ಕನ್ನಡಪ್ರಭ ವಾರ್ತೆ ಹರಿಹರ
ನಗರದ ಮರಿಯ ನಿವಾಸ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಪ್ರಯುಕ್ತ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪರಿಸರವು ನಮಗೆ ಜೀವನಕ್ಕೆ ಅಗತ್ಯವಾದ ಗಾಳಿ ಮತ್ತು ನೀರನ್ನು ನೀಡುತ್ತದೆ. ಅವುಗಳ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಮೂಲಕ ನೈಸರ್ಗಿಕ ಪರಿಸರವನ್ನು ನಾವು ಸಂರಕ್ಷಣೆ ಮಾಡುವ ಅವಶ್ಯಕತೆಯಿದೆ ಎಂದರು.ಅಭಿವೃದ್ದಿ ಹೆಸರಿನಲ್ಲಿ ಮರಗಳನ್ನು ಕಡಿಯುವುದು, ಗುಡ್ಡಗಳನ್ನು ತೆಗೆಯುವುದನ್ನು ಇಂದು ನಾವು ಹೆಚ್ಚಾಗಿ ಕಾಣುತ್ತಿದ್ದೆವೆ ಈ ಹಿನ್ನಲೆಯಲ್ಲಿ ವಿಧ್ಯಾರ್ಥಿಗಳಾಗದ ನೀವು ಮನೆಯ ಸುತ್ತ ಮುತ್ತ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಣೆ ಮಾಡಿ. ನಾವು ನಮ್ಮನ್ನು ಹೇಗೆ ರಕ್ಷಣೆ ಮಾಡಿಕೊಳ್ಳುತ್ತೇವೆಯೋ ಹಾಗೇಯೇ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಕಾಳಜಿಯಿಂದ ಜವಾದ್ದಾರಿಯುತವಾಗಿ ರಕ್ಷಣೆ ಮಾಡ ಬೇಕಾಗಿರುವುದು ನಮ್ಮೇಲ್ಲರ ಅಧ್ಯ ಕರ್ತವ್ಯವಾಗಿದೆ ಎಂದರು.
ಪರಿಸರ ಸಂರಕ್ಷಣೆಯ ಪ್ರಬಂಧ ಸ್ಪರ್ದೆಯಲ್ಲಿ ವಿಜೇತರಾದ ವಿಧ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.