ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಟಿಎಪಿಸಿಎಂಎಸ್ ಎದುರಿನ ಕಾಂಗ್ರೆಸ್ ನಿವೇಶನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್‌ಗಾಂಧಿ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಒಮ್ಮತದ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದರು.
ರಾಜಕಾರಣಕ್ಕೆ ಬಂದು ಹಣ ಮಾಡುವ ಅಗತ್ಯ ನನಗಿಲ್ಲ. ಜನಸೇವೆಯೇ ನನಗೆ ಮುಖ್ಯ. ಜಿಲ್ಲೆಯ ಸಚಿವ ಹಾಗೂ ಶಾಸಕರ ಬೆಂಬಲದಿಂದ ಅವರಂತೆ ಹೆಚ್ಚಿನ ಮತಗಳನ್ನು ನೀಡಿ ನನ್ನನ್ನು ಲೋಕಸಭೆಗೆ ಆಯ್ಕೆ ಮಾಡಬೇಕು ಎಂದು ಕೋರಿದರು.ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಾತನಾಡಿ, ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಹಾಗೂ ಬೆಲೆ ಏರಿಕೆಯಿಂದ ಜನ ಸಾಮಾನ್ಯರನ್ನು ರಕ್ಷಿಸಲು ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳನ್ನು ಸಕಾಲದಲ್ಲಿ ಈಡೇರಿಸಿದೆ ಎಂದರು.
ಕಾಂಗ್ರೆಸ್ ಅಭ್ಯರ್ಥಿ ರಾಜಧಾನಿ ಬೆಂಗಳೂರಿನಲ್ಲಿ ನಾಲ್ಕಾರು ಸಾವಿರ ಮಂದಿಗೆ ಉದ್ಯೋಗ ಒದಗಿಸಿದ್ದು, ಸಮಾಜ ಸೇವೆ ಆಶಯದಿಂದ ಲೋಕಸಭೆಗೆ ಸ್ಪರ್ಧಿಸುತ್ತಿದ್ದಾರೆ. ಅವರನ್ನು ಹೆಚ್ಚು ಬಹುಮತಗಳ ಅಂತರದಿಂದ ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಮಾತನಾಡಿ, ಚುನಾವಣಾ ಬಾಂಡ್‌ಗಳ ಮೂಲಕ ಅಕ್ರಮ ಹಣ ಶೇಖರಣೆ ಮಾಡಿರುವ ಬಿಜೆಪಿ ಪಕ್ಷದ ಬಂಡತನವನ್ನು ಸುಪ್ರೀಂಕೊರ್ಟ್ ಬಯಲುಗೊಳಿಸಲು ಮುಂದಾಗಿರುವುದು ಪ್ರಜಾಪ್ರಭುತ್ವದ ಗೆಲುವು ಎಂದು ಬಣ್ಣಿಸಿದರು.ತತ್ವ, ಸಿದ್ಧಾಂತವಿಲ್ಲದ ಜೆಡಿಎಸ್ ಪಕ್ಷ ಅಧಿಕಾರಕೋಸ್ಕರ ಮೈತ್ರಿಗೆ ಮುಂದಾಗಿದೆ. ಅವರಿಗೆ ಸೂಕ್ತ ಪಾಠ ಕಲಿಸಬೇಕು. ಮಳವಳ್ಳಿಯಲ್ಲಿ ಕಾಂಗ್ರೆಸ್ ಪಾರಮ್ಯ ಮುಂದುವರೆಯಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಸುರೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್, ಕಾರ್ಯಾಧ್ಯಕ್ಷ ಚಿದಂಬರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೇವರಾಜು, ಮುಖಂಡರಾದ ಎಸ್.ಪಿ ಸತೀಶ್, ಚಿಕ್ಕಲಿಂಗಯ್ಯ, ಜಯಣ್ಣ, ಪ್ರಕಾಶ್, ಅಂಬರೀಷ್, ಆರ್.ಎನ್. ವಿಶ್ವಾಸ್, ಶ್ರೀನಿವಾಸ್, ಸಿದ್ದೇಗೌಡ, ಪುಟ್ಟಬಸವಯ್ಯ, ಸುಷ್ಮಾರಾಜು, ಸುಜಾತ ಕೆ.ಎಂ. ಪುಟ್ಟು, ದೊಡ್ಡಯ್ಯ, ಮಲ್ಲಯ್ಯ, ಸಿ.ಮಾಧು, ಶಿವಮಾದೇಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು.