ಮಕ್ಕಳಿಗೆ ಪರಿಸರ ಜಾಗೃತಿ ಮೂಡಿಸಬೇಕಾಗಿದೆ: ಅನಂತಯ್ಯ ನಾವಡ

KannadaprabhaNewsNetwork |  
Published : Jun 22, 2025, 11:48 PM IST
22ಪಂಚ | Kannada Prabha

ಸಾರಾಂಶ

ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ೨೬೦ನೇ ಭಾನುವಾರದ ಪರಿಸರಸ್ನೇಹಿ ಹಸಿರು ಜೀವ ಅಭಿಯಾನ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಕುಂದಾಪುರ

ಪ್ರಸ್ತುತ ದಿನಗಳಲ್ಲಿ ನಾವು ಕಾಂಕ್ರೀಟ್ ಕಾಡಿನಲ್ಲಿ ವಾಸಿಸುತ್ತಿದ್ದೇವೆ. ಇದರಿಂದ ವಾತಾವರಣದಲ್ಲಿ ಬಾರಿ ವ್ಯತ್ಯಾಸಗಳಾಗುತ್ತಿವೆ. ಅದರ ದುಷ್ಪರಿಣಾಮವನ್ನು ನಾವು ನಮ್ಮ ಜೀವನದಲ್ಲಿ ಅನುಭವಿಸುತ್ತಿದ್ದೇವೆ. ಆದ್ದರಿಂದ ಮಕ್ಕಳಲ್ಲಿ ಪರಿಸರದ ಬಗ್ಗೆ ಪ್ರಾಥಮಿಕ ಶಾಲಾ ಹಂತದಲ್ಲೇ ಪರಿಸರದ ಜಾಗೃತಿ ಮೂಡಿಸಬೇಕಿದೆ ಎಂದು ಪರಿಸರಪ್ರೇಮಿ ಶಿಕ್ಷಕ ಕೋಡಿ ಅನಂತಯ್ಯ ನಾವಡ ಹೇಳಿದರು.ಅವರು ಇಲ್ಲಿನ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ೨೬೦ನೇ ಭಾನುವಾರದ ಪರಿಸರಸ್ನೇಹಿ ಹಸಿರು ಜೀವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.ಇದೇ ವೇಳೆ ಸ್ಥಳೀಯ ಗ್ರಾಮಸ್ಥರಿಗೆ, ಶಾಲಾ ಮಕ್ಕಳಿಗೆ ವಿವಿಧ ತಳಿಗಳ ಗಿಡಗಳನ್ನು ವಿತರಿಸಲಾಯಿತು.

ಪಂಚವರ್ಣದ ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಮಕ್ಕಳಿಗೆ ಪರಿಸರ ಜಾಗೃತಿ ಮಾಹಿತಿಯನ್ನು ನೀಡಿದರು.ಕಾರ್ಯಕ್ರಮದಲ್ಲಿ ಕೋಟೇಶ್ವರದ ಕುಂಬ್ರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಉಪಾಧ್ಯಕ್ಷ ಕೃಪಾಶ್ರೀ ಪುರಾಣಿಕ್, ಶಾಲಾ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ ಆನಂದ್ ಕುಂದರ್, ಪ್ರೌಢ ಶಾಲಾ ಇಕೋ ಕ್ಲಬ್ ಶಿಕ್ಷಕಿ ಮಂಗಳ, ಕೃಷಿ ಇಲಾಖೆ ನಿವೃತ್ತ ಅಧಿಕಾರಿ ರುಕ್ಮ ಖಾರ್ವಿ, ಉದ್ಯಮಿ ಮುರಳಿ ಗಾಣಿಗ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.ಪಂಚವರ್ಣದ ಸದಸ್ಯ ಮಹೇಶ್ ಬೆಳಗಾವಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದ್ದರು. ಕಾರ್ಯಕ್ರಮವನ್ನು ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿದರು. ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆಕೋರಿಕೆ:ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ