ಜೂನ್ ೫ಕ್ಕೆ ಮಾತ್ರ ಪರಿಸರ ದಿನಾಚರಣೆ ಸೀಮಿತವಾಗಬಾರದು: ವಿಶ್ವನಾಥ ಕೆ. ಹಿರೇಗೌಡರ್

KannadaprabhaNewsNetwork |  
Published : Jun 06, 2024, 12:30 AM IST
ಕುರುಗೋಡು ೦೧ಕುರುಗೋಡು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸಿಪಿಐ ವಿಶ್ವನಾಥ ಕೆ. ಹಿರೇಗೌಡರ್ ಅವರು ತೆಂಗಿನ ಸಸಿ ನಾಟಿ ಮಾಡಿ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು. | Kannada Prabha

ಸಾರಾಂಶ

ಕುರುಗೋಡು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬುಧವಾರ ವಿಶ್ವ ಪರಿಸರ ದಿನ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ಕುರುಗೋಡು

ಅಭಿವೃದ್ಧಿಯ ಹೆಸರಿನಲ್ಲಿ ಗಿಡಮರಗಳನ್ನು ಕಡಿದು ಪರಿಸರ ನಾಶ ಮಾಡುವುದು ಉತ್ತಮ ಬೆಳವಣಿಗೆಯಲ್ಲ ಎಂದು ಪೊಲೀಸ್ ವೃತ್ತ ನಿರೀಕ್ಷಕ ವಿಶ್ವನಾಥ ಕೆ. ಹಿರೇಗೌಡರ್ ಹೇಳಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿದರು.

ವಿಶ್ವಪರಿಸರ ದಿನಾಚರಣೆ ಜೂನ್ ೫ಕ್ಕೆ ಮಾತ್ರ ಸೀಮಿತವಾಗಬಾರದು. ಗಿಡಮರಗಳಿಂದ ಬಿದ್ದ ಬೀಜ ಪುನಃ ಮೊಳಕೆಯೊಡೆದು ಗಿಡವಾಗಿ ಬೆಳೆಯುವ ಶಕ್ತಿಯನ್ನು ನಿಸರ್ಗದತ್ತವಾಗಿ ಪಡೆದಿದೆ. ಗಿಡಮರಗಳನ್ನು ಬೆಳೆಸದಿದ್ದರೂ ತೊಂದರೆ ಇಲ್ಲ. ಅವುಗಳನ್ನು ಕಡಿಯಬಾರದು ಎಂದು ಸಲಹೆ ನೀಡಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ಯೋಜನಾ ನಿರ್ದೇಶಕ ರೋಹಿತಾಕ್ಷ ಮಾತನಾಡಿ, ಮಾನವನ ದುರಾಸೆಯಿಂದ ಪರಿಸರ ನಾಶವಾಗುತ್ತಿದೆ. ಪರಿಣಾಮ ಮಳೆ, ಗಾಳಿ, ಚಳಿ ಮತ್ತು ಬೇಸಿಗೆಯ ಕಾಲಗಳ ಋತುಮಾತಗಳಲ್ಲಿಯೂ ಬದಲಾವಣೆಯಾಗುತ್ತಿರುವುದು ದುರಂತದ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದರು.

ಸಂಸ್ಥೆ ಮಹಿಳಾ ಸಬಲೀಕರಣ ಕಾರ್ಯಕ್ರಮದ ಜತೆಗೆ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನೂ ಆಯೋಜಿಸಿ ಪರಿಸರ ಪ್ರಜ್ಞೆ ಮೂಡಿಸುವ ಕಾರ್ಯ ಮಾಡುತ್ತಿದೆ ಎಂದರು.

ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಹಾಲಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಿಎಸ್ಐ ಸುಪ್ರಿತ್ ವಿರೂಪಾಕ್ಷಪ್ಪ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಚೇಗೂರು ಷಣ್ಮುಖ, ಕೃಷಿ ಮೇಲ್ವಿಚಾರಕ ಸಂಜೀವ್ ಕುಮಾರ್, ವಲಯ ಮೇಲ್ವಿಚಾರಕ ಪ್ರಭು ಮತ್ತು ಸೇವಾ ಪ್ರತಿನಿಧಿಗಳು ಇದ್ದರು.

ಪರಿಸರ ಉಳಿಸಿ ಬೆಳೆಸಿ: ಡಾ. ಸ್ವಪ್ನ ಕಟ್ಟಿ

ಕನ್ನಡಪ್ರಭ ವಾರ್ತೆ ಹೂವಿನಹಡಗಲಿ

ಮುಂದಿನ ಪೀಳಿಗೆಗೆ ಪರಿಸರ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ, ಸಸಿ ನೆಟ್ಟು ಪೋಷಿಸಿರಿ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ಸ್ವಪ್ನ ಕಟ್ಟಿ ಹೇಳಿದರು.

ಪಟ್ಟಣದ ತುಂಗಭದ್ರಾ ಪ್ರೌಢಶಾಲೆಯ ಆವರಣದಲ್ಲಿ ಬುಧವಾರ ತಾಲೂಕು ಆರೋಗ್ಯ ಇಲಾಖೆ, ತುಂಗಭದ್ರಾ ವಿದ್ಯಾ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಸಸಿ ನೆಟ್ಟು ಚಾಲನೆ ನೀಡಿದರು.ಹೆಚ್ಚು ಗಿಡಗಳನ್ನು ಬೆಳೆಸುವುದರಿಂದ ಶುದ್ಧ ಗಾಳಿ ನೆರಳು ಸಿಗುತ್ತದೆ. ಮಳೆ ಪ್ರಮಾಣ ಕೂಡ ಹೆಚ್ಚಾಗುತ್ತದೆ. ಶಾಲಾ ಹಂತದಲ್ಲೇ ಮಕ್ಕಳು ಪರಿಸರದ ಪ್ರಜ್ಞೆ ಬೆಳಸಿಕೊಳ್ಳಲು ಸಲಹೆ ನೀಡಿದರು.

ತಾಲೂಕು ಕ್ಷೇತ್ರ ಕಾರ್ಯಕ್ರಮ ವ್ಯವಸ್ಥಾಪಕ ಮಹೇಶ್ ಬೀರಬ್ಬಿ, ತಾಲೂಕಿನ ಎಲ್ಲ ಸಂಘ ಸಂಸ್ಥೆಗಳ ಸಹಕಾರದಿಂದ ಹತ್ತು ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದರು.ಗುತ್ತಿಗೆದಾರರಾದ ಹಣ್ಣಿ ಶಶಿಧರ, ಹಕ್ಕಂಡಿ ಮಹಾದೇವ, ಸಿರಿ ಸೌಹಾರ್ದ ಬ್ಯಾಂಕ್ ಉಪಾಧ್ಯಕ್ಷ ಬೀರಬ್ಬಿ ಮಂಜುನಾಥ, ಹಿರಿಯ ಆರೋಗ್ಯ ಸಂರಕ್ಷಣಾಧಿಕಾರಿ ಗುಡೆಕೋಟೆ ರಾಜೇಂದ್ರ, ತಾಲೂಕು ಫಾರ್ಮಸಿ ಅಧಿಕಾರಿ

ವೈ.ಶಿವಕುಮಾರ್, ಆರೋಗ್ಯ ಇಲಾಖೆಯ ಎಂ.ಪಿ.ಎಂ.ಸುನೀಲ್, ನಾಗರಾಜ್, ಆರ್ ಬಿ ಎಸ್ ಕೆ ವೈದ್ಯರಾದ ಡಾ.ರಮ್ಯ, ಡಾ.ಅಕ್ಕಮ್ಮ, ಶಿವರಾಜ್ ಬಳಿಗಾರ್, ಶಾಲೆಯ ಮುಖ್ಯ ಗುರು ಸುರೇಶ ಅಂಗಡಿ, ಶಿಕ್ಷಕ ಸಿಬ್ಬಂದಿ ಹಾಜರಿದ್ದರು.ಹೂವಿನಹಡಗಲಿ ಪಟ್ಟಣದ ಸೊಪ್ಪಿನ ಕಾಳಮ್ಮ ಸರ್ಕಾರಿ ಬಾಲಕಿಯರ ಕಾಲೇಜು ಆವರಣದಲ್ಲಿ ವಿಶ್ವ ಪರಿಸರ ದಿನ ಆಚರಿಸಿ ಆವರಣದಲ್ಲಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸಸಿ ನೆಟ್ಟು ಆಚರಿಸಿದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಕಡಿಮೆ ಗುಣದ ಔಷಧಿ ಎರಡೇ ದಿನಕ್ಕೇ ಮಾರುಕಟ್ಟೆಯಿಂದ ವಾಪಸ್‌: ಸಚಿವ