18ರಂದು ವಸತಿ ಶಾಲೆ, ಸ್ಪರ್ಧಾತ್ಮಕ ತರಬೇತಿಗೆ ಅಭ್ಯರ್ಥಿಗಳ ಆಯ್ಕೆ ಪ್ರವೇಶ ಪರೀಕ್ಷೆ

KannadaprabhaNewsNetwork | Published : Feb 16, 2024 1:49 AM

ಸಾರಾಂಶ

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ವಸತಿ ಶಾಲೆ ಹಾಗೂ ಸ್ಪರ್ಧಾತ್ಮಕ ತರಬೇತಿಗೆ ಅಭ್ಯರ್ಥಿಗಳ ಆಯ್ಕೆಗೆ ಪ್ರವೇಶ ಪರೀಕ್ಷೆಯ ಪೂರ್ವಸಿದ್ದತಾ ಸಭೆಯಲ್ಲಿ ಉಪವಿಭಾಗಾಧಿಕಾರಿ ಕಾರ್ತೀಕ್‌ ಮಾತನಾಡಿದರು.

ಕನ್ನಡಪ್ರಭವಾರ್ತೆ ಚಿತ್ರದುರ್ಗ

ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಯುಪಿಎಸ್‍ಸಿ, ಕೆಎಎಸ್, ಗ್ರೂಪ್-ಸಿ, ಎಸ್.ಎಸ್.ಸಿ, ಬ್ಯಾಂಕಿಗ್ ಹಾಗೂ ಆರ್.ಆರ್.ಬಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಅಭ್ಯರ್ಥಿಗಳ ಆಯ್ಕೆಗಾಗಿ ಇದೇ ಫೆ.18 ರಂದು ಜರುಗುವ ಪ್ರವೇಶ ಪರೀಕ್ಷೆ ಕಾರ್ಯಗಳನ್ನು ಸಮನ್ವಯದಿಂದ ನಿರ್ವಹಿಸುವಂತೆ ಉಪವಿಭಾಗಾಧಿಕಾರಿ ಎಂ. ಕಾರ್ತಿಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಪೂರ್ವಸಿದ್ದತಾ ಸಭೆ ಅಧ್ಯಕ್ಷತೆ ವಹಿಸಿ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಸೇರಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳಲ್ಲಿ ನೇ ತರಗತಿ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಫೆ. 18 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1ರವರೆಗೆ ಪ್ರವೇಶ ಪರೀಕ್ಷೆ ನಡೆಯಲಿದೆ.

ಸಮಾಜ ಕಲ್ಯಾಣ ಇಲಾಖೆಯ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಬೆಳಗ್ಗೆ 10:30ರಿಂದ 12:30ವರೆಗೆ ಯುಪಿಎಸ್‍ಸಿ, ಕೆಎಎಸ್, ಗ್ರೂಪ್ ಸಿ, ಪ್ರವೇಶ ಪರೀಕ್ಷೆ, ಮಧ್ಯಾಹ್ನ 2:30 ರಿಂದ 4:30 ವರೆಗೆ ಎಸ್.ಎಸ್.ಸಿ, ಬ್ಯಾಂಕಿಗ್ ಹಾಗೂ ಆರ್.ಆರ್.ಬಿ ಪ್ರವೇಶ ಪರೀಕ್ಷೆ ತರಬೇತಿಗೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆ ನಡೆಸಲಿದೆ.ಪರೀಕ್ಷೆ ಕಾರ್ಯಗಳಲ್ಲಿ ಲೋಪ ಉಂಟಾಗಬಾರದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೀಡಿರುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು. ಪರೀಕ್ಷೆ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗುವುದು. ಪೊಲೀಸ್ ಇಲಾಖೆಯಿಂದ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ ಕಲ್ಪಿಸಬೇಕು ಎಂದು ತಿಳಿಸಿದರು.ಅಭ್ಯರ್ಥಿಗಳು ಎಲೆಕ್ಟ್ರಾನಿಕ್ ಉಪಕರಣ, ಕ್ಯಾಲುಕುಲೇಟರ್, ಮೊಬೈಲ್ ಫೋನ್, ಬ್ಲೂಟೂತ್, ವೈರ್‍ಲೆಸ್ ಸೆಟ್ಸ್ ಸೇರಿ ಇತರೆ ಉಪಕರಣ ತರುವುದನ್ನು ನಿಷೇಧಿಸಲಾಗಿದೆ. ಪ್ರವೇಶ ಪತ್ರ ಮತ್ತು ಗುರುತಿನ ಚೀಟಿ ಹಾಜರಿಪಡಿಸುವುದು ಕಡ್ಡಾಯ ಎಂದು ಎಂ.ಕಾರ್ತಿಕ್ ನಿರ್ದೇಶನ ನೀಡಿದರು.ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ಖಜಾನಾಧಿಕಾರಿ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್, ತಿಪ್ಪೇಸ್ವಾಮಿ, ಪೊಲೀಸ್ ಇಲಾಖೆ ಗುಡ್ಡಪ್ಪ ಉಪಸ್ಥಿತರಿದ್ದರು.

Share this article