ಕುಶಾಲನಗರ: ನದಿ ಪರಿಸರ ಸಂರಕ್ಷಣೆ ಬಗ್ಗೆ ಗಮನಹರಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು ಕುಶಾಲನಗರ ತಾಲೂಕು ತಹಸಿಲ್ದಾರ್ ಕಿರಣ್ ಜಿ. ಗೌರಯ್ಯ ಹೇಳಿದರು. ಕುಶಾಲನಗರ ಕಾವೇರಿ ಮಹಾ ಆರತಿ ಬಳಗ ಮತ್ತು ನಮಾಮಿ ಕಾವೇರಿ ಆಶ್ರಯದಲ್ಲಿ ನಡೆದ 186ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕ ವಿಠ್ಠಲ್ ಸಾಲಿಯಾನ್ ಮಾತನಾಡಿ, ಯೋಜನೆಯ ಸದಸ್ಯರು ಕಾರ್ಯಕರ್ತರು ಧಾರ್ಮಿಕ ಮತ್ತು ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಅಭಿಯಾನದಲ್ಲಿ ಕೆಲವು ವರ್ಷಗಳಿಂದ ಪಾಲ್ಗೊಳ್ಳುತ್ತಿದ್ದು, ಸ್ವಚ್ಛ ಕಾವೇರಿಯ ಕಾರ್ಯಕ್ರಮಗಳು, ಚಟುವಟಿಕೆಗಳು ನಿರಂತರವಾಗಿ ಮುಂದುವರಿಯಲಿದೆ ಎಂದರು.
ಸೇವಾ ನಿವೃತ್ತಿ ಹೊಂದಿದ ತಾಲೂಕು ತಹಸೀಲ್ದಾರ್ ಕಿರಣ್ ಜಿ. ಗೌರಯ್ಯ ಮತ್ತು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಜಿಲ್ಲಾ ನಿರ್ದೇಶಕ ವಿಠ್ಠಲ್ ಸಾಲಿಯಾನ್ ಅವರನ್ನು ಆರತಿ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್, ಕಾವೇರಿ ರಿವರ್ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮಂಡೆಪಂಡ ಬೋಸ್ ಮೊಣ್ಣಪ್ಪ, ಉಪಾಧ್ಯಕ್ಷ ಡಿ.ಆರ್. ಸೋಮಶೇಖರ್, ಕಾವೇರಿ ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಧರಣಿ ಸೋಮಯ್ಯ, ಧರ್ಮಸ್ಥಳ ಯೋಜನೆಯ ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ಸೇವಾ ಪ್ರತಿನಿಧಿ ಜಯಲಕ್ಷ್ಮಿ, ನಿರ್ಮಲ ಮತ್ತಿತರರು ಇದ್ದರು.ಹುಣ್ಣಿಮೆ ಅಂಗವಾಗಿ ಕುಶಾಲನಗರ ಕೊಪ್ಪ ಗಡಿ ಭಾಗದ ಕಾವೇರಿ ಪ್ರತಿಮೆಗೆ ಅಭಿಷೇಕ ಮತ್ತು ಆರತಿ ಕಾರ್ಯಕ್ರಮ ಜರುಗಿದವು. ಅರ್ಚಕರಾದ ಪುರುಷೋತ್ತಮ ಭಟ್ ಪೂಜೆ ನೆರವೇರಿಸಿದರು. ಭಕ್ತಾದಿಗಳಿಗೆ ಪ್ರಸಾದ ಮತ್ತು ಅನ್ನದಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಆಯೋಜಕರಾದ ರವೀಂದ್ರ ಪ್ರಸಾದ್, ಬಬಿಂದ್ರ ಪ್ರಸಾದ್, ವಿಜಯೇಂದ್ರ ಪ್ರಸಾದ್ ಎಸ್ಎಲ್ಎನ್ ವ್ಯವಸ್ಥಾಪಕ ನಿರ್ದೇಶಕ ಸಾತಪ್ಪನ್ ಮತ್ತಿತರರು ಇದ್ದರು.
ಕುಶಾಲನಗರ ಸಾಯಿ ಮಂದಿರದಲ್ಲಿ ಸತ್ಯನಾರಾಯಣ ಪೂಜೆ ಮತ್ತು ವಿಶೇಷ ಆರತಿ ಕಾರ್ಯಕ್ರಮಗಳು ಜರುಗಿದವು.