ಪೊಲೀಸ್ ಠಾಣೆಯಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ
ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಣೆ ಮಾಡಿ ಮುಂದಿನ ಪೀಳಿಗೆಗೆ ನೀಡಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ ಎಂದು ಪಿಎಸ್‌ಐ ರವೀಶ್ ಹೇಳಿದರು.
ಪಟ್ಟಣದ ಜೇಸಿಐ ಬಾಳೆಹೊನ್ನೂರು ಕ್ಲಾಸಿಕ್ ಸಂಸ್ಥೆಯಿಂದ ಪೊಲೀಸ್ ಠಾಣೆಯಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಉತ್ತಮ ಪರಿಸರವಿದ್ದಲ್ಲಿ ಮಾತ್ರ ನಮಗೆ ಉತ್ತಮ ಆರೋಗ್ಯ ದೊರೆಯಲು ಸಾಧ್ಯವಿದೆ. ಪರಿಸರವಿಲ್ಲದಿದ್ದರೆ ಭೂಮಿಯಲ್ಲಿ ಅಸಮತೋಲನ ಉಂಟಾಗಿ ಹತ್ತಾರು ಸಮಸ್ಯೆ ಉದ್ಭವಿಸಲಿದೆ. ಈ ಹಿನ್ನೆಲೆ ಯಲ್ಲಿ ಒಬ್ಬ ವ್ಯಕ್ತಿ ವರ್ಷಕ್ಕೆ ಕನಿಷ್ಟ ಒಂದು ಗಿಡವನ್ನಾದರೂ ನೆಡಬೇಕು ಎಂದರು.ಅರಣ್ಯ ನಾಶದಿಂದ ಸಕಾಲಕ್ಕೆ ಮಳೆ ಬರುತ್ತಿಲ್ಲ. ಭೂಮಿ ತಾಪಮಾನ ಹೆಚ್ಚಾಗುತ್ತಿದೆ. ಊರಿಗೊಂದು ಶಾಲೆ ಮನೆ ಗೊಂದು ಮರ ನೆಡಬೇಕಾದ ಸದುದ್ದೇಶ ಎಲ್ಲರಲ್ಲೂ ಬೆಳೆದು ಬರಬೇಕಾಗಿದೆ. ಮಕ್ಕಳಲ್ಲಿ ಪರಿಸರ ಸಂರಕ್ಷಣೆ ಬಗೆಗೆ ಹೆಚ್ಚಿನ ಅರಿವು ಉಂಟು ಮಾಡುವ ಅವಶ್ಯಕತೆಯಿದೆ. ಪರಿಸರಕ್ಕೆ ಮಾರಕವಾದ ರಾಸಾಯನಿಕ ಗೊಬ್ಬರದ ಬದಲಾಗಿ ನೈಸರ್ಗಿಕ ಗೊಬ್ಬರ ಬಳಸುವುದರಿಂದ ಭೂಮಿಯ ಶಕ್ತಿ ಸರಿಯಾಗಿರಲು ಸಾಧ್ಯವಾಗುತ್ತದೆ ಎಂದರು.
ಜೇಸಿಐ ಪೂರ್ವಾಧ್ಯಕ್ಷ ಸುಧಾಕರ್, ರಿಚರ್ಡ್ ಮಥಾಯಿಸ್, ಸದಸ್ಯರಾದ ಕಿಶೋರ್, ಚೇತನ್‌ಕುಮಾರ್, ಶಾಹಿದ್ ಮತ್ತಿತರರು ಹಾಜರಿದ್ದರು.೦೬ಬಿಹೆಚ್‌ಆರ್ ೧: