ಕನ್ನಡಪ್ರಭ ವಾರ್ತೆ ಮಲ್ಪೆ
ಜನರು ಪರಿಸರದ ಮೇಲೆ ಕಾಳಜಿ ತೋರದಿದ್ದರೆ ಮುಂದೊಂದು ಇಡೀ ಜೀವ ಸಂಕುಲಕ್ಕೆ ಆಪತ್ತು ಎದುರಾಗುವ ಸಾಧ್ಯತೆ ಇದೆ. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಮರ ಗಿಡಗಳನ್ನು ಬೆಳೆಸುವುದರಿಂದ ತಾಪಮಾನ ತಗ್ಗಲು ಸಾಧ್ಯವಿದೆ ಎಂದರು.ಚರ್ಚಿನ ಧರ್ಮಗುರು ಡೆನಿಸ್ ಡೆಸಾ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಪರಿಸರ ಅಸಮತೋಲನದಿಂದಲೇ ಹವಾಮಾನ ವೈಪರಿತ್ಯ ಉಂಟಾಗುತ್ತಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಾದರೆ ಪರಿಸರ ರಕ್ಷಣೆಗೆ ಹೆಚ್ಚಿನ ಮಹತ್ವ ಕೊಡುವ ಅಗತ್ಯವಿದೆ. ಪ್ರತಿಯೊಂದು ಜೀವರಾಶಿಗೆ ಪರಿಸರ ಅತ್ಯಂತ ಅಮೂಲ್ಯ ಕೊಡುಗೆಯಾಗಿದ್ದು ಪರಿಸರದಲ್ಲಿನ ಗಾಳಿ, ನೀರು, ಮಣ್ಣು, ಮರಗಳು ಎಂದೆಂದಿಗೂ ಉಳಿಯಬೇಕು. ಪ್ರತಿಯೊಬ್ಬರೂ ಕೂಡ ಪರಿಸರದ ಮೇಲೆ ಅವಲಂಭಿತರಾಗಿದ್ದು ಅದಕ್ಕಾಗಿ ಪರಿಸರ ಸಂರಕ್ಷಿಸಲು ಮುಂದಾಗಬೇಕು ಎಂದು ಹೇಳಿದರು.ಸಮನ್ವಯ ಸರ್ವ ಧರ್ಮ ಸೌಹಾರ್ದ ಸಮಿತಿ ತೊಟ್ಟಂ ಅಧ್ಯಕ್ಷ ರಮೇಶ್ ತಿಂಗಳಾಯ ಮಾತನಾಡಿ, ಮಕ್ಕಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯತೆ ಇಂದಿನ ದಿನಗಳಲ್ಲಿ ಮುಖ್ಯವಾಗಿ ಆಗಬೇಕಾಗಿದೆ. ಪರಿಸರದಲ್ಲಿ ಕಸದ ಸಮಸ್ಯೆ ಹೆಚ್ಚಾಗುತ್ತಿದ್ದು, ಇದರ ಸೂಕ್ತ ನಿರ್ವಹಣೆ ಬಗ್ಗೆ ಪಂಚಾಯಿತಿಗಳು ಗಮನ ಹರಿಸಬೇಕು. ಇದರೊಂದಿಗೆ ಜನರು ಸಹ ಕಸವನ್ನು ಎಲ್ಲೆಂದರಲ್ಲಿ ಎಸೆಯುವುದನ್ನು ನಿಲ್ಲಿಸಬೇಕು ಎಂದರು.ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಸ್ಟೀವನ್ ಕ್ವಾಡ್ರಸ್ ಪೆರ್ಮುದೆ, ಪರಿಸರ ನಾಶದಿಂದ ಆಗುವ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು.ತೆಂಕನಿಡಿಯೂರು ಮತ್ತು ಬಡಾನಿಡಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೌರ ಕಾರ್ಮಿಕರು ಹಾಗೂ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷೆ ಶೋಭಾ ಡಿ. ನಾಯ್ಕ್, ಬಡಾನಿಡಿಯೂರು ಗ್ರಾಪಂ ಅಧ್ಯಕ್ಷೆ ಯಶೋಧಾ ಆಚಾರ್ಯ, ಪಂಚಾಯತ್ ಕಾರ್ಯದರ್ಶಿ ಗುರುರಾಜ್, ಚರ್ಚಿನ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಸುನೀಲ್ ಫೆರ್ನಾಂಡಿಸ್, ಕಾರ್ಯದರ್ಶಿ ಬ್ಲೆಸಿಲ್ಲಾ ಕ್ರಾಸ್ತಾ, 20 ಆಯೋಗಗಳ ಸಂಯೋಜಕಿ ವನಿತಾ ಫೆರ್ನಾಂಡಿಸ್, ಕಾನ್ವೆಂಟಿನ ಮುಖ್ಯಸ್ಥರಾದ ಸಿಸ್ಟರ್ ಸುಶ್ಮಾ, ಸಮನ್ವಯ ಸರ್ವ ಧರ್ಮ ಸೌಹಾರ್ದ ಸಮಿತಿ ತೊಟ್ಟಂ ಉಪಾಧ್ಯಕ್ಷ ಶಬೀರ್ ಸಾಹೇಬ್, ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ಶರತ್ ಶೆಟ್ಟಿ, ಮೀನಾ ಪಿಂಟೊ, ಯಾದವ ಹಾಗೂ ಇತರರು ಉಪಸ್ಥಿತರಿದ್ದರು.ಸಮನ್ವಯ ಸರ್ವ ಧರ್ಮ ಸೌಹಾರ್ದ ಸಮಿತಿ ತೊಟ್ಟಂ ಕಾರ್ಯದರ್ಶಿ ಲೆಸ್ಲಿ ಆರೋಜಾ ಸ್ವಾಗತಿಸಿದರು. ಪರಿಸರ ಆಯೋಗದ ಸಂಚಾಲಕ ಜೊಸೇಫ್ ಪಿಂಟೊ ವಂದಿಸಿದರು. ಲವೀನಾ ಎ. ಫರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು.