ಸಾಮಾಜಿಕ ಹೊಣೆಗಾರಿಕೆಯ ಪ್ರತೀಕ ಪರಿಸರ ಸಂರಕ್ಷಣೆ: ಕೆ.ವಿ. ಪ್ರಭಾಕರ್

KannadaprabhaNewsNetwork |  
Published : Jul 15, 2024, 01:47 AM IST
ವನಮಹೋತ್ಸವ ಕಾರ್ಯಕ್ರಮ  | Kannada Prabha

ಸಾರಾಂಶ

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ನಗರದ ಕದ್ರಿ ಪಾರ್ಕ್‌ನಲ್ಲಿ ಶನಿವಾರ ‘ಹಸಿರೇ ಉಸಿರು’ ವನಮಹೋತ್ಸವ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಪರಿಸರ ಸಂರಕ್ಷಣೆ ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕವಾಗಿದೆ. ಪತ್ರಕರ್ತರ ಸಂಘಟನೆಗಳು ನಿರ್ದಿಷ್ಟ ಚಟುವಟಿಕೆಗಳಿಗೆ ಸೀಮಿತವಾಗದೆ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನತೆಗೆ ನೆರವಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ನಗರದ ಕದ್ರಿ ಪಾರ್ಕ್‌ನಲ್ಲಿ ಶನಿವಾರ ನಡೆದ ‘ಹಸಿರೇ ಉಸಿರು’ ವನಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಗ್ರಾಮ ವಾಸ್ತವ್ಯ, ಬ್ರ್ಯಾಂಡ್‌ ಮಂಗಳೂರಿನಂತಹ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯಕ್ಕೆ ಮಾದರಿಯಾಗಿದೆ ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಪತ್ರಕರ್ತರು ಪರಿಸರದ ಬಗ್ಗೆ ಕಾಳಜಿ ವಹಿಸಿ ಗಿಡಗಳನ್ನು ನೆಟ್ಟಿರುವುದು ಶ್ಲಾಘನೀಯ ಎಂದರು.

ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ದ.ಕ.ವಾರ್ತಾ ಇಲಾಖೆಯ ಉಪ ನಿರ್ದೇಶಕ ಖಾದರ್ ಶಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಮಂಗಳೂರು ಮಹಾನಗರ ಪಾಲಿಕೆ ಜಂಟಿ ಅಯುಕ್ತ ಚಂದ್ರಶೇಖರಯ್ಯ, ಕಲಬುರಗಿ ಆಕಾಶವಾಣಿಯ ನಿವೃತ್ತ ನಿಲಯ ನಿರ್ದೇಶಕ ಸದಾನಂದ ಪೆರ್ಲ ಮುಖ್ಯ ಅತಿಥಿಗಳಾಗಿದ್ದರು.

ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್.ಬಿ.ಎನ್, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪ್ರೆಸ್ ಕ್ಲಬ್ ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ, ಹಿರಿಯ ಪತ್ರಕರ್ತರಾದ ರಮೇಶ್ ಪೆರ್ಲ, ಪದ್ಮನಾಭ ಗಟ್ಟಿ ಮತ್ತಿತರರಿದ್ದರು.

ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ