ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಜಿಪಂ ಸಿಇಒ

KannadaprabhaNewsNetwork |  
Published : Jun 06, 2024, 12:32 AM IST
05ಕೆಪಿಆರ್‌ಸಿಆರ್‌ 02:  | Kannada Prabha

ಸಾರಾಂಶ

ಸಮಾಜಕ್ಕೆ ಉತ್ತಮ ಪರಿಸರ ನೀಡಲು ಮುಂದಾಗಬೇಕು. ದಿನದಿನಕ್ಕೆ ಮಳೆಯ ಪ್ರಮಾಣ ಕಡಿಮೆಯಾಗುತ್ತಾ ಬರುತ್ತಿದ್ದು, ವಿದ್ಯಾರ್ಥಿಗಳು ಜಾಗೃತರಾಗಿ ಮರಗಿಡಗಳನ್ನು ಬೆಳೆಸಲು ಮುಂದಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ ಹೇಳಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದ್ದು, ಪರಿಸರ ರಕ್ಷಣೆಗೆ ಪ್ರತಿಯೊಬ್ಬರು ಸಸಿಗಳನ್ನು ನೆಡುವ ಮೂಲಕ ಸಮಾಜಕ್ಕೆ ಉತ್ತಮ ಪರಿಸರವನ್ನು ನೀಡಲು ಮುಂದಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ ಹೇಳಿದರು.

ತಾಲೂಕಿನ ಬಿಜನಾಗೇರಾ ಗ್ರಾಮದ ವ್ಯಾಪ್ತಿಯ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ನೀರೆರೆದು ಅವರು ಮಾತನಾಡಿದರು.ಮನೆಗೊಂದು ಮರ, ಊರಿಗೊಂದು ವನ ಎಂಬ ಮಾತಿನಂತೆ ಪ್ರತಿಯೊಬ್ಬರೂ ಮರಗಿಡವನ್ನು ಬೆಳೆಸುವ ಪ್ರಾಮಾಣಿಕ ಪ್ರಜ್ಞೆ ಮೆರೆಯಬೇಕು ಹಾಗೂ ಈ ಆಧುನಿಕತೆಯ ದಿನಗಳಲ್ಲಿ ಬೆಳೆಯುತ್ತಿರುವ ಜನಸಂಖ್ಯೆಯ ಬೇಡಿಕೆಗಳನ್ನು ಪೂರೈಸಲು ಪರಿಸರ ವಿನಾಶದ ಅಂಚಿಗೆ ತಲುಪಿದೆ. ಇದರಿಂದ ದಿನದಿನಕ್ಕೆ ಮಳೆಯ ಪ್ರಮಾಣ ಕಡಿಮೆಯಾಗುತ್ತಾ ಬರುತ್ತಿದ್ದು, ವಿದ್ಯಾರ್ಥಿಗಳು ಜಾಗೃತರಾಗಿ ಮರಗಿಡಗಳನ್ನು ಬೆಳೆಸಲು ಮುಂದಾಗಬೇಕು ಎಂದರು.

ನಂತರ ಇದೇ ವೇಳೆ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರ ಪ್ರಕಾಶ.ವಿ ಮಾತನಾಡಿದರು. ಯರಗೇರಾ ಗ್ರಾಪಂಯಲ್ಲಿರುವ ಸಾಮಾಜಿಕ ಅರಣ್ಯ ವಿಭಾಗದ ನರ್ಸರಿ ಕ್ಷೇತ್ರಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾ ಅಧಿಕಾರಿಗಳು ಸುರೇಶ ಬಾಬು, ರಾಯಚೂರು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ, ಸಹಾಯಕ ನಿರ್ದೇಶಕರು (ಗ್ರಾ.ಉ) ಹನುಮಂತ, ಸಹಾಯಕ ಸಂರಕ್ಷಣಾ ಅಧಿಕಾರಿ ಬಿರಪ್ಪ, ವಲಯ ಅರಣ್ಯ ಅಧಿಕಾರಿ ನಾಗರಾಜ, ಜಿಲ್ಲಾ ಸಹಾಯಕ ಸಮನ್ವಯ ಅಧಿಕಾರಿ ಮಲ್ಲಮ್ಮ, ಜಿಲ್ಲಾ ಐಇಸಿ ಸಂಯೋಜಕ ವಿಶ್ವನಾಥ, ತಾಂತ್ರಿಕ ಸಂಯೋಜಕ ಸೈಮನ್, ತಾಂತ್ರಿಕ ಸಹಾಯಕ ವಿನೋದ, ಯಲ್ಲೇಶ (ಎಸ್.ಎಫ್), ಶಾಲೆಯ ವಿದ್ಯಾರ್ಥಿಗಳು ಮತ್ತು ಗ್ರಾಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

PREV

Recommended Stories

ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಬ್ಯಾಲೆಟ್‌ ಬಳಕೆಗೆ ಸುಗ್ರೀವಾಜ್ಞೆ ಅಗತ್ಯವಿಲ್ಲ : ಸಂಪುಟದಲ್ಲಿ ಚರ್ಚೆ