋಜನೆ: ಡಾ.ಅಜಯ್‌ ಧರಂಸಿಂಗ್‌