ಬಾರ್ಕೂರು: ಇಲ್ಲಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ವಾಣಿಜ್ಯ ಸಂಘ ಹಾಗೂ ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ, ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಯೋಗದೊಂದಿಗೆ ಅಂತಿಮ ವರ್ಷದ ಬಿ.ಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳಿಗಾಗಿ ಉದ್ಯಮಶೀಲ ದಿನಾಚರಣೆಯನ್ನು ಆಯೋಜಿಸಲಾಯಿತು.
ವಾಣಿಜ್ಯಶಾಸ್ತ್ರ ವಿಭಾಗದ ಡಾ. ರಾಧಾಕೃಷ್ಣ ನಾಯಕ್ ಅವರು ಕಾರ್ಯಕ್ರಮದ ಹಿನ್ನೆಲೆ ಹಾಗೂ ಉದ್ದೇಶವನ್ನು ವಿವರಿಸಿದರು. ನಿರ್ವಹಣಾ ಶಾಸ್ತ್ರ ವಿಭಾಗದ ವೀರೇಶ್ ಮತಪತಿ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಸುಮಾ ಟಿ.ಕೆ. ವಂದಿಸಿದರು. ಪ್ರಥಮ ಬಿ.ಕಾಂ ವಿದ್ಯಾರ್ಥಿನಿ ಸಿಂಚನಾ ಕಾರ್ಯಕ್ರಮ ನಿರೂಪಿಸಿದರು.
ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕಿ ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಶೋಭಾ ಆರ್. ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಿವಿಧ ಉದ್ಯಮ ಮಾದರಿಗಳನ್ನು ಪ್ರಾಯೋಗಿಕವಾಗಿ ನಡೆಸಿ, ಉದ್ಯಮ ನಿರ್ವಹಣೆಯಲ್ಲಿ ಎದುರಾಗುವ ಅವಕಾಶಗಳು ಮತ್ತು ಸವಾಲುಗಳ ಕುರಿತು ಅರಿವು ಪಡೆದುಕೊಂಡರು. ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದದವರು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಉಪನ್ಯಾಸಕರಾದ ಲೋಲಾಕ್ಷಿ, ಅನಿಲ್ ಕುಮಾರ್ ಕೆ. ವೈ., ಗುಣಪ್ರಿಯ, ಆಶಿಶ್ ಶೆಟ್ಟಿ, ಶ್ರೀಧರ್ ಗಾಣಿಗ ಹಾಗೂ ಇತರ ಉಪನ್ಯಾಸಕ ಮತ್ತು ಉಪನ್ಯಾಸಕೇತರ ಸಿಬ್ಬಂದಿ ಉಪಸ್ಥಿತರಿದ್ದರು.