ಬಿಜೆಪಿಯಿಂದ ಹಂಪಿಯಲ್ಲಿ ಪರಿಸರ ದಿನಾಚರಣೆ

KannadaprabhaNewsNetwork | Published : Jun 24, 2024 1:37 AM

ಸಾರಾಂಶ

ಜಾಗತಿಕ ತಾಪಮಾನ ದಿನೇದಿನೇ ಏರಿಕೆಯಾಗುತ್ತಿದ್ದು, ನಾವೆಲ್ಲರೂ ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು.

ಹೊಸಪೇಟೆ: ವಿಜಯನಗರ ಜಿಲ್ಲಾ ಬಿಜೆಪಿಯಿಂದ ಹಂಪಿಯಲ್ಲಿ ಜನಸಂಘ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಪುಣ್ಯಸ್ಮರಣೆ ನಿಮಿತ್ತ ಸ್ಬಚ್ಛತಾ ಅಭಿಯಾನ ಹಾಗೂ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.

ಬಿಜೆಪಿ ಯುವ ಮೋರ್ಚಾದ ರಾಜ್ಯ ಕೋಶಾಧ್ಯಕ್ಷ ಸಿದ್ಧಾರ್ಥ ಸಿಂಗ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಜಾಗತಿಕ ತಾಪಮಾನ ದಿನೇದಿನೇ ಏರಿಕೆಯಾಗುತ್ತಿದ್ದು, ನಾವೆಲ್ಲರೂ ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು. ಮನೆ‌, ಮನೆಯಲ್ಲೂ ಪರಿಸರ ಜಾಗೃತಿ ಅನಿವಾರ್ಯವಾಗಿದೆ. ರಸ್ತೆ, ಶಾಲಾ ಆವರಣ, ಸರ್ಕಾರಿ ಕಚೇರಿಗಳ, ಮನೆಗಳ ಆವರಣ ಸೇರಿದಂತೆ ಎಲ್ಲೆಡೆ ನಾವು ಸಸಿಗಳನ್ನು ನೆಟ್ಟು ಮರ, ಗಿಡಗಳನ್ನು ಪೋಷಿಸಬೇಕು. ಈ ಮೂಲಕ ಪರಿಸರ ಸಂರಕ್ಷಣೆಗೆ ಒತ್ತು ನೀಡೋಣ ಎಂದರು.

ಹಿರಿಯರಾದ ಶ್ಯಾಮ್ ಪ್ರಸಾದ್ ಮುಖರ್ಜಿ ಜನಸಂಘ ಸ್ಥಾಪನೆ ಮಾಡುವ ಮೂಲಕ ದೇಶದ ಸಂರಕ್ಷಣೆಗೆ ಶ್ರಮಿಸಿದ್ದಾರೆ. ಕಾಂಗ್ರೆಸ್ ನೀತಿಗಳ ವಿರುದ್ಧ ಹೋರಾಟ ನಡೆಸಿ ದೇಶದ ರಕ್ಷಣೆಗೆ ಹೋರಾಟ ನಡೆಸಿದ್ದಾರೆ. ಅವರ ಹೋರಾಟದ ಫಲವಾಗಿ ಈಗ ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿ ಆಗಿ ಹೊರಹೊಮ್ಮಿದ್ದಾರೆ. ಈಗಾಗಲೇ ದೇಶ ಇಡೀ ವಿಶ್ವದಲ್ಲಿ‌ಮುಂಚೂಣಿ ಸ್ಥಾನದಲ್ಲಿ ನಿಲ್ಲಿಸಲು ಪ್ರಧಾನಿ ಮೋದಿ ಅವರು ಪ್ರಯತ್ನಿಸುತ್ತಿದ್ದಾರೆ. ಅವರ ಶ್ರಮದ ಫಲವಾಗಿ ದೇಶ ಆರ್ಥಿಕವಾಗಿ ಬಲಿಷ್ಠವಾಗುತ್ತಿದೆ. ಎಲ್ಲಾ ರಂಗದಲ್ಲೂ ನಾವು ಮುನ್ನಡೆ ಸಾಧಿಸುತ್ತಿದ್ದೇವೆ ಎಂದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಭಾರತಿ ಪಾಟೀಲ್, ಬಿಜೆಪಿ ಜಿಲ್ಲಾ ವಕ್ತಾರ ಅಶೋಕ್ ಜೀರೆ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಕಿಚಿಡಿ ಕೊಟ್ರೇಶ್, ಮಂಡಳ ಅಧ್ಯಕ್ಷ ಶಂಕರ್ ಮೇಟಿ, ನಗರ ಘಟಕದ ಅಧ್ಯಕ್ಷ ರೇವಣಸಿದ್ದಪ್ಪ, ಮುಖಂಡರಾದ ರಜನಿಗೌಡ, ನಾಗರಾಜ, ಚಂದ್ರು ದೇವಲಾಪುರ, ಮಧುರಚನ್ನಶಾಸ್ತ್ರಿ, ಹೊನ್ನೂರಪ್ಪ, ಮಾಯಾ ಮತ್ತಿತರರಿದ್ದರು.

ಬಳಿಕ ಹಂಪಿಯ ಶ್ರೀವಿರೂಪಾಕ್ಷೇಶ್ವರ ರಥಬೀದಿ‌ ಸಾಲು ಮಂಟಪದಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಯಿತು.23ಎಚ್‌ಪಿಟಿ2

ಹಂಪಿಯಲ್ಲಿ ಭಾನುವಾರ ಬಿಜೆಪಿಯಿಂದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ ನಿಮಿತ್ತ ಪರಿಸರ ದಿನಾಚರಣೆ ಮತ್ತು ಸ್ವಚ್ಛತಾ ಅಭಿಯಾನ ನಡೆಸಲಾಯಿತು.

Share this article