ಶಿರಹಟ್ಟಿ: ಬೇಸಿಗೆಯಲ್ಲಿ ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ಮಾಡುವಂತಿಲ್ಲ ಎಂದು ತಹಸೀಲ್ದಾರ್ ಕೆ. ರಾಘವೇಂದ್ರ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.ತಹಸೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ಕರೆದಿದ್ದ ತಾಲೂಕು ಮಟ್ಟದ ಅಧಿಕಾರಿಗಳ ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೇಸಿಗೆ ದಿನಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾದಾಗ ಕುಡಿಯುವ ನೀರಿನ ಅವಶ್ಯಕತೆ ಹೆಚ್ಚುತ್ತದೆ. ಆದ್ದರಿಂದ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ನೀರಿನ ತೊಂದರೆ ಆಗದಂತೆ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲದೆ ಹಾಳಾದ ಪೈಪ್‌ಲೈನ್‌ಗಳನ್ನು ತಕ್ಷಣ ದುರಸ್ತಿ ಮಾಡುವುದು ಮುಖ್ಯ. ಜನರು ನೀರನ್ನು ವ್ಯರ್ಥ ಮಾಡದಂತೆ ಜಾಗೃತಿ ಮೂಡಿಸಬೇಕು ಎಂದರು.೨೦೨೬ನೇ ಸಾಲಿನ ಬೇಸಿಗೆಯಲ್ಲಿ ಎಲ್ಲ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರಿಗೆ ತೊಂದರೆ ಉಂಟಾಗದಂತೆ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಅವಶ್ಯವಿರುವ ಮೊತ್ತವನ್ನು ಕೇಂದ್ರ ಹಾಗೂ ರಾಜ್ಯಗಳ ಬರ ಪರಿಹಾರ ನಿಧಿ ಹಾಗೂ ಇಲಾಖೆಯ ಟಾಸ್ಕ್‌ಫೋರ್ಸ್ ಅಡಿ ಸಂಯೋಜಿತಗೊಳಿಸಿ ಬಳಸಿಕೊಂಡು ಸಮರ್ಪಕವಾಗಿ ಕುಡಿಯುವ ನೀರನ್ನು ಒದಗಿಸಲು ಗ್ರಾಮ ಪಂಚಾಯಿತಿಗಳು, ತಾಲೂಕು ಪಂಚಾಯಿತಿಗಳು ಸಮನ್ವಯದೊಂದಿಗೆ ಕ್ರಮ ಕೈಗೊಂಡು ಕುಡಿಯುವ ನೀರಿನ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದರು.ತಾಲೂಕಿನಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಕಡಿಮೆಯಾಗದಂತೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಮತ್ತು ಬೆಸಿಗೆಯ ತಾಪಮಾನ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕು. ಶಿರಹಟ್ಟಿ ಪಟ್ಟಣದ ೧೮ ವಾರ್ಡುಗಳು ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಮುಂದಿನ ಮೂರು ತಿಂಗಳು ನೀರಿನ ಕೊರತೆ ಉಂಟಾಗುವುದನ್ನು ಅಧಿಕಾರಿಗಳು ಗುರುತಿಸಲು ಮುಂದಾಗಬೇಕು ಎಂದರು.
ಆದರೆ ಏಜೆನ್ಸಿಯವರ ಮಾಹಿತಿಯಂತೆ ಸಾರ್ವಜನಿಕರು ಮುಂದಿನ ೧೦ರಿಂದ ೧೫ ದಿನಗಳಿಗೆ ಆಗುವಷ್ಟು ಗ್ಯಾಸ್ ಮನೆಯಲ್ಲಿದ್ದರೂ ಮುಂಗಡ ಬುಕ್ಕಿಂಗ್ ಮಡುತ್ತಿರುವುದಾಗಿ ತಿಳಿಸಿದ್ದಾರೆ. ಈ ರೀತಿ ಜನರು ಎಲ್‌ಪಿಜಿ ಗ್ಯಾಸ್‌ಗೆ ಸಂಬಂಧಿಸಿದಂತೆ ಭಯಭೀತರಾಗುವ ಅಗತ್ಯತೆಯಿಲ್ಲ. ಸಾರ್ವಜಿನಿಕರಿಗೆ ಪೂರೈಸಲು ಗ್ಯಾಸ್ ಲಭ್ಯವಿದೆ ಎಂದರು.