ಮತದಾರರ ಪಟ್ಟಿಯಲ್ಲಿ ಗೊಂದಲ ಇಲ್ಲದಂತೆ ನೋಡಿಕೊಳ್ಳಿ: ಡಾ. ಧನಂಜಯ ಸರ್ಜಿ

KannadaprabhaNewsNetwork |  
Published : Nov 21, 2025, 02:30 AM IST
ಪ್ರಶಸ್ತಿ ವಿಜೇತರನ್ನು ಸನ್ಮಾನಿಸಲಾಯಿತು.  | Kannada Prabha

ಸಾರಾಂಶ

ಮತದಾರರ ಪಟ್ಟಿಯಲ್ಲಿ ಯಾವುದೇ ಗೊಂದಲ ಇಲ್ಲದಂತೆ ಅರ್ಹ ಮತದಾರರು ಪಟ್ಟಿಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಕಾರವಾರ

ಮತದಾರರ ಪಟ್ಟಿಯಲ್ಲಿ ಯಾವುದೇ ಗೊಂದಲ ಇಲ್ಲದಂತೆ ಅರ್ಹ ಮತದಾರರು ಪಟ್ಟಿಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ತಿಳಿಸಿದರು.

ನಗರದ ಪ್ರೀಮಿಯರ್ ಹೊಟೇಲ್ ಸಭಾಭವನದಲ್ಲಿ ಹಾಗೂ ಅಂಕೋಲಾದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಬಿಎಲ್ ಎ -2 ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದರು.

ಚುನಾವಣಾಗೆ ಸಂಬಂಧಿಸಿದಂತೆ ಬಿಎಲ್ ಎ 2ಗಳು ಕೈಗೊಳ್ಳಬೇಕಾದ ಕಾರ್ಯ ಹಾಗೂ ಜವಾಬ್ದಾರಿ ಕುರಿತು ವಿವರಿಸಿದರು.

ಈಚೆಗೆ ನಿಧನರಾದ ಸಾಲುಮರದ ತಿಮ್ಮಕ್ಕ ಅವರ ಗುಣಗಾನ ಮಾಡಿದ ಡಾ. ಸರ್ಜೆ, ಪರಿಸರ ಉಳಿಸುವಲ್ಲೂ ನಾವು ಕೊಡುಗೆ ನೀಡಬೇಕೆಂದು ತಿಳಿಸಿದರು.

ರಾಜ್ಯ ಬಿಜೆಪಿ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಮಾತನಾಡಿ, ಮತದಾರರ ಪಟ್ಟಿಯಲ್ಲಿ ಅರ್ಹರು ತಪ್ಪಿದಲ್ಲಿ, ಕ್ಷೇತ್ರಕ್ಕೆ ಸಂಬಂಧಪಡದವರು ಇದ್ದಲ್ಲಿ ಅದನ್ನು ಚುನಾವಣಾ ಆಯೋಗದ ಗಮನಕ್ಕೆ ತರುವಂತೆ ಸೂಚಿಸಿದರು.

ಮತದಾನ ಪ್ರತಿಯೊಬ್ಬರ ಹಕ್ಕಾಗಿದೆ. ಮತದಾರರ ಪಟ್ಟಿಯನ್ನು ನಿಖರವಾಗಿಡಲು ಮತ್ತು ಮತದಾರರ ಪಟ್ಟಿಯ ಪರಿಶೀಲನೆ ಹಾಗೂ ನವೀಕರಣದಲ್ಲಿ ಬಿಎಲ್ ಎಗಳ ಪಾತ್ರ ಮುಖ್ಯವಾದುದು. ವೃದ್ಧರು, ವಿಶೇಷ ಚೇತನರು ಕಡ್ಡಾಯವಾಗಿ ಮತ ಚಲಾಯಿಸುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಕೆಲವೊಮ್ಮೆ ಮತದಾರರ ಪಟ್ಟಿಯಲ್ಲಿ ಹೆಸರು ಇದ್ದರೂ, ಮತದಾನ ಮಾಡಲು ಬಂದಾಗ ಅವರ ಹೆಸರೇ ಇರುವುದಿಲ್ಲ. ಆಗ ಅವರು ಮತದಾನದಿಂದ ವಂಚಿತರಾಗಬೇಕಾಗುತ್ತದೆ. ಇಂತಹ ಗೊಂದಲಗಳಿಗೆ ಅವಕಾಶ ಇಲ್ಲದಂತೆ ಮತದಾರರ ಪಟ್ಟಿ ಪರಿಷ್ಕರಣೆ ಆಗಬೇಕು. ಒಂದೊಂದು ಮತವೂ ಅಮೂಲ್ಯವಾಗಿರುವುದರಿಂದ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆ ಇಲ್ಲದೆ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು. ಅರ್ಹತೆ ಇದ್ದವರು ಮತದಾರರ ಪಟ್ಟಿಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.

ಸಾಲುಮರದ ತಿಮ್ಮಕ್ಕ ವಿಧಿವಶರಾದ ಹಿನ್ನೆಲೆ ಅವರ ಗೌರವಾರ್ಥ ಮೌನ ಆಚರಿಸಲಾಯಿತು.

ಸನ್ಮಾನಃ

ಕಾರವಾರದಲ್ಲಿ ನಡೆದ ಕಾರ್ಯಾಗಾರದಲ್ಲಿ ಪ್ರಶಸ್ತಿ ವಿಜೇತರಾದ ಕಡವಾಡ ಆನಂದು ನಾಯ್ಕ, ಮುಡಗೇರಿಯ ಸುರೇಂದ್ರ ಗಾಂವಕರ ಹಾಗೂ ದೇವಳಮಕ್ಕಿಯ ಸಂತೋಷ ಗೌಡ ಅವರಿಗೆ ಸನ್ಮಾನಿಸಲಾಯಿತು.

ಕಾರವಾರದಲ್ಲಿ ನಡೆದ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯ್ಕ, ಕಾರವಾರ ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ, ರಾಜ್ಯ ಪ್ರಕೋಸ್ಟದ ಸುನೀಲ ಸೋನಿ, ನಾಗೇಶ ಕುರ್ಡೇಕರ, ಮಾಲಾ ಹುಲಸ್ವಾರ್, ಸುಭಾಷ್ ಗುನಗಿ, ಮನೋಜ ಭಟ್, ಉದಯ ನಾಯ್ಕ, ಅಶೋಕ ಗೌಡ ಮುಂತಾದವರು ಪಾಲ್ಗೊಂಡಿದ್ದರು.

ಅಂಕೋಲಾದಲ್ಲಿ ನಡೆದ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯ್ಕ, ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ರಾಜೇಂದ್ರ ನಾಯ್ಕ, ಜಿಲ್ಲಾ ಮಾಧ್ಯಮ ಸಹವಕ್ತಾರ ಜಗದೀಶ ನಾಯ್ಕ ಮೊಗಟಾ, ಮಂಡಳದ ಮಾಜಿ ಅಧ್ಯಕ್ಷ ಸಂಜಯ ನಾಯ್ಕ, ರಾಘವೇಂದ್ರ ಭಟ್, ಆರತಿ ಗೌಡ, ಬೂತ್ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

PREV

Recommended Stories

8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ