ಮಾನವನ ಅಭಿವೃದ್ಧಿಗೆ ಪರಿಸರ ನಾಶ

KannadaprabhaNewsNetwork |  
Published : Jun 06, 2025, 12:53 AM ISTUpdated : Jun 06, 2025, 12:54 AM IST
ಎಸ್ಇಎಸ್ ಶಾಲೆಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಎಸ್ ಇ ಎಸ್ ಶಾಲೆಯ ಕಾರ್ಯದರ್ಶಿ ತೊ.ಚ ಅನಂತಸುಬ್ಬರಾಯ ಮಾತನಾಡಿದರು. | Kannada Prabha

ಸಾರಾಂಶ

ಮಾನವ ಸೇರಿದಂತೆ ಇತರೆ ಪ್ರಾಣಿ, ಪಕ್ಷಿಗಳು, ಪ್ರತಿಯೊಂದು ಜೀವ ಸಂಕುಲ ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನ ಅವಲಂಬಿಸಿದೆ ಎಂದರೆ ತಪ್ಪಾಗಲಾರದು. ಇತ್ತೀಚಿನ ದಿನಗಳಲ್ಲಿ ಮಾನವನು ಆಧುನಿಕ ಬದುಕಿನ ಆಸೆಗೆ ಬಿದ್ದು ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಈ ಮಾನವನ ಈ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ ಎಂದರು.

ಕನ್ನಡಪ್ರಭ ವಾರ್ತೆ ಬೇಲೂರು

ವಿಶ್ವ ಪರಿಸರ ದಿನವನ್ನು ವಿಶ್ವದಾದ್ಯಂತ ಪರಿಸರದ ಬಗ್ಗೆ ಜಾಗೃತಿ ಮತ್ತು ನಮ್ಮ ಪರಿಸರದ ರಕ್ಷಣೆಗೆ ಉತ್ತೇಜಿಸಲು ಈ ದಿನವನ್ನು ಆಚರಿಸಲಾಗುತ್ತದೆ ಎಂದು ಹಸಿರು ಭೂಮಿ ಪ್ರತಿಷ್ಠಾನ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಭಾರತ ಸೇವಾದಳ ತಾಲೂಕು ಸಮಿತಿ ಕಾರ್ಯದರ್ಶಿ ತೀರ್ಥಕುಮಾರಿ ವೆಂಕಟೇಶ್ ಎಂ ಆರ್‌ ಹೇಳಿದರು.ಹಸಿರು ಭೂಮಿ ಪ್ರತಿಷ್ಠಾನ, ಹಾಗೂ ಭಾರತ್ ಸೇವಾದಳ ಬೇಲೂರು ಮತ್ತು ಶಾಂತಲಾ ಶಿಕ್ಷಣ ಸಂಸ್ಥೆ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಎಸ್‌ಇಎಸ್ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.ಎಸ್‌ಇಎಸ್ ಶಾಲೆಯ ಕಾರ್ಯದರ್ಶಿ ತೊ.ಚ ಅನಂತಸುಬ್ಬರಾಯ ಮಾತನಾಡಿ, ಮಾನವ ಸೇರಿದಂತೆ ಇತರೆ ಪ್ರಾಣಿ, ಪಕ್ಷಿಗಳು, ಪ್ರತಿಯೊಂದು ಜೀವ ಸಂಕುಲ ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನ ಅವಲಂಬಿಸಿದೆ ಎಂದರೆ ತಪ್ಪಾಗಲಾರದು. ಇತ್ತೀಚಿನ ದಿನಗಳಲ್ಲಿ ಮಾನವನು ಆಧುನಿಕ ಬದುಕಿನ ಆಸೆಗೆ ಬಿದ್ದು ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಈ ಮಾನವನ ಈ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ ಎಂದರು.ಭಾರತ ಸೇವಾದಳ ತಾಲೂಕು ಸಮಿತಿ ಉಪಾಧ್ಯಕ್ಷರು ಸಿಎಂ ನಿಂಗರಾಜು ಮಾತನಾಡಿ, ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್ 5ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತಿದ್ದು, ಪ್ರತಿ ವರ್ಷ ಬೇರೆ ಬೇರೆ ಧ್ಯೇಯವಾಕ್ಯದೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪರಿಸರದ ಸಮೃದ್ಧಿ ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ ಎಂದರು.ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ಉಷಾ ಸತೀಶ್, ಪತ್ರಕರ್ತರಾದ ಎ. ರಾಘವೇಂದ್ರ ಹೊಳ್ಳ, ವಲಯ ಭಾರತ ಸೇವಾದಳದ ಅಧ್ಯಕ್ಷ ಎಚ್ ಕೆ ಯುವರಾಜು, ಸಂಘಟಕರಾದ ರಾಣಿ. ವಿ. ಎಸ್. ಹಸಿರು ಭೂಮಿ ಪ್ರತಿಷ್ಠಾನದ ಕಾರ್ಯದರ್ಶಿ ನೂರ್‌ ಅಹಮದ್, ನರಸಿಂಹಸ್ವಾಮಿ, ಇತರರು ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ