ಕೆ.ಗುಡಿಯಲ್ಲಿ 69ನೇ ವನ್ಯಜೀವಿ ಸಪ್ತಾಹ ದಿನದ ಸಮಾರೋಪ ಸಮಾರಂಭದಲ್ಲಿ ಡಿಸಿಎಫ್ ದೀಪಾ ಜೆ ಕಂಟ್ರಾಕ್ಟರ್ ಕನ್ನಡಪ್ರಭ ವಾರ್ತೆ ಚಾಮರಾಜನಗರ ಗಿರಿಜನ ಬಂಧುಗಳು ಹಾಗೂ ಕಾಡಂಚಿನ ಭಾಗದ ಜನರಿಗೆ ಪರಿಸರ ಸಂರಕ್ಷಣೆ ಜಾಗೃತಿ ಮೂಡಿಸಿದಾಗ ಮಾತ್ರ ಕಾಡಿನ ಬೆಳವಣಿಗೆ ಸಾಧ್ಯವಾಗುತ್ತದೆ ಎಂದರು ಎಂದು ಬಿಆರ್‌ಟಿ ಡಿಸಿಎಫ್ ದೀಪಾ ಜೆ ಕಂಟ್ರಾಕ್ಟರ್ ತಿಳಿಸಿದರು. ಬಿಆರ್ ಟಿ ಹುಲಿ ಸಂರಕ್ಷಿತ ಪ್ರದೇಶದ ವತಿಯಿಂದ ಕೆ.ಗುಡಿಯಲ್ಲಿ ಹಮ್ಮಿಕೊಂಡಿದ್ದ 69ನೇ ವನ್ಯಜೀವಿ ಸಪ್ತಾಹ ದಿನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚಾಮರಾಜನಗರ ಜಿಲ್ಲೆಯು ಹುಲಿ, ಆನೆ ಗಣತಿಯಲ್ಲಿ ಪ್ರಮುಖ ಸ್ಥಾನವನ್ನು ಪಡೆದಿದೆ. ಇದು ಕೇವಲ ಯಾವುದೇ ಒಬ್ಬರಿಂದ ಸಾಧ್ಯವಾಗದು. ಇದು ಸ್ಥಳೀಯ ಹಾಗೂ ಸಿಬ್ಬಂದಿ ಕಾರ್ಯವೈಖರಿಯಿಂದ ಸಾಧ್ಯವಾಗಿದೆ. ರೈತರು, ಗಿರಿಜನರು ಹಾಗೂ ಮಾಧ್ಯಮಮಿತ್ರರ ಸಂಪೂರ್ಣ ಬೆಂಬಲದಿಂದ ಉತ್ತಮ ಕಾರ್ಯಕ್ರಮಗಳ ನಡೆಸಲು ಸಾಧ್ಯವಾಗುತ್ತದೆ. 69ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಜನರಿಗೆ ಅರಣ್ಯ ಹಾಗೂ ಜೀವ ವೈವಿಧ್ಯತೆ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಯಶಸ್ಸು ಕಂಡಿದೆ ಎಂದರು. ಕಾರ್ಯಕ್ರಮದಲ್ಲಿ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಮಲ್ಲೇಶಪ್ಪ ಮಾತನಾಡಿ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜನರಿಗೆ ವನ್ಯಜೀವಿಗಳ ಮಹತ್ವವನ್ನು ತಿಳಿಸುವ ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ಈ ವರ್ಷದ ವನ್ಯಜೀವಿ ಸಪ್ತಾಹ ದಿನವನ್ನು ಆಚರಿಸಿದೆ. ಈ ರೀತಿಯ ಕಾರ್ಯಕ್ರಮಗಳಿಂದ ಸಾರ್ವಜನಿಕರಿಗೆ ಅರಣ್ಯ ಜೀವಸಂಕುಲಗಳ ಬಗ್ಗೆ ಅರಿವು ಹೆಚ್ಚಾಗುತ್ತದೆ. ಬಸವರಾಜೇಂದ್ರ ಆಸ್ಪತ್ರೆಯ ವೈದ್ಯಾಧಿಕಾರಿ ಶ್ವೇತಾ ಅವರು ಮಾತನಾಡಿ ಪ್ರಕೃತಿಯನ್ನು ಎಲ್ಲರೂ ಗೌರವಿಸಬೇಕು. ಪ್ರಕೃತಿ ಜೊತೆಗೆ ಬೆಳೆಯುವಂತಾಗಬೇಕು. ಯಾರಿಗೂ ತೊಂದರೇ ನೀಡದಂತೆ ಬದುಕಬೇಕು. ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿರುವುದು ತುಂಬಾ ಒಳ್ಳೇಯ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಸ್ಪಂದಿಸಿದ ಸರ್ವರಿಗೂ ಒಳ್ಳೇಯದಾಗಲಿ ಎಂದು ನುಡಿದರು. 69ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಏರ್ಪಡಿಸಲಾಗಿದ್ದ ಚಿತ್ರಕಲೆ, ಮ್ಯಾರಾಥಾನ್, ಆನ್‌ಲೈನ್ ಕ್ವಿಜ್, ಪೋಟೋಗ್ರಫಿ ವಿಜೇತರಿಗೆ ಬಹುಮಾನ ಪ್ರಮಾಣ ಪತ್ರ ಮತ್ತು ಸ್ಮರಣಿಕೆ ನೀಡಲಾಯಿತು. ನಂತರ ಗೊರುಕನ ನೃತ್ಯದ ಮೂಲಕ ಸ್ಥಳೀಯರು ಎಲ್ಲರ ಗಮನ ಸೆಳೆದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್ ಹಾಗೂ ವಲಯ ಅರಣ್ಯ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು. ಬಿಆರ್ ಟಿ ಹುಲಿ ಸಂರಕ್ಷಿತ ಪ್ರದೇಶದ ವತಿಯಿಂದ ಕೆ.ಗುಡಿಯಲ್ಲಿ ಹಮ್ಮಿಕೊಂಡಿದ್ದ 69ನೇ ವನ್ಯಜೀವಿ ಸಪ್ತಾಹ ದಿನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಡಿಸಿಎಫ್ ದೀಪಾ ಜೆ ಕಂಟ್ರಾಕ್ಟರ್ ಮಾತನಾಡಿದರು. ಬಿಆರ್ ಟಿ ಹುಲಿ ಸಂರಕ್ಷಿತ ಪ್ರದೇಶದ ವತಿಯಿಂದ ಕೆ.ಗುಡಿಯಲ್ಲಿ ಹಮ್ಮಿಕೊಂಡಿದ್ದ 69ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ನಡೆದ ಛಾಯಚಿತ್ರ ಪ್ರದರ್ಶನದಲ್ಲಿ ವಿಜೇತರಾದ ಛಾಯಗ್ರಾಹಕ ಚರಣ್ ಬಿಳಿಗಿರಿ ಬಹುಮಾನ ಸ್ವೀಕರಿಸಿದರು.