ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಹುಸೇನ ಪೆಂಡಾರಿ

KannadaprabhaNewsNetwork |  
Published : Jun 06, 2024, 12:31 AM IST
5ಕೆಪಿಎಲ್21 ಕೊಪ್ಪಳ ತಾಲೂಕಿನ ಲೇಬಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಮನೂರು ಗ್ರಾಮದ ಗೋಮಾಳ ಪ್ರದೇಶದಲ್ಲಿ ವಿಶ್ವ ಪರಿಸರ ದಿನಾಚರಣೆ | Kannada Prabha

ಸಾರಾಂಶ

ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.

ಕನ್ನಡಪ್ರಭ ವಾರ್ತೆ ಕೊಪ್ಪಳ

ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಉಪ ಸರಂಕ್ಷಣಾಧಿಕಾರಿ (ಸಾಮಾಜಿಕ ಅರಣ್ಯ ವಿಭಾಗ) ಹುಸೇನ ಪೆಂಡಾರಿ ಹೇಳಿದ್ದಾರೆ.

ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಬುಧವಾರ ಕೊಪ್ಪಳ ತಾಲೂಕಿನ ಲೇಬಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಮನೂರು ಗ್ರಾಮದ ಗೋಮಾಳ ಪ್ರದೇಶದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪರಿಸರ ಸಮೃದ್ಧ, ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣವಾಗಿರುತ್ತದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ತನಗರಿವಿಲ್ಲದಂತೆ ಪರಿಸರ ಹಾಳು ಮಾಡುತ್ತಿದ್ದಾನೆ. ಇದನ್ನು ಹೇಗಾದರೂ ಮಾಡಿ ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಜೂ. 5ರಂದು ವಿಶ್ವ ಪರಿಸರ ದಿನ ಆಚರಿಸಲಾಗುತ್ತದೆ. ಪರಿಸರದ ಬಗ್ಗೆ ಪ್ರತಿ ಮನುಷ್ಯನಲ್ಲೂ ಜಾಗೃತಿ ಮೂಡಿಸುವುದು ಮತ್ತು ಪರಿಸರವನ್ನು ಹಾಳು ಮಾಡುವುದನ್ನು ತಡೆಯುವುದು ಇದರ ಉದ್ದೇಶವಾಗಿದೆ. ನಮ್ಮ ಪರಿಸರದ ಸಂರಕ್ಷಣೆಗಾಗಿ ನಾವೆಲ್ಲರೂ ಜಾಗೃತಿ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸುವುದು ಅವಶ್ಯವಿದೆ. ನಮ್ಮ ದೈನಂದಿನ ಜೀವನದಲ್ಲಿ ಪರಿಸರಕ್ಕೆ ಸಂಬಂಧಿಸಿದಂತೆ ಕೆಲವೊಂದು ಬದಲಾವಣೆ ಅನುಸರಿಸಬೇಕು ಎಂದು ಹೇಳಿದರು.

ನಂತರ ಗೋಮಾಳ ಪ್ರದೇಶದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ಹೊಂಗೆ, ಅಪಸಿ, ಸಿಹಿ ಹುಣಸೆ, ಸಿಮಾರುಬಾ, ನೆರಳೆ ಸಸಿಗಳು ಸೇರಿದಂತೆ ಒಟ್ಟು 15 ಸಸಿಗಳನ್ನು ನೆಡಲಾಯಿತು.

ಈ ಸಂದರ್ಭ ತಾಲೂಕ ಪಂಚಾಯಿತಿಯ ನರೇಗಾ ಸಹಾಯಕ ನಿರ್ದೇಶಕ ಯಂಕಪ್ಪ, ಸಾಮಾಜಿಕ ವಲಯ ಅರಣ್ಯಧಿಕಾರಿ ಗುರುನಗೌಡ ಪಾಟೀಲ್, ಉಪ ವಲಯ ಅರಣ್ಯಧಿಕಾರಿ ಅಬ್ದು ಸಮಿ, ಜಿಲ್ಲಾ ಐಇಸಿ ಸಂಯೋಜಕ ಶ್ರೀನಿವಾಸ ಚಿತ್ರಗಾರ, ತಾಲೂಕು ಐಇಸಿ ಸಂಯೋಜಕ ದೇವರಾಜ ಪತ್ತಾರ, ತಾಂತ್ರಿಕ ಸಂಯೋಜಕ ಯಮನೂರ, ತಾಂತ್ರಿಕ ಸಹಾಯಕ ಮಲ್ಲಿಕಾರ್ಜುನ ಮೇಗಳಮನಿ, ಅರಣ್ಯ ಇಲಾಖೆಯ ತಾಂತ್ರಿಕ ಸಹಾಯಕಿ ನೇತ್ರಾವತಿ, ಅರಣ್ಯ ರಕ್ಷಕರು, ಸಾಮಾಜಿಕ ಅರಣ್ಯ ಇಲಾಖೆಯ ಸಿಬ್ಬಂದಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೀರ್ಘಾವಧಿ ಸಿಎಂ ಸಂಭ್ರಮಕ್ಕೆ ಗೃಹಲಕ್ಷ್ಮಿ ಹಣ ನೀಡಿದ ಮಹಿಳೆ!
4 ಜಿಲ್ಲೆಗಳಲ್ಲಿ 13 ಸಾವಿರ ಕೇಸ್‌ ಬಾಕಿ : ಸಚಿವ ತರಾಟೆ