ಕನ್ನಡಪ್ರಭ ವಾರ್ತೆ ಯಾದಗಿರಿ
ಭೂಮಾಪಕರ ಹುದ್ದೆಗಳ ಹಾಗೂ ಗ್ರಾಮ ಆಡಳಿತ ಅಧಿಕಾರಿ, ಫಾರ್ಮಸಿ ಅಧಿಕಾರಿ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆ ನಡೆಸುವ ಕುರಿತಂತೆ, ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪರೀಕ್ಷೆಗಳ ಸಂದರ್ಭ ಯಾವುದೇ ಲೋಪಗಳಿಗೆ ಅವಕಾಶ ನೀಡದೆ ವ್ಯವಸ್ಥಿತವಾಗಿ, ಶಿಸ್ತುಬದ್ಧವಾಗಿ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿ ಅನ್ವಯ ಪರೀಕ್ಷೆಗಳನ್ನು ನಡೆಸಬೇಕು. ಬೆಳಗ್ಗೆ ಹಾಗೂ ಮಧ್ಯಾಹ್ನದ ಎರಡು ಅವಧಿಗಳಲ್ಲಿ ಸಮಯ ಪರಿಪಾಲನೆಯೊಂದಿಗೆ ಪರೀಕ್ಷೆ ನಡೆಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಜಿಲ್ಲೆಯಲ್ಲಿ ಭೂಮಾಪಕರ ಹುದ್ದೆಗಳಿಗೆ 6 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿದ್ದು, ಅ.24 ರಂದು ಮಧ್ಯಾಹ್ನ 3 ರಿಂದ ಸಂಜೆ 5ರವರೆಗೆ ಪರೀಕ್ಷೆ ನಡೆಯಲಿದೆ. 2561 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅದರಂತೆ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅ.25 ರಂದು ಪರೀಕ್ಷೆ ನಡೆಯಲಿದ್ದು, 25 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 9626 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು,. ಪರೀಕ್ಷೆ ಬೆಳಗ್ಗೆ 10-30 ರಿಂದ 12-30 ವರೆಗೆ ಹಾಗೂ 2-30 ರಿಂದ 4-30 ರವರೆಗೆ ನಡೆಯಲಿದೆ. 3 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಅ.26 ರಂದು ನರ್ಸಿಂಗ್, ಫಾರ್ಮಸಿ ಅಧಿಕಾರಿ ಹುದ್ದೆಗಳಿಗೆ ಬೆಳಗ್ಗೆ 10-30 ರಿಂದ 12-30 ವರೆಗೆ ಹಾಗೂ 2-30 ರಿಂದ 4-30 ವರೆಗೆ ಪರೀಕ್ಷೆ ನಡೆಯಲಿದೆ. 3 ಪರೀಕ್ಷಾ ಕೇಂದ್ರಗಳಲ್ಲಿ 1218 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ 200 ಮೀ. ಪ್ರದೇಶ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಕೊಠಡಿ ಮೇಲ್ವಿಚಾರಕರು ಎಲ್ಲ ಮಾರ್ಗಸೂಚಿಗಳನ್ನು ಅರಿತು, ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಪರೀಕ್ಷೆಗಳಲ್ಲಿ ಕೈಗಡಿಯಾರ, ಕ್ಯಾಲ್ಕುಲೇಟರ್, ಬ್ಲುಟೂಥ್ ಡಿವೈಸ್, ಮೋಬೈಲ್, ಪೆನ್ ಡ್ರೈವ್ಗಳು, ಇಯರ್ ಫೋನ್, ಮೈಕ್ರೋಫೋನ್ ಸಾಧನಗಳನ್ನು ಬಳಸುವದಕ್ಕೆ ನಿಷೇಧವಿದ್ದು, ಈ ಕುರಿತು ತೀವ್ರ ನಿಗಾ ಇಡುವಂತೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.ಇತ್ತೀಚೆಗೆ ಪೋಲಿಸ್ ಇಲಾಖೆಯ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಿರುವುದಕ್ಕೆ ಅಭಿನಂದಿಸಿದ ಜಿಲ್ಲಾಧಿಕಾರಿ, ಈ ಪರೀಕ್ಷೆಯೂ ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಲು ಸೂಚಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುದೀಪ್ ಮಾತನಾಡಿ, ಓಎಂಆರ್ ಉತ್ತರ ಪತ್ರಿಕೆ ಹಾಗೂ ಪ್ರಶ್ನೆ ಪತ್ರಿಕೆ ನಿರ್ವಹಣೆ, ಅಭ್ಯರ್ಥಿಗಳ ಪ್ರವೇಶ ಪತ್ರ ಪರಿಶೀಲಿಸಲು ಮೇಲ್ವಿಚಾರಕರಿಗೆ ತಿಳಿಸಲಾಗಿದೆ. ಪರೀಕ್ಷೆಯಲ್ಲಿ ಆಹಾರ ಪದಾರ್ಥ, ವಾಟರ್ ಬಾಟಲ್, ಶೂಗಳ ನಿಷೇಧವಿದೆ. ಅಭ್ಯರ್ಥಿಗಳ ವಿವರಗಳನ್ನು ಕ್ಯುಆರ್ ಕೋಡ್ ಸ್ಕ್ಯಾನ್ ಮೂಲಕ ಪಡೆಯುವ ವ್ಯವಸ್ಥೆ ರೂಪಿಸಿದೆ. ವಸ್ತ್ರಸಂಹಿತೆ ಪಾಲಿಸಬೇಕು. ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆಯ ರಹಸ್ಯ ಬಂಡಲ್ ಸಾಗಿಸಲು ತ್ರಿ ಸದಸ್ಯ ಸಮಿತಿ ರಚಿಸಲಾಗಿದೆ ಎಂದರು. ಪರೀಕ್ಷಾ ಕೇಂದ್ರಗಳಿಗೆ ಜಾಮರ್ ಅಳವಡಿಕೆ ಸೇರಿದಂತೆ ಇನ್ನಿತರ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಮಾಸ್ಟರ್ ಟ್ರೈನರ್ ಮಲ್ಲನಗೌಡ ಹಾಗೂ ಶಿವಾನಂದ ಮತ್ತು ಪರೀಕ್ಷೆ ಗೆ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.