ಮೂಡ್ಲಕಟ್ಟೆ ನರ್ಸಿಂಗ್‌ ಕಾಲೇಜಿನಿಂದ ಪರಿಸರ ದಿನಾಚರಣೆ

KannadaprabhaNewsNetwork |  
Published : Jun 06, 2026, 02:30 AM IST
05ಪರಿಸರ | Kannada Prabha

ಸಾರಾಂಶ

ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ವಿದ್ಯಾರ್ಥಿ ನರ್ಸಸ್ ಅಸೋಸಿಯೇಷನ್ ವತಿಯಿಂದ ಶುಕ್ರವಾರ ಬಸ್ರೂರು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು.

ಕುಂದಾಪುರ: ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ವಿದ್ಯಾರ್ಥಿ ನರ್ಸಸ್ ಅಸೋಸಿಯೇಷನ್ ವತಿಯಿಂದ ಶುಕ್ರವಾರ ಬಸ್ರೂರು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು.ಕಾರ್ಯಕ್ರಮವನ್ನು ಅಂಗನವಾಡಿ ಶಿಕ್ಷಕಿ ಕಮಲಾ ಅವರು ಸಸಿಯನ್ನು ನೆಡುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ 5ನೇ ಸೆಮಿಸ್ಟರ್ ಬಿ.ಎಸ್‌ಸಿ. ನರ್ಸಿಂಗ್ ವಿದ್ಯಾರ್ಥಿನಿ ಆಯಿಷಾ ರಫೀದಾ ಅವರು ವಿಶ್ವ ಪರಿಸರ ದಿನದ ಮಹತ್ವದ ಕುರಿತು ಮಾತನಾಡಿದರು. ಪರಿಸರ ಜಾಗೃತಿಯನ್ನು ಮೂಡಿಸುವ ಹಾಗೂ ಮರ ನೆಡುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಅಂಗನವಾಡಿ ಮಕ್ಕಳು ಮತ್ತು ಅವರ ಪೋಷಕರಿಗೆ ಸಸಿಗಳನ್ನು ವಿತರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಎಸ್‌ಎನ್‌ಎ ಸಮಿತಿಯ ಸದಸ್ಯರು, 5ನೇ ಸೆಮಿಸ್ಟರ್ ಬಿ.ಎಸ್‌ಸಿ. ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಕುಂದಾಪುರದ ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್‌ ಅಧ್ಯಾಪಕರು ಭಾಗವಹಿಸಿದ್ದರು.ಎಂಐಟಿಕೆಯಲ್ಲಿ ಆಚರಣೆ: ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಬಿಎ ವಿಭಾಗದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಪರಿಸರ ಹಾನಿಯಿಂದ ಆಗುವ ದುಷ್ಪರಿಣಾಮ ಬಗ್ಗೆ ವೀಡಿಯೊ ಪ್ರದರ್ಶಿಸಲಾಯಿತು. ಪರಿಸರವನ್ನು ಉಳಿಸಿ ಬೆಳೆಸುವ ಬಗೆಗೆ ವಿದ್ಯಾರ್ಥಿಗಳಿಂದ ಪ್ರತಿಜ್ಞೆ ಕೈಗೊಳ್ಳಲಾಯಿತು ಮತ್ತು ಕಾಲೇಜಿನ ಸುತ್ತಮುತ್ತ ಕಸ ಹೆಕ್ಕಿ ಸ್ವಚ್ಛಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಎಂಬಿಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ಉಸ್ತುವಾರಿಯನ್ನು ಸಹಾಯಕ ಪ್ರಾಧ್ಯಾಪಕರಾದ ಚೈತಾಲಿ ಇವರು ವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉತ್ಪಾದನೆಯ ಶೇ.70ಕ್ಕೂ ಅಧಿಕ ಕಾಫಿ ರಫ್ತು: ಬಸವರಾಜ್‌
ಕಾಂಗ್ರೆಸ್ ನಾಯಕರ ಹೇಳಿಕೆಗಳು ಹಾಸ್ಯಾಸ್ಪದ: ನವೀನ್ ನಾಯಕ್