ಕನ್ನಡಪ್ರಭ ವಾರ್ತೆ, ಕೆ.ಆರ್.ಪೇಟೆ
ಅವರು ಪಟ್ಟಣದ ಯಶಸ್ವಿನಿ ಕಲ್ಯಾಣ ಮಂಟಪದಲ್ಲಿ ಪಕ್ಷದ ವತಿಯಿಂದ ಆಯೋಜಿಸಿದ್ದ ವಿಶೇಷ ಸಮಗ್ರ ಮತದಾರರ ಪಟ್ಟಿಯ ಪರಿಷ್ಕರಣೆಗೆ ತರಬೇತುಗೊಂಡಿರುವ ಬೂತ್ ಮಟ್ಟದ ಏಜೆಂಟರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ 2002 ರಿಂದ ಇದುವರೆಗೂ ಮತದಾರರ ಪಟ್ಟಿ ಪರಿಷ್ಕರಣೆಯಾಗಿಲ್ಲ. ಇದೀಗ ಕೇಂದ್ರ ಸರ್ಕಾರ ದೇಶದ ಎಲ್ಲಾ ರಾಜ್ಯಗಳಲ್ಲಿಯೂ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಿದೆ. ಮತದಾರರ ಪಟ್ಟಿಯಲ್ಲಿ ಸ್ಥಳೀಯವಾಗಿ ಇರುವ ನ್ಯೂನ್ಯತೆಗಳನ್ನು ಸರಿಪಡಿಸಿ ಅರ್ಹ ಮತದಾರರಿಗೆ ಮತದಾನದ ಅಧಿಕಾರ ನೀಡುವುದು ಇದರ ಉದ್ದೇಶ ಎಂದು ಹೇಳಿದರು.ಈ ಕಾರ್ಯದಲ್ಲಿ ಭಾಗವಹಿಸಲು ದೇಶದ ಎಲ್ಲಾ ರಾಜಕೀಯ ಪಕ್ಷಗಳಿಗೂ ಅವಕಾಶ ಕಲ್ಪಿಸಲಾಗಿದೆ. ನಕಲಿ ಮತದಾನವನ್ನು ತಡೆಗಟ್ಟುವುದು ಇದರ ಮೂಲ ಉದ್ದೇಶ. ನೈಜ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದಾಗ ಮಾತ್ರ ಪ್ರಜಾಪ್ರಭುತ್ವ ಬಲಿಷ್ಠಗೊಳ್ಳುತ್ತದೆ ಎಂದರು.
ಮತದಾರರ ಪಟ್ಟಿಯ ಪರಿಷ್ಕರಣೆಯಿಂದ ಬಿಹಾರದಲ್ಲಿ 47 ಲಕ್ಷ, ಪಶ್ಚಿಮ ಬಂಗಾಳದಲ್ಲಿ 58 ಲಕ್ಷ, ರಾಜಸ್ಥಾನದಲ್ಲಿ 41 ಲಕ್ಷ, ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್ ರಾಜ್ಯದಲ್ಲಿ 73 ಲಕ್ಷ ಮತದಾರರ ಹೆಸರು ಕಡಿಮೆಯಾಗಿದೆ ಎಂದ ಶಾಸಕ ಎಚ್.ಟಿ.ಮಂಜು, ಕಾರ್ಯಕರ್ತರು ಯಾವುದೇ ರೀತಿಯ ಆಸೆ- ಆಮಿಷಗಳಿಗೆ ಬಲಿಯಾಗದೆ ಮತದಾರ ಪರಿಷ್ಕರಣೆಯಲ್ಲಿ ಭಾಗವಹಿಸಬೇಕು. ಮತದಾರ ಪಟ್ಟಿಯ ಪರಿಷ್ಕರಣೆಯ ಅನಂತರ ಮುಂದಿನ ದಿನಗಳಲ್ಲಿ ಬರುವ ಗ್ರಾಮ ಪಂಚಾಯತಿ, ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗಳನ್ನು ಗೆಲ್ಲುವತ್ತ ಗಮನ ಹರಿಸಬೇಕು. ನಿಷ್ಠಾವಂತ ಕಾರ್ಯಕರ್ತರು ಪಕ್ಷದ ಆಸ್ತಿಯಾಗಿದ್ದು ಕಾರ್ಯಕರ್ತರ ಕಷ್ಟ ಸುಖಗಳ ಜೊತೆ ನಾನಿದ್ದೇನೆಂದರು.
ಪಕ್ಷದ ರಾಜ್ಯ ವಕ್ತಾರ ಗದ್ದೆಹೊಸೂರು ಅಶ್ವಿನ್, ಟಿಎಪಿಸಿಎಂಎಸ್ ಅಧ್ಯಕ್ಷ ಟಿ.ಬಲದೇವ್, ಮುಖಂಡರಾದ ಕುರುಬರಹಳ್ಳಿ ನಾಗೇಶ್, ಮಲ್ಲೇನಹಳ್ಳಿ ಮೋಹನ್, ವಿ.ಎಂ.ಮಹದೇವೇಗೌಡ, ಎಚ್.ಕೆ.ಅಶೋಕ್, ಎಚ್.ಟಿ.ಲೋಕೇಶ್, ಲಾಯರ್ ಧನಂಜಯ, ದಿಸಾ ಸಮಿತಿಯ ಅಧ್ಯಕ್ಷ ನರಸನಾಯಕ್, ಬೂಕನಕೆರೆ ಹುಲ್ಲೇಗೌಡ, ಮಾಕವಳ್ಳಿ ವಸಂತಕುಮಾರ್, ಬಸವಲಿಂಗಪ್ಪ, ಕಿಕ್ಕೇರಿ ಮಧು, ಸಂಗಾಪುರ ಪುಟ್ಟಸ್ವಾಮಿ, ಸುಜೇಂದ್ರ ಕುಮಾರ್, ತೋಂಟಪ್ಪ ಶೆಟ್ಟಿ ಮತ್ತಿತರರು ವೇದಿಕೆಯಲ್ಲಿದ್ದರು.